ವೀಡಿಯೊ…| ನೇಪಾಳದಲ್ಲಿ ಜನರ ಆಕ್ರೋಶಕ್ಕೆ ಹೆದರಿ ಸೇನಾ ಹೆಲಿಕಾಪ್ಟರ್‌ ಹಗ್ಗಕ್ಕೆ ಜೋತು ಬಿದ್ದು ಸಚಿವರು-ಕುಟುಂಬಸ್ಥರ ಪಲಾಯನ…!

ಹಿಂಸಾಚಾರ ಪೀಡಿತ ನೇಪಾಳದಿಂದ ಹೊರಹೊಮ್ಮಿದ ಕೆಲವು ವೀಡಿಯೊ ದೃಶ್ಯಗಳಲ್ಲಿ, ಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡ ಪಲಾಯನ ಮಾಡಲು ಸೇನಾ ಹೆಲಿಕಾಪ್ಟರ್‌ನ ರಕ್ಷಣಾ ಜೋಲಿ ಹಿಡಿದುಕೊಂಡು ನೇತಾಡಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ಅಲ್ಪಾವಧಿಯ ನಿಷೇಧವು ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದ್ದು, ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿ ಸುರಕ್ಷಿತ … Continued

ವೀಡಿಯೊ..| ಮತ್ತೊಂದು ಹೆಲಿಕಾಪ್ಟರ್‌ ಮೂಲಕ ಏರ್‌ ಲಿಫ್ಟ್‌ ಮಾಡುತ್ತಿದ್ದಾಗ ನದಿಗೆ ಬಿದ್ದ ಹೆಲಿಕಾಪ್ಟರ್‌

ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ವೇಳೆ ಹಾನಿಗೊಳಗಾಗಿದ್ದ ಹೆಲಿಕಾಪ್ಟರ್ ಶನಿವಾರ ಮಂದಾಕಿನಿ ನದಿಯ ಬಳಿ ಪತನಗೊಂಡಿತ್ತು. ರಿಪೇರಿಗಾಗಿ ಮತ್ತೊಂದು ಹೆಲಿಕಾಪ್ಟರ್ ಮೂಲಕ ಗೌಚಾರ್ ಏರ್‌ಸ್ಟ್ರಿಪ್‌ಗೆ ಏರ್‌ ಲಿಫ್ಟ್‌ ಮಾಡುವಾಗ ಹೆಲಿಕಾಪ್ಟರ್ ಥಾರು ಕ್ಯಾಂಪ್ ಬಳಿ ಬಿದ್ದಿದೆ. ಯಾರಿಗೂ ಯಾವುದೇ ಗಾಯಗಳು ಅಥವಾ ಸಾವು ನೋವುಗಳು ವರದಿಯಾಗಿಲ್ಲ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೇದಾರನಾಥ … Continued

ವೀಡಿಯೊ…| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

ರಾಯಗಢ: ಶಿವಸೇನೆ ಉಪನಾಯಕಿ ಸುಷ್ಮಾ ಅಂಧಾರೆಯನ್ನು ಕರೆದುಕೊಂಡು ಬರಲು ಹೊರಟಿದ್ದ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಠಾತ್ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಅಂಧಾರೆ ಹಂಚಿಕೊಂಡ ವೀಡಿಯೊ ದೃಶ್ಯಾವಳಿ ಪ್ರಕಾರ, ಹೆಲಿಕಾಪ್ಟರ್ ಅಪರಿಚಿತ ಸ್ಥಳದಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದೆ ಮತ್ತು ಇದ್ದಕ್ಕಿದ್ದಂತೆ ಅದು ತಿರುಗಲು ಪ್ರಾರಂಭಿಸಿದೆ. ನಂತರ ಸಮತೋಲನವನ್ನು ಕಳೆದುಕೊಂಡು ತೆರೆದ ಮೈದಾನದಲ್ಲಿ ಧೂಳಿನ … Continued

ವೀಡಿಯೊ…| ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಹೆಲಿಕಾಪ್ಟರ್ ಹತ್ತುವಾಗ ಬಿದ್ದಿದ್ದಾರೆ. ಆರಂಭಿಕ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಪಶ್ಚಿಮ ಬರ್ಧಮಾನದ ದುರ್ಗಾಪುರದಲ್ಲಿ ಹೆಲಿಕಾಪ್ಟರ್‌ ಏರಿ ಆಸನದಲ್ಲಿ ಕುಳಿತುಕೊಳ್ಳುವಾಗ ಜಾರಿ ಬಿದ್ದಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರ ಭದ್ರತಾ ಸಿಬ್ಬಂದಿ ಅವರಿಗೆ ಮೇಲೇಳಲು ಸಹಾಯ ಮಾಡಿದ್ದಾರೆ ಎಂದು ವರದಿಯಾಗಿದೆ. … Continued

ಸಿಎಂ ಬೊಮ್ಮಾಯಿ ಇದ್ದ ಹೆಲಿಕಾಪ್ಟರ್‌ ಲ್ಯಾಂಡ್‌ ಆದ ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಕೆಲಕಾಲ ಆತಂಕ

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕಾಪ್ಟರ್‌ ಹಾರಾಟ ನಡೆಸುವ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕ ಸೃಷ್ಟಿ ಮಾಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ. ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೋಗುವ ಸಲುವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಉಡುಪಿ ಜಿಲ್ಲೆಯ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ಗೆ ಬಂದಿದ್ದರು. ಅಲ್ಲಿಂದ ಕೊಲ್ಲೂರಿಗೆ ಹೋಗಲು ಅಲ್ಲಿಂದ ನಿರ್ಗಮಿಸಿದ ಬಳಿಕ ಹೆಲಿಪ್ಯಾಡ್‌ … Continued

ಹೆಲಿಕಾಪ್ಟರ್‌ನಿಂದ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ: ಅಫ್ಘಾನ್ ಪತ್ರಕರ್ತ

ಕಾಬೂಲ್: ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದ ಮೇಲೆ ಗಸ್ತು ತಿರುಗುತ್ತಿದ್ದ ಅಮೆರಿಕಾ ನಿರ್ಮಿತ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ನಲ್ಲಿ ನೇತಾಡಿದ್ದು ಧ್ವಜ ಸ್ಥಾಪಕ ವ್ಯಕ್ತಿ ಹೊರತು ಮೃತದೇಹವಲ್ಲ ಎಂದು ಅಫ್ಘಾನ್ ಪತ್ರಕರ್ತ ಸ್ಪಷ್ಟಪಡಿಸಿದ್ದಾರೆ. ಹೆಲಿಕಾಪ್ಟರ್ ನಲ್ಲಿ ವ್ಯಕ್ತಿಯೋರ್ವ ನೇತಾಡುತ್ತಿದ್ದ ವಿಡಿಯೋ ತುಣುಕು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆದರೆ, ಆ ವ್ಯಕ್ತಿ ಸತ್ತಿದ್ದಾನೋ ಅಥವಾ ಬದುಕಿದ್ದಾನೋ … Continued

ದಿಢೀರ್‌ ಬೆಳವಣಿಗೆಯಲ್ಲಿ ಹೆಲಿಕ್ಯಾಪ್ಟರಿನಲ್ಲಿ ಬಿಎಸ್‌ವೈ ಮನೆಗೆ ಬಂದ ಸಚಿವ ಆನಂದ ಸಿಂಗ್‌..!

ಯಾದಗಿರಿ: ದಿಢೀರ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂದು (ಬುಧವಾರ) ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ ( ರಾಜುಗೌಡ) ಅವರು ಹೊಸಪೇಟೆಗೆ ತೆರಳಿ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿಗೆ ತೆರಳಿದ್ದು, ಸದ್ಯ ಮಾಜಿ ಮುಖ್ಯಮಂತ್ರಿ ನಿವಾಸದಲ್ಲಿದ್ದಾರೆ. ಬೆಂಗಳೂರಿಗೆ ಹೋಗುವ ಮೊದಲು ಅವರು ಹೊಸಪೇಟೆಯಲ್ಲಿ ಸಚಿವ ಆನಂದ … Continued