ರಾಜ್ಯದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: 5, 8ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶುಕ್ರವಾರ ಅನುಮತಿ ನೀಡಿದ್ದು, ಮಾರ್ಚ್ 25 (ಸೋಮವಾರ) ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ … Continued

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ : ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದಕ್ಕೆ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ. ಬಿಜೆಪಿ ಸರ್ಕಾರದ … Continued

ಸಿಎಂ ಸಿದ್ದರಾಮಯ್ಯ ಸೇರಿ 4 ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್ : ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಸೂಚನೆ

ಬೆಂಗಳೂರು: 2022ರ ಏಪ್ರಿಲ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರಿಗೆ ಕರ್ನಾಟಕ ಹೈಕೋರ್ಟ್ 10,000 ರೂಪಾಯಿ ದಂಡ ವಿಧಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ, ರಾಮಲಿಂಗಾರೆಡ್ಡಿ ಹಾಗೂ ಕರ್ನಾಟಕದ … Continued

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ಸಾಮೂಹಿಕ ಜವಾಬ್ದಾರಿ ನಿಗದಿಗೆ ಹೈಕೋರ್ಟ್ ಸಲಹೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದ ಮಹಿಳೆಯರ ವಿವಸ್ತ್ರ ಪ್ರಕರಣದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಮೌಖಿಕವಾಗಿ ಸಲಹೆ ನೀಡಿದೆ. ಅಲ್ಲದೆ, ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಮಹಿಳೆಯ ವಿವಸ್ತ್ರ ಘಟನೆ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಅರ್ಜಿಯ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿದ್ದನ್ನು ಪ್ರಶ್ನಿಸಿದ ಯತ್ನಾಳ ಅರ್ಜಿ ವಿಚಾರಣೆ ಜನವರಿ 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ. ಅರ್ಜಿ … Continued

ವಿಎಚ್‌ಪಿ ಮುಖಂಡನ ಮೇಲೆ ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು … Continued

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ : ಶಾಸಕ ಜಮೀರ್‌ ಅಹಮದ್ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಅಹಮದ್ ಖಾನ್ ಸಲ್ಲಿಸಿದ್ದ … Continued

ಚಿಕ್ಕಮಗಳೂರು : ದತ್ತ ಪೀಠದಲ್ಲಿ ಡಿಸೆಂಬರ್ 6ರಿಂದ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6ರಿಂದ ಮೂರು ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಹೈಕೋರ್ಟ್ ಬುಧವಾರ ಅನುಮತಿಸಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ … Continued

ಬಾಬಾ ಬುಡನ್‌ಗಿರಿ-ದತ್ತಾತ್ರೇಯ ಪೀಠ: ಪ್ರತಿ ಆಕ್ಷೇಪಣೆಗೆ ರಾಜ್ಯ ಸರ್ಕಾರಕ್ಕೆ ಮೂರು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಹಿಂದೂ ಧರ್ಮಗಳು ಹಾಗೂ ಇಸ್ಲಾಂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಎತ್ತಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಮೂರು ವಾರಗಳ ಕಾಲಾವಕಾಶ ನೀಡಿದೆ … Continued

ಮಠದ ಚೆಕ್‌, ದಾಖಲೆಗಳಿಗೆ ಸಹಿ: ಮುರುಘಾ ಶರಣರ ವಕೀಲರು ಸಲ್ಲಿಸಿದ ಮೆಮೊಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಜೈಲಿನಿಂದಲೇ ಮಠದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡಬೇಕು ಎಂಬ ಕೋರಿಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಮೆಮೊ ಹಾಗೂ ಜೊತೆಗಿನ ದಾಖಲೆಗಳ ಕುರಿತು ಕರ್ನಾಟಕ ಹೈಕೋರ್ಟ್‌ … Continued