ಡಿ ಕೆ ಶಿವಕುಮಾರ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕರ್ನಾಟಕ ಹೈಕೋರ್ಟ್ಕಾಲಾವಕಾಶ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಸಲ್ಲಿಸಿರುವ … Continued

ಸಿಇಟಿಗೆ ಪಿಯು ಅಂಕ ವಿವಾದ; ಮುಂದಿನ ವಿಚಾರಣೆ ವರೆಗೆ ಕೌನ್ಸೆಲಿಂಗ್ ಆರಂಭಿಸುವುದಿಲ್ಲ ಎಂದು ಹೈಕೋರ್ಟಿಗೆ ತಿಳಿಸಿದ ಸರ್ಕಾರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಸಂಬಂಧಿಸಿದ ಕೌನ್ಸೆಲಿಂಗ್‌ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಈಗ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಮುಂದಿನ ವಿಚಾರಣೆಯ ವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಿಸುವುದಿಲ್ಲ” ಎಂದು ರಾಜ್ಯ ಸರ್ಕಾರವು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ … Continued

ವಾರೆಂಟ್‌ ಜಾರಿಯಾಗಿದ್ದ ವ್ಯಕ್ತಿ ಬಿಟ್ಟು ಮತ್ತೊಬ್ಬರನ್ನು ಬಂಧಿಸಿದ ಪೊಲೀಸರು; ₹5 ಲಕ್ಷ ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು: ವಾರೆಂಟ್ ಜಾರಿಯಾಗಿದ್ದ ವ್ಯಕ್ತಿಗೆ ಬದಲಾಗಿ ಬೇರೊಬ್ಬ ವ್ಯಕ್ತಿಯನ್ನು ಬಂಧಿಸುವ ಮೂಲಕ ಆ ವ್ಯಕ್ತಿಯ ಮೂಲಭೂತ ಹಕ್ಕು ಮತ್ತು ಘನತೆಗೆ ಚ್ಯುತಿ ಉಂಟು ಮಾಡಿದ್ದಕ್ಕಾಗಿ ಆ ವ್ಯಕ್ತಿಗೆ ₹5 ಲಕ್ಷ ಪರಿಹಾರವನ್ನು ಒಂದು ತಿಂಗಳಲ್ಲಿ ಪಾವತಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಆದೇಶಿಸಿದೆ. ಬೆಂಗಳೂರಿನ ಶ್ರೀನಗರದ ನಿವಾಸಿ ಎನ್‌ ನಿಂಗರಾಜು ಸಲ್ಲಿಸಿದ್ದ ಅರ್ಜಿಯನ್ನು … Continued

ಎಫ್‌ಐಆರ್ ದಾಖಲಾಗದಿದ್ದರೂ, ಶಿಕ್ಷೆಗೆ ಗುರಿಯಾಗದಿದ್ದರೂ ರೌಡಿ ಶೀಟ್ ತೆರೆಯಬಹುದು ಎಂದ ಹೈಕೋರ್ಟ್‌

ಬೆಂಗಳೂರು: ಅಪರಾಧ ಚುಟವಟಿಕೆಯಲ್ಲಿ ಸಕ್ರಿಯಾಗಿರುವ ರೌಡಿಗಳ ವಿರುದ್ಧ ರೌಡಿ ಶೀಟ್‌ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಾರ್ಗಸೂಚಿಗಳನ್ನು ರಚಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಮತ್ತು ಯಾವುದೇ ಅಪರಾಧ ಕೃತ್ಯದಲ್ಲಿ ಆರೋಪಿಯಾಗದಿದ್ದರೂ ಪೊಲೀಸರು ರೌಡಿ ಶೀಟ್‌ ತೆಗೆದಿದ್ದಾರೆ. ಇದು ಮೂಲಭೂತ ಹಕ್ಕಿನ ಚ್ಯುತಿಯಾಗಿದೆ. ಆದ್ದರಿಂದ ತಮ್ಮ ವಿರುದ್ಧದ ರೌಡಿ ಶೀಟ್ ರದ್ದುಪಡಿಸಬೇಕು … Continued

ಬಿಬಿಎಂಪಿ ರಸ್ತೆ ಗುಂಡಿ ಪ್ರಕರಣ: ಪ್ರಧಾನ ಎಂಜಿನಿಯರ್‌ ವಿರುದ್ಧ ಜಾಮೀನು ಸಹಿತ ವಾರೆಂಟ್‌ ಹೊರಡಿಸಿದ ಹೈಕೋರ್ಟ್‌

ಬೆಂಗಳೂರು: ನ್ಯಾಯಾಲಯದ ಆದೇಶ ಪಾಲಿಸಲು ವಿಫಲವಾಗಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರಧಾನ ಎಂಜಿನಿಯರ್‌ ವಿರುದ್ಧ ಮಂಗಳವಾರ ಜಾಮೀನು ಸಹಿತ ವಾರೆಂಟ್‌ ಹೊರಡಿಸಿರುವ ಕರ್ನಾಟಕ ಹೈಕೋರ್ಟ್‌, ಅಧಿಕಾರಿಯನ್ನು ವಶಕ್ಕೆ ಪಡೆದು ಗುರುವಾರ (ಫೆ. 17) ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿ ಮಹತ್ವದ ಆದೇಶ ಮಾಡಿದೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ರಸ್ತೆಗಳ … Continued

ಕೆ ಸಿ ವ್ಯಾಲಿ- ಎಚ್‌ ಎನ್‌ ವ್ಯಾಲಿ: ಪರಿಸರ ಪರಿಣಾಮ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಿದ ಹೈಕೋರ್ಟ್‌

ಬೆಂಗಳೂರು: ಕೋರಮಂಗಲ ಮತ್ತು ಚಲ್ಲಘಟ್ಟ ವ್ಯಾಲಿ (ಕೆ ಸಿ ವ್ಯಾಲಿ) ಮತ್ತು ಹೆಬ್ಬಾಳ ಮತ್ತು ನಾಗವಾರ ವ್ಯಾಲಿಗೆ (ಎಚ್‌ ಎನ್‌ ವ್ಯಾಲಿ) ಸಂಬಂಧಿಸಿದಂತೆ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಸಿದ್ಧಪಡಿಸಿರುವ ಪರಿಸರ ಪರಿಣಾಮ ಪರಿಶೀಲನಾ ವರದಿ ಸಲ್ಲಿಸಲು ಮಂಗಳವಾರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಆದೇಶಿಸಿದೆ. ಕೆ ಸಿ ವ್ಯಾಲಿ ಮತ್ತು ಎಚ್‌ ಎನ್‌ ವ್ಯಾಲಿ … Continued

ರಿವಾಲ್ವರ್ ಪ್ರಕರಣ: ಶಾಸಕ ಸೋಮಶೇಖರ ರೆಡ್ಡಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಬೆಂಗಳೂರು: ಎರಡು ವರ್ಷಗಳಿಗೂ ಹೆಚ್ಚು ಕಾಲ ಪರವಾನಗಿ ನವೀಕರಿಸದೆ ರಿವಾಲ್ವರ್ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಬಳ್ಳಾರಿಯ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ನಿರಾಕರಿಸಿದೆ. ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ … Continued

ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued

ಐಎಂಎ ವಂಚನೆ ಪ್ರಕರಣ: ಸಿಬಿಐ, ಇಡಿ ಜೊತೆ ಸಮನ್ವಯಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಈ ಸಂಬಂಧದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹೂಡಿಕೆದಾರರ ಹಣ … Continued

ಕೊಲ್ಲೂರು ದೇವಾಲಯದ ಅಧ್ಯಕ್ಷರ ಆಯ್ಕೆ ಅಸಿಂಧು ಎಂದ ಹೈಕೋರ್ಟ್

ಬೆಂಗಳೂರು: ಕೊಲ್ಲೂರಿನ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಾಲಯದ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಅವರ ಆಯ್ಕೆಯನ್ನು ರಾಜ್ಯ ಹೈಕೋರ್ಟ್ ಅಸಿಂಧು ಎಂದು ಹೇಳಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್ ಏ.26, 2021ರ ಆಯ್ಕೆ ಪ್ರಕ್ರಿಯೆಗಳನ್ನು ರದ್ದುಗೊಳಿಸಿದ್ದಾರೆ. ಈ ಪ್ರಕ್ರಿಯೆಯ ಮೂಲಕ ಶೆಟ್ಟಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಉಡುಪಿ ಜಿಲ್ಲೆಯ ಗೋಪಾಲಕೃಷ್ಣ ಹಾಗೂ ಮೂವರು … Continued