ಹುಲಿ ಉಗುರು ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ನಟ ಜಗ್ಗೇಶ

ಬೆಂಗಳೂರು : ಹುಲಿ ಉಗುರಿನ ಪೆಂಡೆಂಟ್ ವಿವಾದದ ನಡುವೆ, ರಾಜ್ಯಸಭಾ ಸಂಸದ ಮತ್ತು ನಟ ಜಗ್ಗೇಶ ಅವರು ಅರಣ್ಯ ಇಲಾಖೆ ಅಧಿಕಾರಿಗಳು ನೀಡಿದ ನೋಟಿಸ್‌ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಜಗ್ಗೇಶ ನಿವಾಸದಲ್ಲಿ ನಡೆಸಿದ ಶೋಧದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಜಗ್ಗೇಶ ಅವರು ತಮ್ಮ ಅರ್ಜಿಯಲ್ಲಿ ಅರಣ್ಯಾಧಿಕಾರಿಗಳ ಕಾರ್ಯವೈಖರಿ ಪ್ರಶ್ನಿಸಿದ್ದಾರೆ. ಅಲ್ಲದೆ ತಮಗೆ … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued

ಶಾಸಕ ಡಾ. ಅಶ್ವತ್ಥ ನಾರಾಯಣಗೆ ರಿಲೀಫ್: ಅವರ ವಿರುದ್ಧದ ತನಿಖೆಗೆ 4 ವಾರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : “ಟಿಪ್ಪುವನ್ನು ಉರಿಗೌಡ, ನಂಜೇಗೌಡರು ಮುಗಿಸಿದಂತೆ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು” ಎಂದು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ನಾಲ್ಕು ವಾರ ತನಿಖೆಗೆ ತಡೆ ನೀಡಿ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಆದೇಶಿಸಿದೆ. ಬಿಜೆಪಿ ಶಾಸಕ ಡಾ.ಅಶ್ವತ್ಥ ನಾರಾಯಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಇಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಹೈಕೋರ್ಟ್​​

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ನಾಯಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ತಾನು ಚುನಾವಣೆಗೆ ಸ್ಪರ್ಧಿಸಿದ್ದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ​ ಕುಲಕರ್ಣಿ ಪರ ವಕೀಲರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ 30 … Continued

ಶಾಸಕ ನೆಹರು ಓಲೆಕಾರ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ; ಚುನಾವಣಾ ಹಾದಿ ಸುಗಮ

ಬೆಂಗಳೂರು: ಸ್ವಜನ ಪಕ್ಷಪಾತ ಮತ್ತು ಕ್ರಿಮಿನಲ್‌ ವಂಚನೆ ಪ್ರಕರಣದಲ್ಲಿ ಬಿಜೆಪಿಯ ಹಾವೇರಿ ಶಾಸಕ ನೆಹರು ಓಲೆಕಾರ ಅವರನ್ನು ದೋಷಿ ಎಂದು ತೀರ್ಮಾನಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ ಅವರನ್ನು ಸಲ್ಲಿಸಿದ್ದ ಮಧ್ಯಂತರ … Continued

ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆಯನ್ನು ಹೈಕೋರ್ಟ್‌ ಅನೂರ್ಜಿತಗೊಳಿಸಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿಶಂಕರ ಅವರ ಮಧ್ಯಂತರ ಮನವಿಯನ್ನು ಇದೇ ವೇಳೆ ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳ ವರೆಗೆ ಅಮಾನತಿನಲ್ಲಿರಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಹೊಸಪೇಟೆ-ವಾಸ್ಕೋಡಗಾಮ, ಲೊಂಡಾ-ಮೀರಜ್ ಮಾರ್ಗಗಳಲ್ಲಿ ರೈಲಿನ ವೇಗ ತಗ್ಗಿಸಲು ಮನವಿ: ಅರಣ್ಯ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ದಟ್ಟ ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ಹೊಸಪೇಟೆ-ವಾಸ್ಕೋಡಗಾಮ ಹಾಗೂ ಲೊಂಡಾ-ಮೀರಜ್ ರೈಲು ಮಾರ್ಗಗಳಲ್ಲಿ ರಾತ್ರಿ ವೇಳೆ ರೈಲುಗಳ ವೇಗ ತಗ್ಗಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಅರಣ್ಯ ಇಲಾಖೆಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಬೆಳಗಾವಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ, ಧಾರವಾಡ, ಬೆಳಗಾವಿ, ಹಳಿಯಾಳ ವಿಭಾಗದ ಉಪ ಅರಣ್ಯ … Continued

ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ

ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣದಲ್ಲಿ ಮೊದಲನೇ ಆರೋ‍ಪಿಯಾಗಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಮಾಡಾಳು ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ … Continued

ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಕೋರಿಕೆ ಪರಿಗಣಿಸಿ ರಾಜ್ಯ ಸರ್ಕಾರವು ಅನುಮತಿ ನೀಡಿ ಆದೇಶಿಸಿದೆ. ಈ ಕುರಿತು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಅನುಮತಿ … Continued

ಜಿಪಂ,ತಾಪಂ ಚುನಾವಣೆ:ವಿಸ್ತೃತ ವಿಚಾರಣೆ ಆಗಬೇಕು ಎಂದ ಹೈಕೋರ್ಟ್, ವಿಚಾರಣೆ ಮೇ 23ಕ್ಕೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯಿದೆಗೆ ತಿದ್ದುಪಡಿ ತಂದಿರುವುದಕ್ಕೆ ತಡೆ ನೀಡುವ ವಿಚಾರದಲ್ಲಿ ವಿಸ್ತೃತ ವಿಚಾರಣೆಯ ಅಗತ್ಯವಿದೆ ಎಂದು … Continued