ಹಿಜಾಬ್ ಪ್ರಕರಣ: 10 ದಿನಗಳ ವಿಚಾರಣೆಯ ನಂತರ ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಕಾಯ್ದಿರಿಸಿದೆ. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಹತ್ತು ದಿನಗಳ … Continued

ಹಿಜಾಬ್‌ ಪ್ರಕರಣ: ಸಿಖ್ಖರ ಪೇಟಕ್ಕೆ ಹಿಜಾಬ್‌ ಹೋಲಿಕೆ ತಪ್ಪಾಗುತ್ತದೆ: ಅರ್ಜಿದಾರರಿಗೆ ಹೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಸಿಖ್ಖರ ಪೇಟಕ್ಕೆ ಹಿಜಾಬ್‌ ಹೋಲಿಸುವುದು ತಪ್ಪಾಗುತ್ತದೆ ಎಂದು ಹೇಳಿದೆ. ಸಿಖ್ಖರು ಧರಿಸುವ ಪೇಟಗಳು ಸಿಖ್ ಧರ್ಮದ ಐದು ಕಡ್ಡಾಯ ಅಂಶಗಳ ಭಾಗವಾಗಿದೆ. ಅದನ್ನು ಸುಪ್ರೀಂ ಕೋರ್ಟ್ ಕೂಡ ಗುರುತಿಸಿದೆ ಎಂದು ನ್ಯಾ. ಹೇಮಂತ್ ಗುಪ್ತಾ … Continued

ಹಿಜಾಬ್ ಪ್ರಕರಣ: ಬಟ್ಟೆ ಧರಿಸುವುದು ಮೂಲಭೂತ ಹಕ್ಕಾದರೆ ತೆಗೆಯುವುದೂ ಮೂಲಭೂತ ಹಕ್ಕಾಗುತ್ತದೆಯಲ್ಲವೇ-ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಪ್ರಶ್ನೆ

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧದ ಕುರಿತು ಹೈಕೋರ್ಟ್‌ ಆದೇಶದ ವಿರುದ್ಧದ ಮೇಲ್ಮನವಿ ವಿಚಾರಣೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂವಿಧಾನದ 19ನೇ ವಿಧಿಯಡಿ ಉಡುಗೆ- ತೊಡುಗೆಯನ್ನು ಸಂಪೂರ್ಣ ಮೂಲಭೂತ ಹಕ್ಕು ಎಂದು ಹೇಳಿದರೆ, ಬಟ್ಟೆ ತೆಗೆಯುವುದು ಕೂಡ ಹಕ್ಕಾಗುವ ಅರ್ಹತೆ ಪಡೆಯುತ್ತದೆಯಲ್ಲವೇ ಎಂದು ಸುಪ್ರೀಂ ಕೋರ್ಟ್ ಬುಧವಾರ ಅರ್ಜಿದಾರರನ್ನು ಪ್ರಶ್ನಿಸಿದೆ. ನ್ಯಾ. ಹೇಮಂತ್ … Continued

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಗಳ ವಿಚಾರಣೆ ಮುಂದಿನ ವಾರ ನಡೆಸಲಿರುವ ಸುಪ್ರೀಂಕೋರ್ಟ್‌

ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವುದನ್ನು ನಿಷೇಧಿಸುವ ಶಿಕ್ಷಣ ಸಂಸ್ಥೆಗಳ ಹಕ್ಕು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್‌ ಮುಂದಿನ ವಾರ ವಿಚಾರಣೆ ನಡೆಸಲಿದೆ. ಮೇಲ್ಮನವಿದಾರರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು ಇಂದು, ಬುಧವಾರ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ ಅವರೆದುರು ಪ್ರಕರಣವನ್ನು … Continued

ಹಿಜಾಬ್‌ ಪ್ರಕರಣ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ: ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದ ಸಿಜೆಐ

ನವದೆಹಲಿ: ಕರ್ನಾಟಕದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜುಗಳ ಅಧಿಕಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧದ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಬೇಕೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ವಿ ರಮಣ ಅವರ ಮುಂದೆ ಹಿರಿಯ ವಕೀಲ ದೇವದತ್ತ್ ಕಾಮತ್ … Continued