ಹಿಜಾಬ್ ಪ್ರಕರಣ: ವಿದ್ಯಾರ್ಥಿಗಳು ಮಿನಿ, ಮಿಡಿ ಅಥವಾ ಅವರಿಗೆ ಬೇಕಾದದ್ದು ಧರಿಸಿ ಬರಬಹುದೇ ಎಂದು ಅರ್ಜಿದಾರರಿಗೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ನಿಗದಿತ ಸಮವಸ್ತ್ರ ಇರುವಂತಹ ಸರ್ಕಾರಿ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಸ್ತ್ರಗಳನ್ನು ಧರಿಸಿ ಬರಬಹುದೇ ಎಂದು ಕರ್ನಾಟಕದ ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ನಿಷೇಧಿಸಿದ್ದನ್ನು ಪ್ರಶ್ನಿಸಿದ್ದ ಮೇಲ್ಮನವಿದಾರರನ್ನು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿತು. ಕಾಲೇಜುಗಳಿಗೆ ಸಮವಸ್ತ್ರವನ್ನು ಸೂಚಿಸುವಂತೆ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ಆದೇಶ ಶಿಕ್ಷಣ ಹಕ್ಕನ್ನು ಉಲ್ಲಂಘಿಸುವುದಿಲ್ಲ ಎಂದು ಕೂಡ … Continued

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

ನವದೆಹಲಿ: ಹಿಜಾಬ್ ಇಸ್ಲಾಂ ಧರ್ಮದ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಮತ್ತು ಕಾಲೇಜಿನಲ್ಲಿ ಹಿಜಾಬ್‌ಗೆ ಅನುಮತಿ ನೀಡುವ ಅಧಿಕಾರವನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ಒದಗಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದ ರಾಜ್ಯ ಹೈಕೋರ್ಟ್‌ ತೀರ್ಪನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಭೂತ ಹಕ್ಕುಗಳನ್ನು ಪ್ರತಿಪಾದಿಸಿರುವ ಅಗತ್ಯ … Continued

ಹೈಕೋರ್ಟಿನಲ್ಲಿ ಹಿಜಾಬ್‌ ಪ್ರಕರಣ: ಹಿಜಾಬ್ ಕಡ್ಡಾಯವಲ್ಲ, ಆಯ್ಕೆಯಷ್ಟೇ: ಯಾವುದೇ ಉಡುಪು ಧರಿಸಲು ಮಹಿಳೆಯನ್ನು ಒತ್ತಾಯಿಸಲಾಗದು-ಹೈಕೋರ್ಟ್‌ ಮುಂದೆ ಸರ್ಕಾರದ ವಾದ

ಬೆಂಗಳೂರು: ಹಿಜಾಬ್ ಧರಿಸುವುದನ್ನು ಇಸ್ಲಾಮಿನ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸುವುದು ಮುಸ್ಲಿಂ ಮಹಿಳೆಯರನ್ನು ನಿರ್ದಿಷ್ಟ ಉಡುಪನ್ನು ಧರಿಸಲು ಒತ್ತಾಯಿಸಿದಂತಾಗುತ್ತದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿ ಮುಸ್ಲಿಮ್‌ ವಿದ್ಯಾರ್ಥಿನಿಯರು … Continued

ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಗೆ ಸಂಬಂಧಿಸಿದ ಶಬರಿಮಲೆ ತೀರ್ಪು ಈ ನೆಲದ ಕಾನೂನು: ಹೈಕೋರ್ಟ್‌ ಮುಂದೆ ಹೇಳಿದ  ರಾಜ್ಯ ಸರ್ಕಾರ

ಬೆಂಗಳೂರು: ಹಿಜಾಬ್‌ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಎಂದು ಅರ್ಜಿದಾರರು ವಾದಿಸುವ ಮೂಲಕ ಎಲ್ಲಾ ಮುಸ್ಲಿಮ್‌ ಮಹಿಳೆಯರನ್ನೂ ಒಂದು ನಿರ್ದಿಷ್ಟ ವಸ್ತ್ರ ಸಂಹಿತೆಗೆ ಸೀಮಿತಗೊಳಿಸುವ ದೃಷ್ಟಿ ಹೊಂದಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರವು ಸೋಮವಾರ ತಿಳಿಸಿದೆ. ಹಿಜಾಬ್‌ ಧರಿಸಿ ಕಾಲೇಜಿಗೆ ತೆರಳುವುದನ್ನು ನಿರ್ಬಂಧಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಆದೇಶದ ಹಿನ್ನೆಲೆಯಲ್ಲಿ ತಮ್ಮನ್ನು ಕಾಲೇಜಿಗೆ ಪ್ರವೇಶಿಸಲು … Continued

ಹಿಜಾಬ್‌ ವಿವಾದದ ಮಧ್ಯೆ ರಾಹುಲ್ ಗಾಂಧಿ ಭೇಟಿ ಮಾಡಲಿರುವ ಕರ್ನಾಟಕದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರ ಕೆಂಪುಕೋಟೆಯಲ್ಲಿ ಕೇಸರಿ ಧ್ವಜದ ವಿವಾದಾತ್ಮಕ ಹೇಳಿಕೆಗೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ನಿಂದ ಗದ್ದಲ ನಡೆಯುತ್ತಿದೆ. ಆದರೆ ರಾಜ್ಯಾದ್ಯಂತ ನಡೆಯುತ್ತಿರುವ ರಾಜ್ಯಾದ್ಯಂತ ಹಿಜಾಬ್‌ ವಿವಾದದಲ್ಲಿ ಕಾಂಗ್ರೆಸ್‌ ಯಾವ ನಿಲುವು ತಳೆಯಬೇಕು ಎಂದು ಗೊಂದದಲ್ಲಿದೆ. ಇದರ ಮಧ್ಯೆಯೇ ಕಾಂಗ್ರೆಸ್‌ನ ಕೆಲ … Continued

ಹಿಜಾಬ್‌ ವಿವಾದ: ಕೆಲಸಕ್ಕೆ ರಾಜೀನಾಮೆ ನೀಡಿದ ಕಾಲೇಜ್‌ ಉಪನ್ಯಾಸಕಿ

ತುಮಕೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ತುಮಕೂರು ಅತಿಥಿ ಉಪನ್ಯಾಸಕಿಯೊಬ್ಬರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಚಾಂದಿನಿ ಎಂಬವರು ರಾಜೀನಾಮೆ ನೀಡಿದ ಅತಿಥಿ ಉಪನ್ಯಾಸಕಿ. ತುಮಕೂರಿನ ತಿಪಟೂರು ಮೂಲದ ಚಾಂದಿನಿ ಅವರು ಜೈನ್ ಪಿಯು ಕಾಲೇಜು, ವಿದ್ಯಾವಾಹಿನಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿಜಾಬ್‌ ವಿವಾದ ಉಂಟಾದ ನಂತರ ಕಾಲೇಜು ಆಡಳಿತ ಮಂಡಳಿ ಅವರಿಗೆ ಹಿಜಾಬ್‌ ಧರಿಸಿ … Continued

ಹಿಜಾಬ್ ವಿವಾದ: ಮುಸ್ಲಿಂ ಶಾಸಕರಿಂದ ಸಿಎಂ ಬೊಮ್ಮಾಯಿ ಭೇಟಿ

ಬೆಂಗಳೂರು: ರಾಜ್ಯಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಹಿಜಾಬ್​ ವಿವಾದದ ಬೆನ್ನಲ್ಲೇ ಕಾಂಗ್ರೆಸ್​ ಮುಸ್ಲಿಂ ಶಾಸಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು, ಮಂಗಳವಾಋ ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ಅವರ ರೇಸ್​ಕೋರ್ಸ್​ ನಿವಾಸದಲ್ಲಿ ಭೇಟಿಯಾಗಿದ್ದು, ಹಿಜಾಬ್ ವಿವಾದ ಬಗ್ಗೆ ಚರ್ಚಿಸಿದರು ಹಾಗೂ ಆದಷ್ಟು ಶೀಘ್ರ ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ರಾಜ್ಯ … Continued

ಜಮೀರ್ ಹೇಳಿಕೆಯನ್ನು ಕಾಂಗ್ರೆಸ್‌ ಒಪ್ಪುವುದಿಲ್ಲ, ಅವರು ಕ್ಷಮೆ ಕೇಳಬೇಕು ಕೇಳ್ತೇನೆ:ಡಿಕೆಶಿ

ಬೆಂಗಳೂರು: ಬುರ್ಖಾ ಧರಿಸದ ಕಾರಣಕ್ಕೆ ದೇಶದಲ್ಲಿ ಅತ್ಯಾಚಾರಗಳು ಹೆಚ್ಚಾಗುತ್ತವೆ ಎಂಬ ಜಮೀರ್ ಅಹ್ಮದ್ ಖಾನ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಅವರು ಆ ಮಾತನ್ನು ಹಿಂಪಡೆಯಲು ಹೇಳುತ್ತೇನೆ ಹಾಗೂ ಅವರು ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಯಾರೂ ಮಾತನಾಡಬಾರದು ಎಂದು ಎಂದು ಸೂಚಿಸಿದ್ದೆ. ಆದರೂ … Continued

ಮಹಿಳೆಯರು ಹಿಜಾಬ್, ಪರ್ದಾ ಧರಿಸದಿರುವುದರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣ ಹೆಚ್ಚಾಗ್ತಿದೆ: ಜಮೀರ್ ಅಹ್ಮದ್ ​ಖಾನ್​

ಹುಬ್ಬಳ್ಳಿ : ಹಿಜಾಬ್ ವಿವಾದ ದೇಶಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹಿಜಾಬ್ ಧರಿಸದ ಕಾರಣಕ್ಕೇ ಮಹಿಳೆಯರು ಅತ್ಯಾಚಾರ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾಜಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಯುವತಿಯರ ಸೌಂದರ್ಯ ರಕ್ಷಣೆಗೆ ಬುರ್ಖಾ, ಹಿಜಾಬ್ ಪದ್ಧತಿ ಇದೆ ಎಂದು ಹೇಳಿದ್ದಾರೆ. ಹಿಜಾಬ್ ಎಂದರೆ ಇಸ್ಲಾಂನಲ್ಲಿ ‘ಪರ್ದಾ’, ಮಹಿಳೆಯರು … Continued

ಹಿಜಾಬ್‌ ವಿವಾದ: ಬಿಗಿ ಭದ್ರತೆಯಲ್ಲಿ ರಾಜ್ಯಾದ್ಯಂತ ನಾಳೆ ಪ್ರೌಢಶಾಲೆಗಳು ಆರಂಭ

ಬೆಂಗಳೂರು: ಹಿಜಾಬ್ ವಿವಾದದಿಂದ ಬಂದ್ ಆಗಿದ್ದ ಪ್ರೌಢಶಾಲೆಗಳು ನಾಳೆ, ಸೋಮವಾರದಿಂದ ಆರಂಭವಾಗುತ್ತಿದ್ದು, ಶಾಂತಿಯುತವಾಗಿ ತರಗತಿ ನಡೆಯುವಂತಾಗಲು ಸರ್ಕಾರವು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳ ಆವರಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು-ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, … Continued