ಬೆಂಗಳೂರಿನಲ್ಲೂ ಹಿಜಾಬ್ ವಿವಾದ: ಖಾಸಗಿ ಶಾಲೆಯಲ್ಲಿ ಬಿಗುವಿನ ವಾತಾವರಣ

ಬೆಂಗಳೂರು: ಹಿಜಾಬ್ ವಿವಾದ ಈಗ ರಾಜ್ಯ ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿದೆ. ಹೈಕೋರ್ಟ್ ಮಧ್ಯಂತರ ಆದೇಶದ ಮಧ್ಯೆಯೂ ಚಂದ್ರಾಲೇಔಟ್ ನ ಸರಕಾರಿ ಶಾಲೆಗೆ ಮುಸ್ಲಿಂ ವಿದ್ಯಾರ್ಥಿನಿಯರು ಬುರ್ಖಾ ಹಾಗೂ ಹಿಜಾಬ್ ಧರಿಸಿ ಬಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿರುವಂತ ವಿದ್ಯಾಸಾಗರ್ ಇಂಗ್ಲೀಷ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಇಂದು ಹಿಜಾಬ್ ಧರಿಸಿ ಶಾಲೆಗೆ ಬಂದಿದ್ದಾರೆ. ಮುಖ್ಯ … Continued

ಹಿಜಾಬ್‌ ವಿವಾದ: ತಕ್ಷಣವೇ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣಕ್ಕೆ ಮುಂದಾಗಿ-ಹೊರಟ್ಟಿ

ಹುಬ್ಬಳ್ಳಿ: ಹಿಜಾಬ್‌ ಪ್ರಕರಣದ ಕುರಿತು ನಾವು ನ್ಯಾಯಾಲಯದ ತೀರ್ಪಿನ ಮೇಲೆ ನಂಬಿಕೆಯನ್ನು ಇಡಬೇಕಾಗುತ್ತದೆ. ವಿವಾದದಿಂದ ಮಕ್ಕಳ ಮನಸ್ಸಿನ ಮೇಲೆ ಉಂಟಾಗುವ ದ್ವೇಷ, ಸಿಟ್ಟು ಮನಸ್ಸಿನಲ್ಲಿಯೇ ಉಳಿಯಬಹುದು. ಈ ಬಗ್ಗೆ ಮುಂದಾಲೋಚನೆಯಿಂದ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಂಡು ಶಾಂತಿ ಕಾಪಾಡುವುದು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆಯನ್ನು ಮಾಡುವುದು ಅತ್ಯಂತ ಮುಖ್ಯ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ … Continued

ಹಿಜಾಬ್ ವಿವಾದದಲ್ಲಿ ಲಾಭ ಪಡೆಯಲು ಯತ್ನ: ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಕರ್ನಾಟಕದಲ್ಲಿನ ಬೆಳವಣಿಗೆಗಳಿಗೆ ಸರ್ಕಾರ, ಮುಖ್ಯವಾಗಿ ಬಿಜೆಪಿ ಸದಸ್ಯರು ಜವಾಬ್ದಾರರು ಮತ್ತು ಈಗ ಚುನಾವಣೆ ನಡೆಯುತ್ತಿರುವುದರಿಂದ ಅವರು ಲಾಭ ಪಡೆಯಲು ಅವರು ಬಯಸುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ರಾಜ್ಯಸಭೆಯಲ್ಲಿ ಉಪಸ್ಥಿತರಿದ್ದರು, ನಾವು ಹಣದುಬ್ಬರ, ನಿರುದ್ಯೋಗ, ರೈತರು, ಜಿಡಿಪಿ, ರಾಷ್ಟ್ರೀಯ ಭದ್ರತೆ ಮತ್ತು ಏಕತೆಯ … Continued

ಹಿಜಾಬ್‌ ಅರ್ಜಿ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಉಲ್ಲೇಖ: ಶಾಲಾ ಸಮವಸ್ತ್ರ ಸುತ್ತೋಲೆ ಬಗ್ಗೆ ಶಿಕ್ಷಣ ಸಚಿವರ ಸ್ಪಷ್ಟನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಮಧ್ಯಂತರ  ಪರಿಹಾರ ಒದಗಿಸಲು ಹೈಕೋರ್ಟ್‌ ಯಾವುದೇ ಆದೇಶ ಹೊರಡಿಸದ ಕಾರಣ, ಸರ್ಕಾರದ ಅಧಿಸೂಚನೆ (ಡ್ರೆಸ್ ಕೋಡ್ʼಗೆ ಸಂಬಂಧಿಸಿದಂತೆ) ಜಾರಿಯಲ್ಲಿರುತ್ತದೆ. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಮವಸ್ತ್ರ ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟಿನಿಂದ ತೀರ್ಪು ಪ್ರಕಟವಾದ ತಕ್ಷಣ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ … Continued

ಹಿಜಾಬ್‌ ವಿವಾದ: ವಿಚಾರಣೆ ನಾಳೆ ಮತ್ತೆ ವಿಚಾರಣೆ, ಶಾಂತಿ, ನೆಮ್ಮದಿ ಕಾಪಾಡಲು ವಿದ್ಯಾರ್ಥಿಗಳು, ಜನತೆಗೆ ಕರ್ನಾಟಕ ಹೈಕೋರ್ಟ್‌ ಮನವಿ

ಬೆಂಗಳೂರು: ರಾಜ್ಯದಾದ್ಯಂತ ಹಿಜಾಬ್‌ ವಿವಾದ ತಾರಕಕ್ಕೇರಿರುವ ನಡುವೆಯೇ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿ ಕಾಪಾಡುವಂತೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮನವಿ ಮಾಡಿದೆ. ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರದ ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರು ಸಲ್ಲಿಸಿರುವ ಮೂರು ಪ್ರತ್ಯೇಕ ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌. … Continued

ಹಿಜಾಬ್ ವಿವಾದ : ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ

ಬಾಗಲಕೋಟೆ: ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದ್ದು, ಖಾಸಗಿ ಕಾಲೇಜಿನ ಶಿಕ್ಷಕರೊಬ್ಬರಿಗೆ ಕಿಡಿಗೇಡಿಗಳು ಇಂದು ಸಂಜೆ (ಮಂಗಳವಾರ) ರಾಡ್‍ನಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬನಹಟ್ಟಿಯ ಖಾಸಗಿ ಕಾಲೇಜಿನ ಶಿಕ್ಷಕ ಮಂಜುನಾಥ ನಾಯಕ್ ಅವರ ಮೇಲೆ ಕಿಡಿಗೇಡಿಗಳು ಸಂಜೆ ಹೊತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು … Continued

ಹಿಜಾಬ್‌ ವಿವಾದ ತೀವ್ರ: ರಾಜ್ಯಾದ್ಯಂತ ನಾಳೆಯಿಂದ ಹೈಸ್ಕೂಲ್‌ -ಕಾಲೇಜುಗಳಿಗೆ 3 ದಿನ ರಜೆ ಘೋಷಣೆ

ಬೆಂಗಳೂರು: ನಾಳೆಯಿಂದ ಮೂರು ದಿನ ಹೈಸ್ಕೂಲ್‌, ಪದವಿ ಪೂರ್ವ, ಪದವಿ, ಎಂಜಿನಿಯರ್‌ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 9, 10 ಮತ್ತು 11ರ ವರೆಗೆ ಮೂರು ದಿನ 9, 10ನೇ ತರಗತಿಯ ಪ್ರೌಢ ಶಾಲೆಗಳು ( High School ) ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( PU College ) ನಾಳೆಯಿಂದ 3 ದಿನ … Continued

ಬನಹಟ್ಟಿ :ಹಿಜಾಬ್ ವಿವಾದ, ಕಲ್ಲುತೂರಾಟ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಕುರಿತು ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ವಿವಾದ ಉಂಟಾಗಿದ್ದು, ಇದು ವಿಕೋಪಕ್ಕೆ ಹೋಗಿ ಕಾಲೇಜು ಎದುರಿಗೆ ಕಲ್ಲು ತೂರಾಟ ನಡೆದ ಬಗ್ಗೆ ವರದಿಯಾಗಿದೆ. ಹೀಗಾಗಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳನ್ನು ಮನೆಗೆ ಕಳಿಸಲು ಪ್ರಾಧ್ಯಾಪಕರು ಹರಸಾಹಸ ಪಡುತ್ತಿದ್ದು, ಶಾಲೆ ಹತ್ತಿರ ಜಮಾವಣೆಗೊಂಡ … Continued

ಹಿಜಾಬ್‌ ವಿವಾದ ಶಿವಮೊಗ್ಗದಲ್ಲಿ ತೀವ್ರ: ಕಾಲೇಜಿನ ಹೊರಭಾಗದಲ್ಲಿ ಕಲ್ಲತೂರಾಟ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳ ಹಿಜಾಬ್- ಕೇಸರಿ ಶಾಲು ಗಲಾಟೆ ಈಗ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಶಿವಮೊಗ್ಗದ ಬಾಪೂಜಿನಗರದಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಹೊರಭಾಗದಲ್ಲಿ ಪರಸ್ಪರ ಕಲ್ಲುತೂರಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ  144 ಸೆಕ್ಷನ್ ಅಡಿಯಲ್ಲಿ 2 ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರಿಸ್ಥಿತಿ ಮಿತಿ ಮೀರುವುದನ್ನು ಅರಿತ ಪೊಲೀಸರು ಲಾಠಿ ಬೀಸಿದ್ದಾರೆ. ಎಸ್ ಪಿ ಲಕ್ಷ್ಮಿಪ್ರಸಾದ್‌ … Continued

ಹಿಜಾಬ್‌ ವಿವಾದ: ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಭಂಡಾರಕರ್ಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಂದ ಹೈಕೋರ್ಟ್‌ನಲ್ಲಿ ಅರ್ಜಿ

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳು ಹಿಜಾಬ್‌ ಧರಿಸುವುದಕ್ಕೆ ಸಂಬಂಧಿಸಿದ ವಿವಾದ ತಾರಕ್ಕೇರಿರುವ ನಡುವೆಯೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲೆಯ ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ … Continued