ಹಿಜಾಬ್ ತೀರ್ಪು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಇಬ್ಬರ ಬಂಧನ

ಚೆನ್ನೈ: : ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ವಿಶೇಷ ಪೀಠದ ನ್ಯಾಯಾಧೀಶರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಕೋವೈ ರಹಮತುಲ್ಲಾ ಎಂಬಾತನನ್ನು ತಿರುನಲ್ವೇಲಿಯಿಂದ ಬಂಧಿಸಿದರೆ, ಎಸ್. ಜಮಾಲ್ ಮೊಹಮ್ಮದ್ ಉಸ್ಮಾನಿಯನ್ನು ತಂಜಾವೂರ್‌ನಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇಬ್ಬರ ಬಂಧನಗಳೂ ಶನಿವಾರ ರಾತ್ರಿ ನಡೆದಿವೆ. … Continued