ರಾಜ್ಯದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ ; ಪತಿ ನಿವೃತ್ತಿಯ ಬೆನ್ನಲ್ಲೇ ಪತ್ನಿಗೆ ಅದೇ ಹುದ್ದೆ…

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಜುಲೈ 31ಕ್ಕೆ ನಿವೃತ್ತಿಯಾಗಲಿರುವ ರಜನೀಶ ಗೋಯೆಲ್‌ ಅವರ ಸ್ಥಾನಕ್ಕೆ ಅವರ​ ಪತ್ನಿ ಶಾಲಿನಿ ರಜನೀಶ ಅವರನ್ನು ನೇಮಕ ಮಾಡಲು ಶುಕ್ರವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು, ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ … Continued

ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿ​ಎಂಸಿ ಕಾಯ್ದೆ ಹಿಂಪಡೆಯಲು ನಿರ್ಧಾ​ರ: ಸಚಿವ ಎಚ್‌.ಕೆ. ಪಾಟೀಲ

ಬೆಂಗಳೂರು : ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಕಾಯ್ದೆಯ ಬದಲಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆದು ಮೂಲ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಸುಧಾರಿತ ಎಪಿಎಂಸಿ ಮಸೂದೆ ಮಂಡಿಸಲು ತೀರ್ಮಾನಿಸಿದೆ. ಪ್ರಸ್ತುತ ಇರುವ ಎಪಿಎಂಸಿ ತಿದ್ದುಪಡಿ … Continued

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಯಾವುದೇ ಪ್ರಸ್ತಾವ ಬಂದಿಲ್ಲ : ಕಾನೂನು ಸಚಿವ ಹೆಚ್.ಕೆ.ಪಾಟೀಲ

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈವರೆಗೆ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದರು. ಬಜೆಟ್ ಅಧಿವೇಶನದ … Continued

ಕಳಸಾ-ಬಂಡೂರಿ ಯೋಜನೆ ಡಿಪಿಆರ್ ಕುರಿತ ಆದೇಶದಲ್ಲಿ ದಿನಾಂಕ ಇಲ್ಲ, ಇದನ್ನು ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ : ಎಚ್ ಕೆ ಪಾಟೀಲ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸಿದ್ದ ಕಳಸಾ-ಬಂಡೂರಿ ನಾಲಾ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದ ಆದೇಶದಲ್ಲಿ ದಿನಾಂಕವೇ ಇಲ್ಲ. ದಿನಾಂಕ ಇಲ್ಲದಿದ್ದರೆ ಸರ್ಕಾರಿ ದಾಖಲೆ ಎನ್ನಲು ಸಾಧ್ಯವೇ. ಇದು ನಿರ್ಗತಿಕ ಕೂಸಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಶಾಸಕ ಎಚ್‌.ಕೆ.ಪಾಟೀಲ … Continued