ರಾಮ ಮಂದಿರ ಉದ್ಘಾಟನೆ : ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯವಾದ ಹಿಮಾಚಲ..!

ಶಿಮ್ಲಾ: ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಹಿಮಾಚಲ ಪ್ರದೇಶ ರಾಮಮಂದಿರ ಕಾರ್ಯಕ್ರಮಕ್ಕೆ ರಜೆ ಘೋಷಿಸಿದ ಏಕೈಕ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ. ಭಗವಾನ್‌ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಸಂದರ್ಭದಲ್ಲಿ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜನವರಿ … Continued

ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು … Continued

ಭಾರೀ ಮಳೆ : ಜುಲೈ 7ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲೆ-ಪದವಿಪೂರ್ವ ಕಾಲೇಜಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 7 ರಂದು ಜಿಲ್ಲೆಯ ಕರಾವಳಿ ತಾಲೂಕಿನ ಎಲ್ಲಾ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಭಾರೀ ಭಾರೀ ಮಳೆ ಬೀಳುವ ಕುರಿತು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಕರವಾಳಿ … Continued

ಮುಂದುವರಿದ ಹಿಜಾಬ್‌ ವಿವಾದ: ಕುಂದಾಪುರ ಕಾಲೇಜಿಗೆ ನಾಳೆ ರಜೆ

ಉಡುಪಿ: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್‌ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ್ದು, ಕಾಲೇಜಿಗೆ ಶನಿವಾರ ರಜೆ ಘೋಷಿಸಲಾಗಿದೆ.  ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ. ಆಡಳಿತ ಮಂಡಳಿಯು ವಿದ್ಯಾರ್ಥಿಗಳನ್ನು ಕಾಲೇಜಿನ ಮೈದಾನದ ವರೆಗೆ ಮಾತ್ರ ಬಿಟ್ಟುಕೊಂಡಿದೆ. ಆದರೆ ತಮ್ಮನ್ನು ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡುವಂತೆ ಪ್ರಾಂಶುಪಾಲರನ್ನು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಇಂದು, ಶುಕ್ರವಾರ ತರಗತಿಗೆ … Continued