ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮಹಾರಾಷ್ಟ್ರ ಸಿಎಂ ಶಿಂಧೆ : ಡಿಸಿಎಂ ದೇವೇಂದ್ರ ಫಡ್ನವಿಸ್‌ಗೆ ಹಣಕಾಸು, ಗೃಹ ಖಾತೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭಾನುವಾರ ನಗರಾಭಿವೃದ್ಧಿ ಮತ್ತು ಸಾರ್ವಜನಿಕ ಕಾರ್ಯಗಳ (ಸಾರ್ವಜನಿಕ ಯೋಜನೆಗಳು) ಖಾತೆಗಳನ್ನು ಇಟ್ಟುಕೊಂಡು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ನಿರ್ಣಾಯಕ ಗೃಹ ಮತ್ತು ಹಣಕಾಸು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಅವರ ಸಂಪುಟಕ್ಕೆ 18 ಸಚಿವರು ಸೇರ್ಪಡೆಗೊಂಡ ಐದು ದಿನಗಳ ನಂತರ ಮುಖ್ಯಮಂತ್ರಿ ಶಿಂಧೆ ಅವರು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಶಿವಸೇನೆ … Continued