ಹೊನ್ನಾವರ : 180 ಕಬ್ಬಿಣದ ಸೆಂಟ್ರಿಂಗ್ ಶೀಟ್‌ ಕಳ್ಳತನ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

 ಹೊನ್ನಾವರ: ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಶೀಟ್‌ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕಳ್ಳತನದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತವೀರ್‌ ಅಹಮ್ಮದ್‌, ಷಹಾದ್ ಉಲ್ಲಾ, ಮಹ್ಮದ್‌ … Continued

ಹೊನ್ನಾವರ : ರಭಸದ ಮಳೆಗೆ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ

ಹೊನ್ನಾವರ: ಭಾರಿ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ದನ ರಾಮ ಮರಾಠಿ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕೃಷಿ ಕಾರ್ಮಿಕರಾಗಿದ್ದ ಜನಾರ್ದನ ಅವರು ಶುಕ್ರವಾರ ಅನಂತವಾಡಿಯ ಮರಾಠಿಕೇರಿ … Continued

ವೀಡಿಯೊ..| ʼಕಾಳುಮೆಣಸಿನ ರಾಣಿʼಗೆ ಗೌರವ; ರಾಷ್ಟ್ರಪತಿಗಳಿಂದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಅಂಚೆಚೀಟಿ ಬಿಡುಗಡೆ

ನವದೆಹಲಿ : ಯೋಧರನ್ನು, ಐತಿಹಾಸಿಕ ಗೌರವಿಸುವ ಐತಿಹಾಸಿಕ ಕ್ರಮದಲ್ಲಿ, ಭಾರತ ಸರ್ಕಾರದ ಅಂಚೆ ಇಲಾಖೆಯು 16 ನೇ ಶತಮಾನದ ಕರಾವಳಿ ಕರ್ನಾಟಕದ ನಿರ್ಭೀತ ರಾಣಿ ಎಂದೇ ಖ್ಯಾತಿ ಪಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ. ‘ಕಾಳು ಮೆಣಸಿನ ರಾಣಿ’ ಖ್ಯಾತರಾಗಿದ್ದ ರಾಣಿ … Continued

ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ 90 ವರ್ಷ ; 9 ದಿನ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ

ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ 90 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ಫೆಬ್ರವರಿ 22ರಿಂದ ಮಾರ್ಚ್‌ 2ರವರೆಗೆ 9 ದಿನಗಳ ಕಾಲ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವವನ್ನು ಆಯೋಜಿಸಲಾಗಿದೆ ಎಂದು ಶ್ರೀಮಯ ಕಲಾಕೇಂದ್ರದ ನಿರ್ದೇಶಕ ಕರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಹೊನ್ನಾವರ … Continued

ವೀಡಿಯೊ…| ಹೊನ್ನಾವರ : ಯಕ್ಷಗಾನದಲ್ಲಿ ಮಂಥರೆಯಾಗಿ ಮಿಂಚಿದ ನಟಿ ಉಮಾಶ್ರೀ…!

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ(ಜ. 17) ರಾತ್ರಿ ನಡೆದ ಯಕ್ಷಗಾನ ಆಖ್ಯಾನ ಶ್ರೀರಾಮ ಪಟ್ಟಾಭಿಷೇಕದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಮಂಥರೆ ಪಾತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು. ಹೊನ್ನಾವರದ ಸೇಂಟ್‌ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ಮಂಥರೆಯ ಪಾತ್ರ … Continued

ಹೊನ್ನಾವರ | ಗೇರುಸೊಪ್ಪ ಬಳಿ ಲಾರಿ ಪಲ್ಟಿ ; ಇಬ್ಬರು ಸಾವು

ಹೊನ್ನಾವರ: ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ – ಸಾಗರ ರಸ್ತೆಯ ಸುಳಿಮುರ್ಖಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರದತ್ತ ಬರುತ್ತಿದ್ದ ಲಾರಿ ಸೋಮವಾರ (ಜ.6) ನಸುಕಿನ ವೇಳೆ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ … Continued

ಹೊನ್ನಾವರ | ಶರಾವತಿ ಸೇತುವೆ ಮೇಲೆ ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ಹೊನ್ನಾವರ : ಇಂದು ಬೆಳಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ (Honnavara) ಪಟ್ಟಣದ ಶರಾವತಿ ಸೇತುವೆ ಮೇಲೆ ಭೀಕರ  ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವಿಜಯಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್‌ನಲ್ಲಿದ್ದವರು ಮಂಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಹೊರಟಿದ್ದ ಬೈಕ್ … Continued

ಹೊನ್ನಾವರ | ಖಾಸಗಿ ಬಸ್ ಪಲ್ಟಿ, ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿನಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಾಳೆಗದ್ದೆ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರು ಇದ್ದರು ಎಂದು … Continued

ಶಾಸಕ ದಿನಕರ ಶೆಟ್ಟಿ ಕಾರು-ಬೈಕ್ ಡಿಕ್ಕಿ : ಬೈಕ್‌ ಸವಾರನಿಗೆ ಗಾಯ

ಹೊನ್ನಾವರ : ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರ ಕಾರಿನ ಹಿಂಬದಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಕರ್ಕಿ ನಾಕಾ ಬಳಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಹಳದಿಪುರದ ನಿವಾಸಿ ನಾಗಪ್ಪ ಗೌಡ (60) ಎಂದು ಗುರುತಿಸಲಾಗಿದೆ. ಶಾಸಕ … Continued

ಯಕ್ಷಗಾನಕ್ಕೆ ವಿಶ್ವಸಂಸ್ಥೆ ಗೌರವ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಯುನೆಸ್ಕೊ (UNESCO) ಮಾನ್ಯತೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ದೊರೆತಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು, ಯುನೆಸ್ಕೊದಿಂದ ಮಾನ್ಯತೆ ಪಡೆದ ಮೊದಲ ಯಕ್ಷಗಾನ ಸಂಸ್ಥೆಯಾಗಿದೆ. ಜೂನ್ 11 ಹಾಗೂ … Continued