ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲು, ವ್ಯಕ್ತಿ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಯುವಕನೊಬ್ಬ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಇರಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬುಧವಾರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಬಳಿಯ ದೇವಿಗದ್ದೆಯ ಸಂದೇಶ ಮಂಜುನಾಥ … Continued

ಹೊನ್ನಾವರದಲ್ಲಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ: ಮುನ್ನೆಚ್ಚರಿಕೆಗಾಗಿ ವಾಹನ ಸಂಚಾರಕ್ಕೆ ನಿರ್ಬಂಧ

ಹೊನ್ನಾವರ: ರಾಷ್ಟ್ರೀಯ ಹೆದ್ದಾರಿ-17 ರಲ್ಲಿ ಗ್ಯಾಸ್ ತುಂಬಿದ ಟ್ಯಾಂಕರ್ ಉರುಳಿ ಬಿದ್ದು ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಕಾಲೇಜ್ ಸರ್ಕಲ್ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಈ ಟ್ಯಾಂಕರ್ ಹೋಗುತ್ತಿತ್ತು ಎಂದು ಹೇಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಹೊನ್ನಾವರ ನಗರದ ಶರಾವತಿ ಸರ್ಕಲ್ ಬಳಿ ಹೆದ್ದಾರಿಯಲ್ಲಿ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಹೊನ್ನಾವರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ, ಉಪವಾಸ ಸತ್ಯಾಗ್ರಹ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಜನರಲ್ಲಿ ಒಗ್ಗಟ್ಟಿಲ್ಲ. ಜಡತ್ವ ಕಾಡುತ್ತಿದೆ. ಜಡತ್ವ ತೊರೆದು ಜಿಲ್ಲೆಯ ಹಿತಕ್ಕಾಗಿ ಸುಸಜ್ಜಿತ ಆಸ್ಪತ್ರೆ ಬೇಕೆಂದು ಹೋರಾಟಕ್ಕಿಳಿದ ಜಿಲ್ಲೆಯ ಯುವಕರ ಬೆನ್ನು ತಟ್ಟಿ ಬೆಂಬಲಿಸಿ ಎಂದು ಸಾಹಿತಿ ಹಾಗೂ ವಿಶ್ರಾಂತ ಪ್ರಾಚಾರ್ಯ ಡಾ.| ಎನ್ ಆರ್ ನಾಯಕ್ ಕರೆ ನೀಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಕ್ತ ಸ್ಥಳದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ … Continued

ಹೊನ್ನಾವರ: ಲಾರಿ ಡಿಕ್ಕಿ ಹೊಡೆದು ಪಾದಾಚಾರಿ ಸ್ಥಳದಲ್ಲೇ ಸಾವು

ಹೊನ್ನಾವರ:ಪಟ್ಟಣದ ಗೇರುಸೊಪ್ಪ ವೃತ್ತದ ಬಳಿ ಲಾರಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಮೃತನನ್ನು ಕೂಲಿಕಾರ್ಮಿಕ ಪಟ್ಟಣದ ಚರ್ಚ್ ರೋಡ್ ನಿವಾಸಿಯಾದ ಸುಬ್ರಾಯ ಮಂಜು ಅಂಬಿಗ (45) ಎಂದು ಗುರುತಿಸಲಾಗಿದೆ. ಹೊನ್ನಾವರದಿಂದ ಕುಮಟಾ ಕಡೆಗೆ ಅ ಬರುತ್ತಿದ್ದ … Continued

ಕಾನೂನು ತಿದ್ದುಪಡಿಯಾದರೂ ಅರಣ್ಯ ಅತಿಕ್ರಮಣ ಮಂಜೂರಿಗೆ ಮೂರು ತಲೆಮಾರಿನ ಕಾಗದಪತ್ರ ಕೇಳ್ತಾರೆ, ಇದು ಅಗತ್ಯವೇ: ಸರ್ಕಾರಕ್ಕೆ ರವೀಂದ್ರ ನಾಯ್ಕ ಪ್ರಶ್ನೆ

ಹೊನ್ನಾವರ: ಅರಣ್ಯ ಅತಿಕ್ರಮಣ ಮಂಜೂರಾತಿಗೆ ಮೂರು ತಲೆಮಾರಿನ ಕಾಗದಪತ್ರ ಕೇಳುತ್ತಾರೆ. ಕಾನೂನು ತಿದ್ದುಪಡಿಯಾಗಿದೆ. ಆದರೂ ಮೂರು ತಲೆಮಾರಿನ ಹಿಂದಿನ ಕಾಗದಪತ್ರಗಳ ಅಗತ್ಯವಿದೆಯೇ ಎಂದು ಸರ್ಕಾರಕ್ಕೆ ಸವಾಲು ಹಾಕುತ್ತೇನೆ ಎಂದು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಗುಡುಗಿದರು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಶನಿವಾರ ಜಿಲ್ಲಾ … Continued

ಹೊನ್ನಾವರ : ರೈಲಿಗೆ ತಲೆಕೊಟ್ಟು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಹೊನ್ನಾವರ : ತಾಲೂಕಿನ ಮುಗ್ವಾ ಹಳಗೇರಿ ಮೂಲದ ಸದ್ಯ ಅನಂತವಾಡಿ ಕೋಟಾದಲ್ಲಿ ವಾಸವಿದ್ದ, ನಗರದ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಯೊಬ್ಬ ಅನಂತವಾಡಿ ಸಮೀಪ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ವಿದ್ಯಾರ್ಥಿಯನ್ನು ವಿಶಾಲ  ಗೌಡ ಎಂದು ಗುರುತಿಸಲಾಗಿದೆ. ರೈಲಿನ ಗಾಲಿಗೆ ಸಿಕ್ಕು ದೇಹ … Continued

ಹೊನ್ನಾವರ: ಎರಡು ಕಂಟೇನರ್‌ಗಳಲ್ಲಿ ಸಾಗಾಟವಾಗುತ್ತಿದ್ದ 500 ಕ್ವಿಂಟಲ್ ಪಡಿತರ ಅಕ್ಕಿ ವಶ

ಹೊನ್ನಾವರ: ಮಂಗಳೂರು ಕಡೆಗೆ ಎರಡು ಕಂಟೇನರ್ ಲಾರಿಗಳಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಹೊನ್ನಾವರ ಪೊಲೀಸರು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ. ಇದು ರೇಷನ್ ಅಕ್ಕಿ ಎಂದು ಹೇಳಲಾಗಿದೆ. ಈ ಅಕ್ಕಿ ಹಾವೇರಿ ಜಿಲ್ಲೆಯ ಅಕ್ಕಿ ಆಲೂರು ಕಡೆಯಿಂದ ಮಂಗಳೂರು ಕಡೆಗೆ ಹೊರಟಿತ್ತು ಎನ್ನಲಾಗಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಆರೊಳ್ಳಿ … Continued

ನೇರ -ಸರಳ ವ್ಯಕ್ತಿತ್ವದ, ಧೀಮಂತ ನಾಯಕ, ಪ್ರಾಮಾಣಿಕ ರಾಜಕಾರಣಿ ಡಾ.ಎಂ.ಪಿ.ಕರ್ಕಿ ನಿಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆ ಕಂಡ ಧೀಮಂತ ರಾಜಕಾರಣಿ ಹಾಗೂ ಬಿಜೆಪಿ ಹಿರಿಯ ನಾಯಕ, ಮಾಜಿ ಶಾಸಕ ಹಾಗೂ ಖ್ಯಾತ ವೈದ್ಯ ಡಾ. ಎಂ.ಪಿ.ಕರ್ಕಿ (೮೬) ತಮ್ಮ ವಯೋಸಹಜ ಅನಾರೋಗ್ಯದಿಂದ ಇಂದು (ಸೋಮವಾರ) ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಡಿಸ್ಟಾರ್ಜ್ ಮಾಡಿ ಹೊನ್ನಾವರಕ್ಕೆ ಕರೆತಂದು ಸೇಂಟ್ ಇಗ್ನೇಷಿಯಸ್ … Continued

ಖ್ಯಾತ ಯಕ್ಷಗಾನ ಭಾಗವತ-ಕಲಾವಿದ ಗುಣವಂತೆ ಕೃಷ್ಣ ಭಂಡಾರಿ ನಿಧನ

ಹೊನ್ನಾವರ: ಯಕ್ಷಗಾನ ಭಾಗವತ, ಕಲಾವಿದ ಗುಣವಂತೆ ಕೃಷ್ಣ ಭಂಡಾರಿ (61 ವರ್ಷ) ಶನಿವಾರ ರಾತ್ರಿ ಸುಮಾರು 10.20 ಕ್ಕೆ ಗುಣವಂತೆಯಲ್ಲಿ ನಿಧನರಾಗಿದ್ದಾರೆ. ಕೃಷ್ನ ಭಂಡಾರಿ ಅವರು ಯಕ್ಷಗಾನದ ಹಿನ್ನೆಲೆಯಿರುವ ಕುಟುಂಬದಿಂದಲೇ ಬಂದಿದ್ದರು. ಅಜ್ಜ ವೆಂಕಪ್ಪ ಭಂಡಾರಿ ವೇಷಧಾರಿಯಾಗಿದ್ದರು. ಹಾಗೂ ತಂದು ಮಂಜು ಭಂಡಾರಿ ಮದ್ದಳೆ ವಾದಕರಾಗಿದ್ದರು.ಅವರು ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಯಕ್ಷಗಾನ ಹಿನ್ನೆಲೆಯ ಕುಟುಂಬದಿಂದ … Continued

ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆ: ಮೀನುಗಾರರ ರಕ್ಷಣೆ

ಹೊನ್ನಾವರ:ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಸಮುದ್ರದಲ್ಲಿ ಮುಳುಗಡೆಯಾದ ಘಟನೆ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಅಳಿವೆ ಪ್ರದೇಶದಲ್ಲಿ ನಡೆದಿದೆ. ಮುಳುಗಡೆಯಾದ ಬೋಟನ್ನು ಗಂಗೊಳ್ಳಿ ಮೂಲದ ಶ್ರೀಕೃಷ್ಣ ಭಂಡಾರಿ ಹೆಸರಿನ ಶಿವರಾಮ ಶ್ರೀಯಾನ್‌ ಅವರಿಗೆ ಸೇರಿದ್ದು ಎಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ಹೊನ್ನಾವರದ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿತ್ತು ಎನ್ನಲಾಗಿದೆ. ವಾಪಸ್ಸು ಬರುವ … Continued