ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಅವರನ್ನು ತಕ್ಷಣ ಎಸ್‌ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ಉಸಿರಾಟ ಹಾಗೂ … Continued

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

ಶಿವಮೊಗ್ಗ : ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ. ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಗೋಡು ತಿಮ್ಮಪ್ಪನವರಿಗೆ ಜ್ವರ ಹಾಗೂ ತೀವ್ರ ಸುಸ್ತು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕುಟುಂಬದವರು … Continued

ಆರೋಗ್ಯದಲ್ಲಿ ಏರುಪೇರು; ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ (Manipal Hospital) ಎಸ್‌.ಎಂ.ಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಉಸಿರಾಟದ … Continued

ಮಮತಾ ಬ್ಯಾನರ್ಜಿ ಹಣೆಗೆ ದೊಡ್ಡ ಗಾಯ : ಹೊಲಿಗೆ ಹಾಕಿದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿ ಬಿದ್ದ ಪರಿಣಾಮ ಅವರ ಹಣೆಗೆ ದೊಡ್ಡ ಗಾಯವಾಗಿದೆ. ಅವರ ಹಣೆಗೆ ಹೊಲಿಗೆ ಹೊಲಿಗೆ ಹಾಕಿದ್ದು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಗತ್ಯ ಪರೀಕ್ಷೆಗಳನ್ನು ನಡೆಸಿದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಕುಟುಂಬ ಸದಸ್ಯರು … Continued

ಮಾಜಿ ಪ್ರಧಾನಿ ಎಚ್​ ಡಿ ದೇವೆಗೌಡರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾದ ನಂತರ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಎಚ್‌.ಡಿ. ದೇವೇಗೌಡ ಅವರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದ್ದು, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, … Continued

ಬಾಲಿವುಡ್‌ ನಟ ಮಿಥುನ್ ಚಕ್ರವರ್ತಿ ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಾಲಿವುಡ್ ಹಿರಿಯ ನಟ ಮತ್ತು ರಾಜಕಾರಣಿ ಮಿಥುನ್ ಚಕ್ರವರ್ತಿ ಅವರು ಶನಿವಾರ (ಫೆಬ್ರವರಿ 10) ಎದೆನೋವು ಕಾಣಿಸಿಕೊಂಡ ನಂತರ ಕೋಲ್ಕತ್ತಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಸ್ವಸ್ಥರಾಗಿದ್ದರು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಡಿಸ್ಕೋ ಡ್ಯಾನ್ಸರ್ ನಟ ಪ್ರಸ್ತುತ ಚಿಕಿತ್ಸೆ … Continued

ದೆಹಲಿಗೆ ತೆರಳುವ ವಿಮಾನದಲ್ಲಿ ಅಸ್ವಸ್ಥ : ಅಗರ್ತಲಾ ಆಸ್ಪತ್ರೆಗೆ ದಾಖಲಾದ ಕರ್ನಾಟಕ ಕ್ರಿಕೆಟ್‌ ತಂಡದ ನಾಯಕ ಮಯಾಂಕ್ ಅಗರ್ವಾಲ್

ನವದೆಹಲಿ : ಭಾರತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಗರ್ತಲಾ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೋಗುವ ವಿಮಾನ ಟೇಕಾಫ್ ಆಗುವ ಮೊದಲು ಅನಾರೋಗ್ಯಕ್ಕೆ ತುತ್ತಾದ ನಂತರ ಮಂಗಳವಾರ (ಜನವರಿ 30) ಆಸ್ಪತ್ರೆಗೆ ಸೇರಿಸಲಾಯಿತು. ಮಯಾಂಕ್ ಅಗರ್ವಾಲ್ ಅವರು ವಿಮಾನದಲ್ಲಿ ತಮ್ಮ ಆಸನದಲ್ಲಿ ಕುಳಿತ ನಂತರ ತಮ್ಮ ಗಂಟಲಿನಲ್ಲಿ ತೊಂದರೆ ಅನುಭವಿಸಿದರು. ತಕ್ಷಣವೇ ಅವರನ್ನು ಅಗರ್ತಲಾದ ಹತ್ತಿರದ … Continued

ಸಂಸದ‌ ರಮೇಶ ಜಿಗಜಿಣಗಿ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ಬಾಗಲಕೋಟೆ : ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರಮೇಶ ಜಿಗಜಿಣಗಿ ಅವರು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು … Continued

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ಬೆಂಗಳೂರಿನ ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ (Salumarada Timmakka) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಉಸಿರಾಟದ ಸಮಸ್ಯೆಯಾದ ಅವರನ್ನು ಮಂಗಳವಾರ (ಅ.03)) ಹಾಸನದಿಂದ ಕರೆದುಕೊಂಡು ಬಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತಿಮ್ಮಕ್ಕ ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ … Continued

ಜಾರಿ ಬಿದ್ದ ಸಾಲುಮರದ ತಿಮ್ಮಕ್ಕ ; ಆಸ್ಪತ್ರೆಗೆ ದಾಖಲು

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರು ಭಾನುವಾರ (ಆಗಸ್ಟ್ 6) ಸಂಜೆ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು ತಕ್ಷಣವೇ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾರಿ ಬಿದ್ದಿರುವ ತಿಮ್ಮಕ್ಕ ಅವರಿಗೆ ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಸಾಲುಮರದ ತಿಮ್ಮಕ್ಕ ಅವರಿಗೆ 112 ವರ್ಷವಾಗಿದೆ. ಅವರ ಬೆನ್ನಿನ ಭಾಗಕ್ಕೆ … Continued