ಆರೋಗ್ಯದಲ್ಲಿ ಏರುಪೇರು : ಲಾಲು ಪ್ರಸಾದ ಯಾದವ್ ಆಸ್ಪತ್ರೆಗೆ ದಾಖಲು

ಪಾಟ್ನಾ: ಆರ್‌ಜೆಡಿ ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್‌ ಅವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಿ ನಂತರ ಬುಧವಾರ ದೆಹಲಿಗೆ ಕರೆದೊಯ್ದು ಏಮ್ಸ್‌ಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿದೆ. 76 ವರ್ಷದ ನಾಯಕನನ್ನು ಎಐಐಎಂಎಸ್‌ನ ಕಾರ್ಡಿಯಾಲಜಿ ಪ್ರಾಧ್ಯಾಪಕ ಡಾ ರಾಕೇಶ ಯಾದವ್ ಅವರ ಕಾರ್ಡಿಯೋ-ನ್ಯೂರೋ ಸೆಂಟರ್‌ನ ಕಾರ್ಡಿಯೋ ಕ್ರಿಟಿಕಲ್ ಕೇರ್ ಘಟಕಕ್ಕೆ ದಾಖಲಿಸಲಾಗಿದೆ … Continued

ಸಂಗೀತ ಕಾರ್ಯಕ್ರಮದಲ್ಲೇ ಸೋನು ನಿಗಮ್ ಗೆ ತೊಂದರೆ : ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ವೇಳೆ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ ಪೋಸ್ಟ್ ಹಾಕಿದ್ದಾರೆ. ಲೈವ್ ಕಾನ್ಸರ್ಟ್ ವೇಳೆ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡಿದೆ. … Continued

ವೀಡಿಯೊ..| ಇದೆಂಥ ಕೃತ್ಯ ; ಬರುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು

ವಿಜಯಪುರ: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಇಟ್ಟಿಗೆ ಭಟ್ಟಿ ಮಾಲೀಕ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ಗಾಂಧಿ ನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಘಟನೆ ನಡೆದಿದ್ದು, ಮಾಲೀಕ ಖೇಮು ರಾಠೋಡ ಎಂಬಾತ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ … Continued

ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಮೊದಲೇ ಮನೆಯೊಳಗೆ ಅಡಗಿಕೊಂಡಿದ್ದನೆ…?!

ಮುಂಬೈ: ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆಯುವ ಎರಡು ಗಂಟೆಗಳ ಮೊದಲು ಸೈಫ್ ಅಲಿಖಾನ್ ಅವರ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಯಾರೊಬ್ಬರೂ ಆವರಣಕ್ಕೆ ಪ್ರವೇಶಿಸುವುದು ಕಂಡುಬಂದಿಲ್ಲ, ಅಂದರೆ ನಟನ ಮೇಲೆ ದಾಳಿ ಮಾಡಿದವರು ಮೊದಲೇ ಕಟ್ಟಡಕ್ಕೆ ಪ್ರವೇಶಿಸಿ ಕಾಯುತ್ತಿದ್ದಿರಬಹುದೇನೋ ಎಂದು ಪೊಲೀಸ್‌ ಮೂಲಗಳು ಉಲ್ಲೇಖಿಸಿದ ವರದಿಯೊಂದು ಹೇಳಿದೆ. ವರದಿ ಪ್ರಕಾರ, … Continued

ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ, ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ … Continued

ಹಿರಿಯ ನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಕಳೆದ 4 ದಿನಗಳಿಂದ ಅವರು ಯಶವಂತಪುರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ನಟ ಸರಿಗಮ ವಿಜಿ ಅವರಿಗೆ ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಇವರು 1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರಕ್ಕೆ ಸಣ್ಣ ಪಾತ್ರದಲ್ಲಿ … Continued

ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ಬಿಜೆಪಿ ಶಾಸಕ ಸುರೇಶಕುಮಾರ ಆಸ್ಪತ್ರೆಗೆ ದಾಖಲು

ಬೆಂಗಳೂರು : ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶಕುಮಾರ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶಕುಮಾರ ಅವರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಕಳೆದ ತಿಂಗಳು … Continued

ರಕ್ಷಣಾ ಸಚಿವ ರಾಜನಾಥ ಸಿಂಗ್ ದೆಹಲಿ ಏಮ್ಸ್ ಗೆ ದಾಖಲು

ನವದೆಹಲಿ: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿದೆ. ಬುಧವಾರ ತಡರಾತ್ರಿ ಬೆನ್ನು ನೋವಿನಿಂದ ಬಳಲುತ್ತಿದ್ದ ಅವರನ್ನು ಹಳೆಯ ಖಾಸಗಿ ವಾರ್ಡ್‌ಗೆ ದಾಖಲಿಸಲಾಯಿತು. ನರಶಸ್ತ್ರಚಿಕಿತ್ಸಾ ವಿಭಾಗದ ನಿಗಾದಲ್ಲಿದ್ದು, ಆವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಡಿಸ್ಚಾರ್ಜ್ ಆಗಬಹುದು ಎಂದು ದೆಹಲಿಯ ಏಮ್ಸ್ ತಿಳಿಸಿದೆ. ಗುರುವಾರ … Continued

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲಕೃಷ್ಣ ಅಡ್ವಾಣಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಅಪೋಲೋ ಆಸ್ಪತ್ರೆಯಲ್ಲಿ ನಿಗಾದಲ್ಲಿ ಇರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ. ಅವರನ್ನು ನರವಿಜ್ಞಾನದ ಹಿರಿಯ ಸಲಹೆಗಾರರಾದ ಡಾ ವಿನಿತ್ ಸೂರಿ ಅವರ ನೇತೃತ್ವದಲ್ಲಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅಡ್ವಾಣಿಯವರ ಅನಾರೋಗ್ಯದ ವಿವರಗಳು ತಕ್ಷಣವೇ ತಿಳಿದುಬಂದಿಲ್ಲ. ಕಳೆದ ವಾರದ ಆರಂಭದಲ್ಲಿ, … Continued