ರಾಮ ಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ ಆಸ್ಪತ್ರೆಗೆ ದಾಖಲು

ಲಕ್ನೋ : ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ ನೃತ್ಯ ಗೋಪಾಲ ದಾಸ್ (89) ಅವರಿಗೆ ಮೂತ್ರನಾಳದ ಸೋಂಕು (ಯೂರಿನರಿ ಟ್ರ್ಯಾಕ್ಟ್ ಇನ್ಫೆಕ್ಷನ್–ಯುಟಿಐ) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಮೆದಾಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಬುಧವಾರ ಮೆದಾಂತ ಆಸ್ಪತ್ರೆ ಬಿಡುಗಡೆ ಮಾಡಿದ ವೈದ್ಯಕೀಯ ಪ್ರಕಟಣೆಯ … Continued

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ ; ಆಸ್ಪತ್ರೆಗೆ ದಾಖಲು

ಮುಂಬೈ : ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಸದ್ಯ ಅವರು ಆಸ್ಪತ್ರೆಯ ತುರ್ತು ವೈದ್ಯಕೀಯ ಸೇವೆಗಳ (EMS) ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಅವರ ಕುಟುಂಬ ಸದಸ್ಯರಿಂದಾಗಲಿ ಅಥವಾ ಆಸ್ಪತ್ರೆಯ … Continued

ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ : ಆಸ್ಪತ್ರೆಗೆ ದಾಖಲು

ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಭಾಷಣದ ವೇಳೆ ಅಸ್ವಸ್ಥಗೊಂಡು ದಿಢೀರ್‌ ಕುಸಿದು ಬಿದ್ದಿದ್ದು ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು, ವೇದಿಕೆಯಲ್ಲಿ ಮಾತಾಡುತ್ತಿದ್ದ … Continued

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (B.M. Parvathi) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಶ್ವಾಸಕೋಶದ ತೊಂದರೆ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಅವರನ್ನು ಸೋಮವಾರ ಅಪರಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಪ್ರಧಾನಿ ಮೋದಿ ಮತ್ತು … Continued

ಹಿಂದಿ ಸಿನೆಮಾದ ಹಿರಿಯ ನಟ ಪ್ರೇಮ್ ಚೋಪ್ರಾ ಆಸ್ಪತ್ರೆಗೆ ದಾಖಲು

ಮುಂಬೈ: ಹಿಂದಿ ಸಿನೆಮಾದ ಹಿರಿಯ ನಟ ಪ್ರೇಮ ಚೋಪ್ರಾ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆಯ ಭಾಗದಲ್ಲಿ ಉಸಿರಾಟದ ಸಮಸ್ಯೆ (Chest Congestion) ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕಳೆದ ಮೂರು ದಿನಗಳಿಂದ (ನವೆಂಬರ್ 8) ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ನಟ ಪ್ರೇಮ್ ಚೋಪ್ರಾ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಮೂರರಿಂದ ನಾಲ್ಕು ದಿನಗಳಲ್ಲಿ … Continued

ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು

ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಡಿಸೆಂಬರ್ 8ರಂದು ತಮ್ಮ 90ನೇ ವರ್ಷಕ್ಕೆ ಕಾಲಿಡುತ್ತಿರುವ ಅವರು ರೂಟೀನ್‌ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಸದ್ಯಕ್ಕೆ ಅವರು ವೈದ್ಯರ ನಿಗಾದಲ್ಲಿದ್ದಾರೆ ಎಂದು ವರದಿಗಳು ಸೂಚಿಸಿವೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಅವರು … Continued

ದೇವೇಗೌಡರ ಆರೋಗ್ಯ ವಿಚಾರಿಸಿದ ಸಚಿವ ಜೋಶಿ

ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ವೇಳೆ ದೇವೇಗೌಡರು ಜೋಶಿ ಅವರೊಂದಿಗೆ ಲವಲವಿಕೆಯಿಂದ ಮಾತನಾಡಿದ್ದಾರೆ. ಹಿರಿಯ ರಾಜಕೀಯ ಮುತ್ಸದ್ದಿ ದೇವೇಗೌಡರು ಶೀಘ್ರವೇ ಚೇತರಿಸಿಕೊಂಡು ಉತ್ತಮ ಆರೋಗ್ಯವಂತರಾಗಿರಲಿ ಎಂದು ಜೋಶಿ ಹಾರೈಸಿದರು. … Continued

ಕನ್ನಡದ ಖ್ಯಾತ ನಟ ಉಮೇಶ ಆಸ್ಪತ್ರೆಗೆ ದಾಖಲು

ಬೆಂಗಳೂರು : ಕನ್ನಡ ಚಿತ್ರರಂಗದ ಪೋಷಕ ನಟರಾದ ಎಂ.ಎಸ್‌.ಉಮೇಶ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 80 ವರ್ಷ ವಯಸ್ಸಿನವರಾದ ಉಮೇಶ ಅವರು ಮನೆಯಲ್ಲಿ ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಯೋ ಸಹಜ ತೊಂದರೆಗಳಿಂದ ಬಳಲುತ್ತಿರುವ ನಟ ಉಮೇಶ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ.‌ … Continued

ದೇವೇಗೌಡರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೋಮವಾರ ತಡರಾತ್ರಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರ ಚಿಕಿತ್ಸೆ ಬಳಿಕ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ದೇವೇಗೌಡ ಅವರಿಗೆ 92 ವಯಸ್ಸಾಗಿದ್ದು, ವಯೋಸಹಜ ಆರೋಗ್ಯ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued