ವಸತಿ ಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರ

ಗಡ್ಚಿರೋಲಿ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಧನೋರಾ ತಾಲೂಕಿನ ಜಪತಲಾಯಿ ಗ್ರಾಮದಲ್ಲಿರುವ ವಸತಿ ಶಾಲೆಯಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಶಂಕಿತ ಹಾವು ಕಡಿತದ ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ 14 ವಿದ್ಯಾರ್ಥಿನಿಯರನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ ಎಂದು ಹೇಳಲಾಗಿದೆ. ಜಪತಲಾಯಿ ಗ್ರಾಮದ ಕುಪರ್ಲಿಂಗೋ ಎಜುಕೇಷನಲ್ ಆ್ಯಂಡ್ ಕಲ್ಚರಲ್ ಡೆವಲಪ್‌ಮೆಂಟ್ … Continued

ಬಳ್ಳಾರಿ | ಹಾಸ್ಟೇಲಿನಲ್ಲಿ ರಾಡ್‌ನಿಂದ ಹಲ್ಲೆ ಮಾಡಿದ ವಿದ್ಯಾರ್ಥಿ ; ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

ಬಳ್ಳಾರಿ : ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಶನಿವಾರ ತಡರಾತ್ರಿ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ನಂತರ ಓರ್ವ ವಿದ್ಯಾರ್ಥಿ ಸಾವಿಗೀಡಾಗಿದ್ದು, ಇತರ ಏಳು ಜನ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಾಲೆಯಲ್ಲಿ ನಡೆದ ಸಣ್ಣಪುಟ್ಟ ವಿವಾದದ ನಂತರ ಹಾಸ್ಟೆಲಿನ ಬೆಡ್ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಾಸ್ಟೆಲ್ ವಾರ್ಡನ್ … Continued

ಬೆಳಗಾವಿ : ಹಾಸ್ಟೆಲ್ ಕೊಠಡಿಯಲ್ಲಿಯೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಹಾಸ್ಟೆಲಿನಲ್ಲಿಯೇ ಅತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಸದಾಶಿವನಗರದಲ್ಲಿರುವ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಸುಮಿತ್ರಾ ಗೋಕಾಕ (19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದವಳು ಎಂದು ಗುರುತಿಸಲಾಗಿದೆ. ಈಕೆ ನರ್ಸಿಂಗ್‌ ಓದುತ್ತಿದ್ದಳು ಎನ್ನಲಾಗಿದೆ. ಬೆಳಿಗ್ಗೆ ಉಪಾಹಾರ ಸೇವಿಸಿದ ಬಳಿಕ ಕೊಠಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ … Continued

ಹಾಸ್ಟೆಲಿನಲ್ಲಿ ತಮಾಷೆ ಮಾಡಲು ಹೋಗಿ 8 ಮಕ್ಕಳು ಆಸ್ಪತ್ರೆಗೆ ದಾಖಲು; ಅಂಟು ಹಾಕಿದ್ದರಿಂದ ಕಣ್ಣನ್ನೇ ತೆರೆಯಲು ಬರುತ್ತಿಲ್ಲ…!

ಭುವನೇಶ್ವರ: ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ತಮಾಷೆ ಮಾಡಲು ಹೋಗಿ ಎಂಟು ವಿದ್ಯಾರ್ಥಿಗಳು ಮಲಗಿದ್ದಾಗ ಅವರ ಕಣ್ಣುಗಳಿಗೆ ತಕ್ಷಣವೇ ಹಿಡಿದುಕೊಳ್ಳುವ ಅಂಟು ಹಾಕಿದ್ದರಿಂದ ಅದು ಗಂಭೀರವಾಗಿ ಪರಿಣಮಿಸಿತು. ಮಕ್ಕಳು ಎಚ್ಚರವಾದಾಗ ಅವರ ಕಣ್ಣುರೆಪ್ಪೆಗಳನ್ನು ತೆರೆಯಲು ಬರುತ್ತಿರಲಿಲ್ಲ. ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಡಳಿತವು ಆಘಾತಕಾರಿ ಪ್ರಕರಣದ ತನಿಖೆಗೆ ಆದೇಶಿಸಿದೆ. ಕಂಧಮಾಲ್‌ನ ಸಲಗುಡದಲ್ಲಿರುವ ಸೇವಾಶ್ರಮ ಶಾಲೆಯಲ್ಲಿ ಈ ಘಟನೆ … Continued

ಇನ್ನೊಮ್ಮೆ ಕಳಪೆ ಊಟ ಕೊಟ್ಟರೆ ವಾರ್ಡನ್ನಿಗೆ ತಿನ್ನಿಸಿ, ಚೆನ್ನಾಗಿ ಬಾರಿಸಿ: ಶಾಸಕರ ಹೇಳಿಕೆಯ ವೀಡಿಯೊ ವೈರಲ್

ಚಿತ್ರದುರ್ಗ: ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಚೆನ್ನಾಗಿ ಬಾರಿಸಿ’ ಎಂದು ಹೇಳಿದ್ದಾರೆ ಎನ್ನಲಾದ ವೀಡಿಯೊ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಪ್ರಚೋದನೆ ನೀಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, … Continued