ಗೋಕಾಕ | ಮಳೆಗೆ ಮನೆ ಕುಸಿದುಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ

ಬೆಳಗಾವಿ : ಭಾರಿ ಮಳೆಯಿಂದಾಗಿ ಮನೆ ಕುಸಿದು ಬಿದ್ದು ಮಹಿಳೆಯೊಬ್ಬರು ಸಮೃತೊಟ್ಟ ಘಟನೆ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗೋಕಾಕದ ಸಂಗಮ ನಗರದ ಫರೀದಾಬಾನು ಶಕೀಲ್ ಅಹ್ಮದ್ ಕನವಾಡ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರ ಪುತ್ರ  ಮತ್ತು ಪುತ್ರಿ  ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. … Continued

ಬಡಾಲ ಅಂಕಲಗಿ: ಮನೆ ಕುಸಿದು ಒಂದೇ ಕುಟುಂಬದ ಏಳು ಜನರು ಸಾವು

ಬೆಳಗಾವಿ : ಧಾರಾಕಾರ ಮಳೆಗೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದ ಪರಿಣಾಮ ಒಟ್ಟು ಏಳು ಜನ ಮೃತಪಟ್ಟ ಘಟನೆ ನಡೆದ ಬಗ್ಗೆ ಬುಧವಾರ ವರದಿಯಾಗಿದೆ, ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಸ್ಥಳೀಯ ಖನಗಾವಿ ಕುಟುಂಬದ 7 ಜನರು  ಮೃತಪಟ್ಟಿದ್ದಾರೆ. ಮನೆಯೊಳಗೆ ಸಿಲುಕಿದ ಇನ್ನಿಬ್ಬರನ್ನು ಸುರಕ್ಷಿತವಾಗಿ ಹೊರ ತಂದು ಆಸ್ಪತ್ರೆಗೆ … Continued