ಹುಬ್ಬಳ್ಳಿಯಲ್ಲಿ ತಡರಾತ್ರಿ ಯುವಕನ ಕೊಲೆ; ಪೊಲೀಸರಿಂದ ಮೂವರು ಆರೋಪಿಗಳ ಕಾಲಿಗೆ ಗುಂಡು

ಹುಬ್ಬಳ್ಳಿ; ಮಹಾನಗರದ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ ಜಾಗದಲ್ಲಿ ಆಕಾಶ ವಾಲ್ಮೀಕಿ ಎಂಬ ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder) ಮಾಡಲಾಗಿದೆ. ತಡರಾತ್ರಿ ನಡೆದ ಕೊಲೆ ಬಗ್ಗೆ ಮಾಹಿತಿ ಪಡೆದ ಪೊಲೀಸರು (Police) ಆರೋಪಿಗಳನ್ನು ಬಂಧಿಸಲು ತೆರಳಿದಾಗ ಅವರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ನಂತರ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ … Continued

ಪಿಂಕಿ ಈಸ್ ಕಿಲ್ಲಿಂಗ್ ಮೀ ; ಹೆಂಡತಿ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ

ಹುಬ್ಬಳ್ಳಿ : 40 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಕಿರುಕುಳದಿಂದ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೀಟರ್‌ ಗೊಲ್ಲಪಲ್ಲಿ ಎಂಬವರು ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

ರಾಜ್ಯ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ನೇಮಕ

ಹುಬ್ಬಳ್ಳಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯರಾಗಿ ಹಿರಿಯ ಪತ್ರಕರ್ತ ಗಣಪತಿ ಗಂಗೊಳ್ಳಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಡ್ಲೆ ಗ್ರಾಮದವರಾದ ಗಂಗೊಳ್ಳಿ ಅವರು, ಕಳೆದ ಸುಮಾರು 35 ವರ್ಷಗಳಿಂದ ಪತ್ರಿಕಾ ರಂಗದಲ್ಲಿದ್ದಾರೆ. ಸಂಯುಕ್ತ ಕರ್ನಾಟಕ, ವಿಶಾಲ … Continued

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued

ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಫೋಟ | ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ದಿನಗಳ ಹಿಂದೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ (Gas Cylinder Blast) ಗಾಯಗೊಂಡಿದ್ದ ಮತ್ತೊಬ್ಬರು ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದು, ಈ ಘಟನೆಯಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದೆ. ಸಿಲಿಂಡರ್ ಸ್ಫೋಟದಿಂದ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಮೃತಪಟ್ಟಿದ್ದರು. ಮಂಗಳವಾರ ಗಂಭೀರವಾಗಿ … Continued

ಹುಬ್ಬಳ್ಳಿಯಲ್ಲಿದ್ದಾರೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಸಂಬಂಧಿಕರು..

ಹುಬ್ಬಳ್ಳಿ : ದೇಶ ಕಂಡ ಅಪರೂಪದ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ನಿಧನರಾದರು. ಅಗಲಿದ ಮಾಜಿ ಪ್ರಧಾನಿಗೆ ಅನೇಕ ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ದೇಶದ ಆರ್ಥಿಕ ಸುಧಾರಣೆಯ ಹರಿಕಾರ ಮನಮೋಹನ ಸಿಂಗ್ ಅವರ ಸಂಬಂಧಿಕರು ಹುಬ್ಬಳ್ಳಿಯಲ್ಲೂ ಇದ್ದಾರೆ. ಮನಮೋಹನ ಸಿಂಗ್‌ ನಿಧನಕ್ಕೆ ಕುಟುಂಬ ದುಃಖ … Continued

ಹುಬ್ಬಳ್ಳಿ | ಮಲಗಿದ್ದಾಗ ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಅನಿಲ ಸಿಲಿಂಡರ್ ಸ್ಫೋಟಗೊಂಡು 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡಿದ್ದಾರೆ. ಬಹುತೇಕ ಎಲ್ಲರ ದೇಹ ಶೇ 50 ರಷ್ಟು ಸುಟ್ಟು ಹೋಗಿದ್ದು, 58 … Continued

ವಕ್ಫ್ ಭೂ ವಿವಾದ | ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕಳವಳಕಾರಿ ; ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ಕರ್ನಾಟಕದಲ್ಲಿ ಧಾರ್ಮಿಕ ಸಂಸ್ಥೆಗಳು ಸೇರಿದಂತೆ ವಿವಿಧ ಆಸ್ತಿಗಳ ಮಾಲೀಕತ್ವವನ್ನು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಹೇಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಮತ್ತು ಈ ವಿಷಯವನ್ನು ಜೆಪಿಸಿ ಮುಂದೆ ಇಡಲಾಗುವುದು ಎಂದು ಸಂಸದ ಮತ್ತು ವಕ್ಫ್ (ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ ಹೇಳಿದ್ದಾರೆ. ಗುರುವಾರ (ನವೆಂಬರ್ 7) ಹುಬ್ಬಳ್ಳಿಯಲ್ಲಿ ರೈತರು … Continued

ಹುಬ್ಬಳ್ಳಿ | ವಕ್ಫ್‌ ಆಸ್ತಿ ವಿವಾದ : ಅಹವಾಲು ಸ್ವೀಕರಿಸಿದ ಜಂಟಿ ಸಂಸದೀಯ ಸಮಿತಿ

ಹುಬ್ಬಳ್ಳಿ: ನಗರಕ್ಕೆ ಆಗಮಿಸಿರುವ ಸಂಸದ ಜಗದಾಂಬಿಕಾ ಪಾಲ ಅವರ ಅಧ್ಯಕ್ಷತೆಯ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯು ವಕ್ಫ್ ನೋಟಿಸ್‌ಗೆ ಸಂಬಂಧಿಸಿದಂತೆ 75ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾಯಿತು. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಒಂದು ಗಂಟೆಗೂ ಹೆಚ್ಚು ಕಾಲ ಅಹವಾಲು ಸಭೆ ನಡೆದಿದ್ದು, ರೈತರು, ಜನಸಾಮಾನ್ಯರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ಶಾಸಕರು … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued