ʼಸಾಹಿತ್ಯ ಪ್ರಕಾಶನʼ ಸಂಸ್ಥೆಯನ್ನು ಸಾಹಿತ್ಯ ಪ್ರೇಮಿಗಳ ಮನೆ ಮಾತಾಗುವಂತೆ ಬೆಳೆಸಿದ ಎಂ.ಎ.ಸುಬ್ರಹ್ಮಣ್ಯ…

೧೯೩೪ ರಲ್ಲಿ ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಆರಂಭವಾದ ಸಾಹಿತ್ಯ ಭಂಡಾರ ಪ್ರಕಾಶನ ಸಂಸ್ಥೆ ಇಂದು ಬೃಹತ್ ಪುಸ್ತಕ ಪ್ರಕಾಶನ ಸಂಸ್ಥೆಯಾಗಿ ಮುನ್ನಡೆಯುತ್ತಿದೆ. ಅದರಂತೆ ಸಾಹಿತ್ಯಕಾರ ಯಂಡಮೂರಿ ವಿರೇಂದ್ರನಾಥ ಅವರ ಕಾದಂಬರಿಯಾದ ʼಕರಿಗಂಬಳಿಯಲ್ಲಿ ಮಿಡಿನಾಗರ’ ವನ್ನು ೧೯೮೬ರಲ್ಲಿ ತಮ್ಮದೇ ಆದ ಪುಸ್ತಕ ಪ್ರಕಾಶನ ಸಂಸ್ಥೆ ʼಸಾಹಿತ್ಯ ಪ್ರಕಾಶನʼದ ಮೂಲಕ ಪ್ರಕಟಿಸಿ, ಬಿಡುಗಡೆ ಮಾಡುವ … Continued

ಎನ್‌ಡಬ್ಲ್ಯು ಕೆಆರ್‌ಟಿಸಿಯಲ್ಲಿ ಟಿಕೆಟಿಗೆ ಹಣ ಪಾವತಿಸಲು ಯುಪಿಐ ವ್ಯವಸ್ಥೆ…!

ಹುಬ್ಬಳ್ಳಿ : ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರಿಗೆ ಇಲಾಖೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಇನ್ನುಮುಂದೆ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಪ್ರಾರಂಭ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು , ವಾಯುವ್ಯ ಕರ್ನಾಟಕ ರಸ್ತೆ … Continued

ಕಾನೂನು ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ವಸಂತ ಲದವಾ ನಾಮನಿರ್ದೇಶನ

ಹುಬ್ಬಳ್ಳಿ: ನವನಗರದಲ್ಲಿರುವ ಕರ್ನಾಟಕ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್‌ ಸದಸ್ಯರು ಹಾಗೂ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷರಾದ ವಸಂತ ಲದವಾ ಅವರನ್ನು ಕರ್ನಾಟಕ ಕಾನೂನು ವಿಶ್ವ ವಿದ್ಯಾಲಯದ ಸಿಂಡಿಕೇಟ್‌ ಸದಸ್ಯರನ್ನಾಗಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಅವರು ನಾಮನಿರ್ದೇಶನ ಮಾಡಿದ್ದಾರೆ. ರಾಜ್ಯ ಸರ್ಕಾರವು ಇವರ ಹೆಸರನ್ನು ಶಿಫಾರಸು ಮಾಡಿತ್ತು. ವಸಂತ ಲದವಾ ಅವರು ಹುಬ್ಬಳ್ಳಿ-ಧಾರವಾಡದ ವಾಣಿಜ್ಯ … Continued

ಯೋಗ ವಿಜ್ಞಾನ-ನ್ಯಾಚುರೋಪಥಿ ಜನಪ್ರಿಯಗೊಳಿಸುತ್ತಿರುವ ಡಾ. ವಿವೇಕ ಉಡುಪ

(೧೬-೦೭-೨೦೨೩) ಕೆ.ಎಲ್.ಇ. ತಾಂತ್ರಿಕ ವಿಶ್ವವಿದ್ಯಾಲಯದ ಬಯೋಟೆಕ್ನಾಲಜಿ ಸಭಾಂಗಣದಲ್ಲಿ ಸಾಯಂಕಾಲ ೫.೦೦ ರಿಂದ ೭.೦೦ ವರೆಗೆ ಯೋಗ ಪರ್ಯಟನ ಕಾರ್ಯಕ್ರಮವಿದೆ) ಡಾ. ಎ. ವಿವೇಕ ಉಡುಪ ಅವರು ಡಿವೈನ್ ಪಾರ್ಕ್‌ ಅಂಗಸಂಸ್ಥೆಯಾದ ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದ ವೈದ್ಯಕೀಯ ನಿರ್ದೇಶಕರು ಮತ್ತು ಡಿವೈನ್ ಪಾರ್ಕ್‌ ಟ್ರಸ್ಟಿಗಳಲ್ಲಿ ಒಬ್ಬರು. ಸರ್ವಕ್ಷೇಮ ಆಸ್ಪತ್ರೆಯ ಮೂಲಕ ಸಾವಿರಾರು ರೋಗಿಗಳಿಗೆ ಪ್ರಕೃತಿ … Continued

ಉಚಿತ ಬಸ್‌ ಪ್ರಯಾಣ ಯೋಜನೆ- ಬುರ್ಖಾ ತೊಟ್ಟು ಬಂದ ಪುರುಷ ಸಿಕ್ಕಿಬಿದ್ದ..!

ಹುಬ್ಬಳ್ಳಿ: ಮಹಿಳೆಯರಿಗೆ ನೀಡಲಾಗಿರುವ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆಯ ಲಾಭ ಪಡೆಯಲು ಹೋದ ವ್ಯಕ್ತಿಯೊಬ್ಬ ಚಾಪೆ ಕೆಳಗೆ ನುಸುಳಲು ಹೋಗಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ವ್ಯಕ್ತಿಯೋರ್ವ ಉಚಿತ ಬಸ್ ಪ್ರಯಾಣಕ್ಕಾಗಿ ಬುರ್ಖಾ ಧರಿಸಿ ಸಾರಿಗೆ ಸಂಸ್ಥೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಸಿಕ್ಕಿ ಬಿದ್ದ ಘಟನೆ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಸಂಶಿಯಲ್ಲಿ ನಡೆದಿದೆ ಎಂದು … Continued

ಹುಬ್ಬಳ್ಳಿ : ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಸಾವು

ಹುಬ್ಬಳ್ಳಿ: ತಾಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಯ ಗೋಡೆ ಶುಕ್ರವಾರ ಬೆಳಿಗ್ಗೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ(9) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ ನಾಗವಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಆತನನ್ನು ಹುಬ್ಬಳ್ಳಿಯ ಕಿಮ್ಸ್‌ಗೆ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಹುಬ್ಬಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆ ಫಲಿತಾಂಶ ನೂರಕ್ಕೆ 100

ಹುಬ್ಬಳ್ಳಿ: ನಗರದ ಘಂಟಿಕೇರಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯು ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರಕ್ಕೆ 100 ಫಲಿತಾಂಶ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಪರೀಕ್ಷೆಗೆ ಕುಳಿತ 86 ವಿದ್ಯಾರ್ಥಿಗಳಲ್ಲಿ 43 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚಿನ ಅಂಕ ಪಡೆದಿದ್ದಾರೆ. ಅದರಲ್ಲಿ 23 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. 43 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ … Continued

ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿ: ಸುಧೀಂದ್ರ ಕುಲಕರ್ಣಿ ಮನವಿ

ಹುಬ್ಬಳ್ಳಿ: ಬದಲಾವಣೆಗಾಗಿ ಬಿಜೆಪಿ ವಿರುದ್ಧ ಮತ ಹಾಕಿರಿ. ಮತ್ತೊಮ್ಮೆ ಅಪರೇಷನ್‌ ಕಮಲ ಮೂಲಕ ಜನಾದೇಶದ ಅಪಹರಣ ತಪ್ಪಿಸಲು ಕಾಂಗ್ರೆಸ್ಸಿಗೆ ಸ್ಪಷ್ಟ ಬಹುಮತ ನೀಡಿ ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಲಹಾಗಾರರಾಗಿದ್ದ ಸುಧೀಂದ್ರ ಕುಲಕರ್ಣಿ ರಾಜ್ಯದ ಮತದಾರರಿಗೆ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಕೇವಲ ಡಬಲ್ ಇಂಜಿನ್ ಸರ್ಕಾರವಷ್ಟೇ ಬೇಕಿಲ್ಲ. … Continued

ವೀಡಿಯೊ: ಕಾಂಗ್ರೆಸ್‌ ಸೇರ್ಪಡೆ ನಂತರ ಹುಬ್ಬಳ್ಳಿಗೆ ಬಂದ ಜಗದೀಶ ಶೆಟ್ಟರ ಅವರನ್ನು ತಬ್ಬಿಕೊಂಡು ಗಳಗಳನೆ ಅತ್ತ ಪತ್ನಿ ಶಿಲ್ಪಾ ಶೆಟ್ಟರ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು, ಸೋಮವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದ ಕೆಲವೇ ಗಂಟೆಗಳ ನಂತರ ಅವರು ತಮ್ಮ ಕ್ಷೇತ್ರ ಹುಬ್ಬಳ್ಳಿಗೆ ಆಗಮಿಸಿದಾಗ ಅವರಿಗೆ ಭಾವನಾತ್ಮಕವಾದ ಸ್ವಾಗತ ಸಿಕ್ಕಿತು. ವೀಡಿಯೊದಲ್ಲಿ ಜಗದೀಶ್ ಶೆಟ್ಟರ್ ಅವರ ಪತ್ನಿ ಶಿಲ್ಪಾ ಅವರ ಅವರನ್ನು ತಬ್ಬಿಕೊಂಡು ಅಳುತ್ತಿರುವುದು ಕಂಡುಬಂದಿದೆ. ಇದೇವೇಳೆ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್‌ … Continued

ಹುಬ್ಬಳ್ಳಿ: ಚೆಕ್ ಪೋಸ್ಟ್‌ನಲ್ಲಿ ದಾಖಲೆಗಳಿಲ್ಲದ 15 ಲಕ್ಷ ರೂ. ಹಣ ವಶಕ್ಕೆ

ಹುಬ್ಬಳ್ಳಿ: ನಗರದ ಕಾರವಾರ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಅಂಕೋಲಾ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿನಿಂದ 15 ಲಕ್ಷ ರೂ. ಗಳಷ್ಟು ದಾಖಲೆ ಇಲ್ಲದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಬ್ರೇಜಾ ಕಾರನ್ನು ಚೆಕ್‌ ಪೋಸ್ಟ್‌ನಲ್ಲಿ ಪರಿಶೀಲನೆ ಮಾಡಿದಾಗ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 15 ಲಕ್ಷ … Continued