ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಹುಬ್ಬಳ್ಳಿ : ನಗರದ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಂಜಲಿ ಅಂಬಿಗೇರ ಹತ್ಯೆಯಿಂದ ಮಮನೊಂದು ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ (ಮೇ 18) ಅಂಜಲಿ ಹತ್ಯೆ ಖಂಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಎಂಬವರು ಪ್ರತಿಭಟನೆ ವೇಳೆ … Continued

ಪ್ರೀತಿಸಲು ನಿರಾಕರಣೆ ; ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಮಾದರಿಯಲ್ಲೇ ಮತ್ತೊಂದು ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ನೇಹಾ ಹಿರೇಮಠ ಕೊಲೆಯ ಕಹಿ ನೆನಪಿನಿಂದ ಹೊರಬರುವ ಮೊದಲೇ ಹುಬ್ಬಳ್ಳಿ(Hubballi)ಯಲ್ಲಿ ಅಂತಹದ್ದೇ ಮತ್ತೊಂದು ಘಟನೆ ಬಧುವಾರ (ಮೇ 15) ಬೆಳ್ಳಂಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ತನ್ನ ಪ್ರೀತಿ ನಿರಾಕರಿದ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯ ಬೆಳಂಬೆಳಿಗ್ಗೆ ಯುವತಿಯ ಮನೆಗೆ ನುಗ್ಗಿ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ವೀರಾಪುರ ಓಣಿ … Continued

ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಶುಕ್ರವಾರ ತಡರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್ ಎಂಬಾತನ ಕಾಲಿಗೆ … Continued

೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

(೨೪-೦೪-೨೦೨೪ರ ಬೆಳಿಗ್ಗೆ ೧೧:೩೦ಕ್ಕೆ ಕೊಪ್ಪಿಕರ ರಸ್ತೆಯಲ್ಲಿ ಸಾಹಿತ್ಯ ಭಂಡಾರದ ನೂತನ ನವಿಕೃತಗೊಂಡ ಪುಸ್ತಕ ಮಳಿಗೆಯ ಉದ್ಘಾಟನೆಗೊಳ್ಳುತ್ತಿದೆ. ಈ ನಿಮಿತ್ತ ಲೇಖನ) ೧೯೩೪ ರ ಯುಗಾದಿಯಂದು  ಮ. ಗೋವಿಂದರಾವ್ ಮತ್ತು  ಮ. ಅನಂತಮೂರ್ತಿ ಅವರು  ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಸಾಹಿತ್ಯ ಭಂಡಾರವನ್ನು ಆರಂಭಿಸಿದರು. ಇಂದು ೬೦೦೦ ಚದರ ಅಡಿಯಲ್ಲಿ ನವೀಕರಣಗೊಂಡ ವಿಸ್ತಾರವಾದ ೩ … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ : ನಾಳೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಬಿಜೆಪಿ ಕರೆ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಹಾಗೂ ರಾಜ್ಯಾದ್ಯಂತ ಕಾನೂಣು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಳೆ ಸೋಮವಾರ (ಏಪ್ರಿಲ್ 22) ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿರುವ ಅವರು, ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ. ಇದನ್ನು ಪೋಲಿಸರು … Continued

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

 ಬೆಳಗಾವಿ : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಫಯಾಜ್ ತಂದೆ ಬಾಬಾ ಸಾಹೇಬ್  ಸುಭಾನಿ  ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ಮಗನ ಕೃತ್ಯಕ್ಕೆ ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ನನ್ನ ಮಗನಿಗೆ ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ನನ್ನ ಮಗ ಮಾಡಿದ ತಪ್ಪಿಗೆ ದಯವಿಟ್ಟು ನೇಹಾ ಕುಟುಂಬದವರು, … Continued

ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ನೂತನ ರೈಲು ಮಾರ್ಗದ ಅಂತಿಮ ಸ್ಥಳ ಸರ್ವೆ (FLS) ನಡೆಸಲು ಮಂಜೂರಿ ನೀಡಿದ ರೈಲ್ವೆ ಸಚಿವಾಲಯ

ಶಿರಸಿ: 3.95 ಕೋಟಿ ರೂ ವೆಚ್ಚದಲ್ಲಿ 158 ಕಿ.ಮೀ ಉದ್ದದ ತಾಳಗುಪ್ಪ-ಶಿರಸಿ-ಹುಬ್ಬಳ್ಳಿ ಹೊಸ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷೆ (Final Location Survey (FLS)) ನಡೆಸಲು ರೈಲ್ವೆ ಸಚಿವಾಲಯ ಮಂಜೂರಾತಿ ನೀಡಿದೆ. ಈ ಕುರಿತು ನವದೆಹಲಿಯ ಗತಿಶಕ್ತಿ ಭವನದಲ್ಲಿರುವ ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕರಾದ ಅಭಿಷೇಕ ಎಂಬವರು ಹುಬ್ಬಳ್ಳಿಯ ನೈಋತ್ವ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಿಗೆ … Continued

ಹುಬ್ಬಳ್ಳಿ ಗಲಭೆ ಪ್ರಕರಣ : ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರು

ಹುಬ್ಬಳ್ಳಿ : 1992ರ ಗಲಭೆ ಪ್ರಕರಣದಲ್ಲಿ ಬಂಧಿತನಾದ ಕರಸೇವಕ ಶ್ರೀಕಾಂತ ಪೂಜಾರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸೇಷನ್ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಶ್ರೀಕಾಂತ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ಎರಡೂ ಕಡೆಯ ವಾದ ಆಲಿಸಿ ಆದೇಶ ಗುರುವಾರ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಶುಕ್ರವಾರ … Continued

ಬಂಧಿತ ಶ್ರೀಕಾಂತ ಪೂಜಾರಿ ಕರಸೇವಕನಲ್ಲ, ಆತನ ವಿರುದ್ಧ 16 ಪ್ರಕರಣಗಳಿವೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ಖಂಡಿಸಿ ಬಿಜೆಪಿಯ ಪ್ರತಿಭಟನೆಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ಬಂಧಿತ ವ್ಯಕ್ತಿ ಕರಸೇವಕನಲ್ಲ ಮತ್ತು ಆತನ ವಿರುದ್ಧ 16 ಪೊಲೀಸ್ ಪ್ರಕರಣಗಳಿವೆ ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀಕಾಂತ ಪೂಜಾರಿ ಎಂಬ ವ್ಯಕ್ತಿಯನ್ನು ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಇತರ ದಾಖಲೆಗಳಲ್ಲಿ ಕರಸೇವಕ ಎಂದು … Continued