ನೀವೂ ಗೆಲ್ಲಬಹುದು ಕೃತಿ ಬಿಡುಗಡೆ- ಮಕ್ಕಳಲ್ಲಿ ಚೈತನ್ಯ ಬಿತ್ತುವ ಕೃತಿ : ಪ್ರಕಾಶ ಕಡಮೆ

ಹುಬ್ಬಳ್ಳಿ :ಹದಿಹರೆಯದವರ ಕನಸು ಮತ್ತು ಕನವರಿಕೆಗೆ ಇಂಬು ಕೊಡುತ್ತಲೇ ಅವರನ್ನು ಕೀಳರಿಮೆಯಿಂದ ಹೊರ ತರುವ ಪ್ರಯತ್ನದಲ್ಲಿ ನೀವೂ ಗೆಲ್ಲಬಹುದು ಕೃತಿಯ ಮೂಲಕ ಲೇಖಕರು ಮಾಡಿದ್ದಾರೆ ಎಂದು ಹಿರಿಯ ಸಾಹಿತಿ ಪ್ರಕಾಶ ಕಡಮೆ ಹೇಳಿದರು. ಅವರು ಭಾನುವಾರ ಪುಸ್ತಕ ಬಳಗದ ವತಿಯಿಂದ ಏರ್ಪಡಿಸಿದ್ದ ಲೇಖಕಿ- ಶಿಕ್ಷಕಿ ಕವಿತಾ ಹೆಗಡೆ ಅಭಯಂ ಅವರ ನೀವೂ ಗೆಲ್ಲಬಹುದು ಎಂಬ ಕೃತಿಯನ್ನು … Continued

ಹುಬ್ಬಳ್ಳಿ: ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭದ ಆಮಿಷವೊಡ್ಡಿ ಉದ್ಯಮಿಗೆ ಬರೋಬ್ಬರಿ 32 ಲಕ್ಷ ರೂ. ಪಂಗನಾಮ..!

ಹುಬ್ಬಳ್ಳಿ: ಹೆಚ್ಚಿನ ಲಾಭದ ಆಮಿಷವೊಡ್ಡಿ ಉದ್ಯಮಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಉದ್ಯಮಿ ಬರೋಬ್ಬರಿ 32 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ನಾಣ್ಯದ ಎಂಬವರಿಗೆ ಅಪರಿಚಿತರೊಬ್ಬರು ಪ್ಲಿಪ್‍ಕಾರ್ಟ್ ಕಂಪನಿಯ ಪ್ರಾಜೆಕ್ಟ್‍ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ 32 ಲಕ್ಷ … Continued

ಹುಬ್ಬಳ್ಳಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕಾನೂನು ವಿವಿ ಕುಲಪತಿ ಮೇಲೆ ಮಸಿ-ಹಲವರು ವಶಕ್ಕೆ

ಹುಬ್ಬಳ್ಳಿ: ಕಾನೂನು ಪದವಿ ವಿದ್ಯಾರ್ಥಿಗಳ ಬೇಡಿಕೆಗೆ ಸರಕಾರ, ಕುಲಪತಿ ಸ್ಪಂದಿಸುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ವಿದ್ಯಾರ್ಥಿಯೊಬ್ಬ ಕಾನೂನು ವಿವಿ ಕುಲಪತಿ ಮೇಲೆ ಮಸಿ ಎರಚಿದ ಘಟನೆ ಬುಧವಾರ ನಡೆದಿದೆ. ಸ್ಥಳದಲ್ಲಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೂ ಮಸಿ ಬಿದ್ದಿದೆ. ಘಟನೆ ತೀವ್ರ ರೂಪ ಪಡೆಯುತ್ತಿದ್ದಂತೆ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರತಿಭಟನಾ … Continued

ಹುಬ್ಬಳ್ಳಿ: ಭಾರತೀಯ ಕಿಸಾನ್‌ ಸಂಘದ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತ ರೈತ ಸಮ್ಮೇಳನ ಉದ್ಘಾಟನೆ

ಹುಬ್ಬಳ್ಳಿ: ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ ಘಟಕದ ವತಿಯಿಂದ ಆಯೋಜಿಸಲಾಗಿರುವ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತ ರೈತ ಸಮ್ಮೇಳನ-೨೦೨೨ ಗೋ ಪೂಜೆಯೊಂದಿಗೆ ಸೋಮವಾರ ಆರಂಭವಾಯಿತು. ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಎಂಟನೂರು ದೇಶಿ ಗೋವುಗಳ ಸಂರಕ್ಷರ ಭರಮಣ್ಣ ಗುರಿಕಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗೋವುಗಳು ದೇವರಿದ್ದಂತೆ. ಬಹುಪಯೋಗಿಯಾಗಿವೆ. ಪ್ರತಿಯೊಬ್ಬರೂ … Continued

ಮೂವರನ್ನ ಗುಂಡಿಕ್ಕಿ ಕೊಂದಿದ್ದ ಯೋಧನಿಗೆ 24 ವರ್ಷ ಶಿಕ್ಷೆ

ಹುಬ್ಬಳ್ಳಿ: ಆಸ್ತಿ ಕಲಹದ ಹಿನ್ನೆಲೆಯಲ್ಲಿ 11 ವರ್ಷಗಳ ಹಿಂದೆ ಕುಂದಗೋಳ ತಾಲೂಕು ಬೆಟದೂರು ಗ್ರಾಮದ ಒಂದೇ ಕುಟುಂಬದ ಮೂವರನ್ನು ಗುಂಡಿಟ್ಟು ಹತ್ಯೆಗೈದಿದ್ದ ಸಿಆರ್ ಪಿಎಫ್ ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ 24 ವರ್ಷ ಜೀವಾವಧಿ ಶಿಕ್ಷೆ ಹಾಗೂ 2.20 ಲಕ್ಷ ರೂ. ದಂಡ ವಿಧಿಸಿ ಇಲ್ಲಿಯ 1ನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. … Continued

ಹುಬ್ಬಳ್ಳಿ: ಫೀಲ್ಡಿಂಗ್ ವೇಳೆ ಇಬ್ಬರು ಕ್ರಿಕೆಟ್‌ ಆಟಗಾರರ ಮಧ್ಯೆ ಡಿಕ್ಕಿ: ಒಬ್ಬ ಆಟಗಾರನಿಗೆ ಐಸಿಯುನಲ್ಲಿ ಚಿಕಿತ್ಸೆ

ಹುಬ್ಬಳ್ಳಿ: ಫೀಲ್ಡಿಂಗ್ ವೇಳೆ ಇಬ್ಬರು ಕ್ರಿಕೆಟ್‌ ಆಟಗಾರರ ಮಧ್ಯೆ ಡಿಕ್ಕಿ: ಒಬ್ಬ ಆಟಗಾರ ಐಸಿಯುಗೆ ದಾಖಲು ಹುಬ್ಬಳ್ಳಿ: ಹುಬ್ಬಳ್ಳಿಯ ರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಡಿಕ್ಕಿ ಹೊಡೆದ ಪರಿಣಾಮ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಹುಬ್ಬಳ್ಳಿ ಕ್ರಿಕೆಟ್ ಅಕಾಡೆಮಿ ಎ … Continued

ಕರ್ನಾಟಕದಲ್ಲಿ ಶೇ.83 ಜನರಿಗೆ ಮೊದಲ ಡೋಸ್, ಶೇ.38 ಜನರಿಗೆ 2ನೇ ಡೋಸ್ ನೀಡಿಕೆ; ಸಚಿವ ಸುಧಾಕರ್

ಹುಬ್ಬಳ್ಳಿ : ಕರ್ನಾಟಕದಲ್ಲಿ ಶೇ.83 ಜನರಿಗೆ ಮೊದಲ ಡೋಸ್ ಹಾಗೂ ಶೇ.38 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಭಾರತದಲ್ಲಿ ಅಮೆರಿಕದ ಎರಡೂವರೆ ಪಟ್ಟು, ಬ್ರೆಜಿಲ್ ನ 4 ಪಟ್ಟು, ಜಪಾನ್ ನ 8 ಪಟ್ಟು, ಇಂಗ್ಲೆಂಡ್ ನ 10 ಪಟ್ಟು, ಯುರೋಪ್ ದೇಶಗಳ 2 ಪಟ್ಟು ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯದ ಆರೋಗ್ಯ … Continued

ರಾಜ್ಯದಲ್ಲಿ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಬಲಗೊಳಿಸುವ ಜೊತೆಗೆ ಪೊಲೀಸರ ಕಲ್ಯಾಣಕ್ಕೂ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಿನ ದಿನಗಳಲ್ಲಿ ೧೬ ಸಾವಿರ ಪೊಲೀಸ್ ಹುದ್ದೆಗಳನ್ನು ತುಂಬಲಾಗುವುದು ಎಂದಿದ್ದಾರೆ. ಹುಬ್ಬಳ್ಳಿಯ ಹಳೇ ಸಿ.ಎ.ಆರ್. ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಪಾಲ್ಗೊಂಡು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಿಸಿ ಮಾತನಾಡಿದ … Continued

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರ ಯತ್ನದ ಆರೋಪ: ಸೋಮು ಅವರಾದಿ ಪೊಲೀಸ್ ವಶಕ್ಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ಮಾಡಿದ ಆರೋಪದ ಮೇಲೆ ಪಾಸ್ಟರ್‌ ಸೋಮು ಅವರಾದಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವನಗರ ಎಪಿಎಂಸಿ ಠಾಣೆ ಪೊಲೀಸರು ಸೋಮು ಅವರಾದಿ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ನವನಗರದ ಚರ್ಚ್ ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸಲು ಪ್ರಯತ್ನಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಚರ್ಚಿಗೆ ತೆರಳಿದ್ದ ಹಿಂದೂಪರ ಸಂಘಟನೆಗಳ … Continued

ಹುಬ್ಬಳ್ಳಿಯಲ್ಲಿ ಪೊಲೀಸರಿಂದಲೇ ಗಾಂಜಾ ಮಾರಾಟದ ಆರೋಪ; ಪಿಐ ಸೇರಿ 7 ಸಿಬ್ಬಂದಿ ಅಮಾನತು!

ಹುಬ್ಬಳ್ಳಿ: ಅಪರಾಧಗಳನ್ನು ತಡೆಗಟ್ಟಬೇಕಾದ ಪೊಲೀಸರೇ ಅಪರಾಧ ಕೃತ್ಯಕ್ಕೆ ಇಳಿದರೆ… ಇಂಥದ್ದೊಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಅಪರಾಧಗಳನ್ನು ತಡೆಯಬೇಕಾದ ಪೊಲೀಸರಿಂದಲೇ ಅಪರಾಧ ಕೃತ್ಯ ನಡೆಸಿದ್ದಾರೆ. ತಾವು ವಶಪಡಿಸಿಕೊಂಡ ಗಾಂಜಾವನ್ನೇ ಖಾಕೀ ಪಡೆ ಮಾರಾಟ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಆ ಠಾಣೆಯಲ್ಲಿ ಎಲ್ಲರನ್ನೂ ಈಗ ಅಮಾನತು ಮಾಡಲಾಗಿದೆ. ವಶಪಡಿಸಿಕೊಂಡ ಗಾಂಜಾವನ್ನು ಪೊಲೀಸರೇ ಮಾರಾಟ ಮಾಡುತ್ತಿದ್ದರೆಂಬ ಅಂಶ … Continued