ಆಘಾತಕಾರಿ ವೀಡಿಯೊ..| : ಕ್ರಿಕೆಟ್ ಆಡುತ್ತಿದ್ದ 21 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿ ಕುಸಿದುಬಿದ್ದು ಸಾವು

ಹೈದರಾಬಾದ್: ತೆಲಂಗಾಣದ ರಾಜಧಾನಿ ಹೈದರಾಬಾದ್‌ನಿಂದ ಆಘಾತಕಾರಿ ಘಟನೆಯೊಂದು ಹೊರಬಿದ್ದಿದ್ದು, 21 ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಕ್ರಿಕೆಟ್‌ ಆಡುತ್ತಿರುವಾಗ ಕುಸಿದುಬಿದ್ದು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ, ಏಪ್ರಿಲ್ 4ರಂದು ಈ ಘಟನೆ ನಡೆದಿದ್ದು, ಆ ವಿದ್ಯಾರ್ಥಿಯನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ವಿನಯಕುಮಾರ ಎಂದು ಗುರುತಿಸಲಾಗಿದೆ. ಮೇಡ್ಚಲದ ಸಿಎಂಆರ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ವಿನಯಕುಮಾರ ಇದ್ದಕ್ಕಿದ್ದಂತೆ … Continued

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ….

ಹೈದರಾಬಾದ್ : ದಾರುಣ ಘಟನೆಯೊಂದರಲ್ಲಿ, ಆರ್ಥಿಕ ಸಮಸ್ಯೆಯಿಂದಾಗಿ ದಂಪತಿ ತಮ್ಮ 10 ಮತ್ತು 15 ವರ್ಷದ ಇಬ್ಬರು ಮಕ್ಕಳನ್ನು ಕೊಂದು ನಂತರ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದಿನಲ್ಲಿ ಸೋಮವಾರ ನಡೆದಿದೆ. ಉಸ್ಮಾನಿಯಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಹಬ್ಸಿಗುಡಾದ ರವೀಂದ್ರ ನಗರ ಕಾಲೋನಿಯಲ್ಲಿರುವ ದಂಪತಿಯ ಮನೆಯಲ್ಲಿ ಸೋಮವಾರ ನಾಲ್ಕು ಶವಗಳು ಪತ್ತೆಯಾಗಿವೆ. ಚಂದ್ರಶೇಖರ ರೆಡ್ಡಿ … Continued

ಖ್ಯಾತ ಹಿನ್ನೆಲೆ ಗಾಯಕಿ ಕಲ್ಪನಾ ರಾಘವೇಂದ್ರ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಹೈದರಾಬಾದ್‌ : ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಹಾಗೂ ಗಾಯಕ ಟಿ.ಎಸ್.ರಾಘವೇಂದ್ರ ಅವರ ಪುತ್ರಿ ಕಲ್ಪನಾ ರಾಘವೇಂದ್ರ ಅವರು ಹೈದರಾಬಾದ್‌ನ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕಲ್ಪನಾ ರಾಘವೇಂದ್ರ ಅವರು ಆತ್ಮಹತ್ಯೆಗೆ ಯತ್ನಿಸಿದ ಶಂಕೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ವರದಿಗಳ ಪ್ರಕಾರ, ಆಕೆ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಪ್ರಜ್ಞಾಹೀನ … Continued

ಆಸ್ತಿ ವಿವಾದ : ಕೈಗಾರಿಕೋದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ…!

ಹೈದರಾಬಾದ್‌ ; 86 ವರ್ಷದ ಹೈದರಾಬಾದ್ ಮೂಲದ ಉದ್ಯಮಿ ವೆಲಮಟಿ ಸಿ. ಜನಾರ್ದನ ರಾವ್ ಅವರನ್ನು ಅವರ ಬೇಗಂಪೇಟೆ ನಿವಾಸದಲ್ಲಿ ಅವರ ಮೊಮ್ಮಗನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅವರ ಪಿತ್ರಾರ್ಜಿತ ಆಸ್ತಿಗಾಗಿ ಈ ಹತ್ಯೆ ನಡೆದಿದೆ. ಕಿಲಾರು ಕೀರ್ತಿ ತೇಜ (೨೯) ಫೆಬ್ರವರಿ 6 ರಂದು ರಾತ್ರಿ ತನ್ನ ಅಜ್ಜನಿಗೆ ಚಾಕುವಿನಿಂದ ಇರಿದಿದ್ದಾನೆ. ಫೆಬ್ರವರಿ 8ರ … Continued

ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಕುಕ್ಕರ್‌ ನಲ್ಲಿ ಬೇಯಿಸಿದ ಮಾಜಿ ಸೈನಿಕ…!

ಹೈದರಾಬಾದ್: ಭೀಕರ ಘಟನೆಯೊಂದರಲ್ಲಿ ಮಾಜಿ ಸೈನಿಕನೊಬ್ಬ ತನ್ನ ಪತ್ನಿಯನ್ನು ಕೊಂದು ನಂತರ ಆಕೆಯ ದೇಹವನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ವರದಿಯಾಗಿದೆ. ಹೈದರಾಬಾದಿನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬುಧವಾರ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವನಾದ ಗುರುಮೂರ್ತಿ (45) ಎಂಬಾತ ಕೆಲಕಾಲ ಸೇನೆಯಲ್ಲಿ ಕೆಲಸ ಮಾಡಿದ್ದಾನೆ. ಪ್ರಸ್ತುತ ಕಂಚನ್‌ಬಾಗ್‌ನಲ್ಲಿರುವ … Continued

ಬೀದರಿನಲ್ಲಿ ಹಣದ ವ್ಯಾನ್ ಸಿಬ್ಬಂದಿ ಕೊಂದ ಗಂಟೆಗಳ ನಂತರ ಹೈದರಾಬಾದಿನಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ದರೋಡೆಕೋರರು…!

ಹೈದರಾಬಾದ್: ಗುರುವಾರ ಕರ್ನಾಟಕದ ಬೀದರಿಲ್ಲಿ ಎಟಿಎಂ ನಗದು ವಾಹನದ ಸಿಬ್ಬಂದಿಗೆ ಗುಂಡು ಹಾರಿಸಿ 93 ಲಕ್ಷ ರೂ. ನಗದು ದರೋಡೆ ಮಾಡಿ ಪರಾರಿಯಾದ ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಖಾಸಗಿ ಟ್ರಾವೆಲ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಡೀ ನಗರದಲ್ಲಿ … Continued

ನಟ ಅಲ್ಲು ಅರ್ಜುನ್ ಮನೆಗೆ ನುಗ್ಗಿ ಹಾನಿಗೊಳಿಸಿದ ಗುಂಪು ; 6 ಜನರ ಬಂಧನ

ಹೈದರಾಬಾದ್‌: ಹೈದರಾಬಾದ್‌ನಲ್ಲಿರುವ ತೆಲುಗು ನಟ ಅಲ್ಲು ಅರ್ಜುನ್ ಅವರ ಜೂಬಿಲಿ ಹಿಲ್ಸ್ ನಿವಾಸಕ್ಕೆ ಭಾನುವಾರ ಉಸ್ಮಾನಿಯಾ ವಿಶ್ವವಿದ್ಯಾಲಯದ ಜಂಟಿ ಕ್ರಿಯಾ ಸಮಿತಿಯ ಹಲವಾರು ಸದಸ್ಯರು ನುಗ್ಗಿ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ವಿಶ್ವವಿದ್ಯಾನಿಲಯದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) 6 ಸದಸ್ಯರನ್ನು ಬಂಧಿಸಿದ್ದಾರೆ ಹಾಗೂ ನಂತರ ಅವರನ್ನು ಜುಬಿಲಿ ಹಿಲ್ಸ್ … Continued

ʼಪುಷ್ಪಾ 2′ ಚಿತ್ರ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಸಾವಿನ ಪ್ರಕರಣ ; ಖ್ಯಾತ ನಟ ಅಲ್ಲು ಅರ್ಜುನ್‌ ಬಂಧನ

ಹೈದರಾಬಾದ್: ಕಳೆದ ವಾರ ಹೈದರಾಬಾದ್ ಥಿಯೇಟರ್ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಮಧ್ಯಾಹ್ನ ಪೊಲೀಸರು ಬಂಧಿಸಿದ್ದಾರೆ. ಇಂದು, ಶುಕ್ರವಾರ ಬೆಳಿಗ್ಗೆ ಅಲ್ಲು ಅರ್ಜುನ್ ಅವರನ್ನು ಅವರ ಜೂಬಿಲಿ ಹಿಲ್ಸ್ ಮನೆಯಲ್ಲಿ ಬಂಧಿಸಿ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಯಿತು. ಅಲ್ಲು ಅರ್ಜುನ್‌ ಈಗಾಗಲೇ ತಮ್ಮ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ … Continued

ಸುಳ್ಳು ಭರವಸೆ, ವಂಚನೆ ಮಾಡುವ ಚೀನಾ ಕಾಲ್‌ ಸೆಂಟರ್‌ಗಳ ಕೆಲಸಕ್ಕೆ ಬಲವಂತವಾಗಿ ದೂಡುತ್ತಿದ್ದ ವಂಚಕನನ್ನು 2500 ಕಿಮೀ ಬೆನ್ನಟ್ಟಿ ಹಿಡಿದ ಪೊಲೀಸರು…!

ನವದೆಹಲಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಕಲಿ ಕಾಲ್‌ ಸೆಂಟರ್‌ಗಳ ಮೂಲಕ ಸೈಬರ್‌ ಅಪರಾಧ ಎಸಗಲು ಭಾರತದ ಯುವಕರನ್ನು ಬಲವಂತಪಡಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಶನಿವಾರ ಹೈದರಾಬಾದ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿ ಪೊಲೀಸರು ಇದಕ್ಕಾಗಿ 2,500 ಕಿ.ಮೀ. ದೂರದ ವರೆಗೆ ಆತನನ್ನು ಬೆನ್ನು ಹಿಡಿದುಬಂದು ಹೈದರಾಬಾದ್‌ನಲ್ಲಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ. ಬಂಧಿತ ಕಮ್ರಾನ್ ಹೈದರ್ ಅಲಿಯಾಸ್ … Continued

‘ಪುಷ್ಪಾ 2’ ಪ್ರದರ್ಶನದ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು, ಮಗನಿಗೆ ಗಾಯ

ಹೈದರಾಬಾದ್ : ಬುಧವಾರ (ಡಿಸೆಂಬರ್‌ ೪) ಸಂಜೆ ಹೈದರಾಬಾದ್‌ನ ಥಿಯೇಟರ್‌ನಲ್ಲಿ ‘ಪುಷ್ಪಾ 2: ದಿ ರೂಲ್’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ಘಟನೆ ನಡೆದಿದ್ದು, ಚಿತ್ರದ ನಾಯಕ ನಟ ಅಲ್ಲು … Continued