14 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದು, ಒಟ್ಟು 14 ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮತ್ತೆ ಕೆಲವರಿಗೆ ಹೆಚ್ಚುವರಿ ಹೊಣೆಗಾರಿಕೆಗಳನ್ನು ನೀಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ ಆದೇಶದ ಮೇರೆಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ ಅವರು ಈ ಅಧಿಕೃತ … Continued

ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued

ಕಾರು ಅಪಘಾತ: ಐಎಎಸ್‌ ಅಧಿಕಾರಿ ಸೇರಿ ಮೂವರು ಸಾವು

ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued

ಬಡ್ತಿ ಕೋರಿಕೆ: ಎರಡು ತಿಂಗಳಲ್ಲಿ ಐಪಿಎಸ್‌ ಅಧಿಕಾರಿ ರೂಪಾ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದ್ದು, ಎರಡು ತಿಂಗಳಲ್ಲಿ ಮೌದ್ಗಿಲ್‌ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶಿಸಿದೆ. ಐಎಎಸ್‌ ಅಧಿಕಾರಿ ರೋಹಿಣಿ … Continued

ಯುಪಿಎಸ್‌ಸಿ ಫಲಿತಾಂಶ 2024 ಪ್ರಕಟ ; ದೇಶದ 25 ಟಾಪರ್ಸ್‌, ಕರ್ನಾಟಕದ ಟಾಪರ್‌ಗಳ ಪಟ್ಟಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ವು ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆ (CSE) ಅಂತಿಮ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಇದರಲ್ಲಿ ಸೆಪ್ಟೆಂಬರ್ 2024 ರಲ್ಲಿ ಲಿಖಿತ ಪರೀಕ್ಷೆ ಮತ್ತು ಜನವರಿ ಮತ್ತು ಏಪ್ರಿಲ್ 2025 ರ ನಡುವೆ ನಡೆದ ವ್ಯಕ್ತಿತ್ವ ಪರೀಕ್ಷೆ/ಸಂದರ್ಶನಗಳು ಸೇರಿವೆ. ಪ್ರಯಾಗರಾಜ್‌ನ ಶಕ್ತಿ ದುಬೆ 1ನೇ ಶ್ರೇಯಾಂಕ (ಮೊದಲ ಸ್ಥಾನ) ಗಳಿಸಿದ್ದಾರೆ. … Continued

ʼಒನ್ ಮಿನಿಟ್ ಅಪಾಲಜಿʼ ಪುಸ್ತಕವನ್ನು ಓದಿ ; ಡಿ.ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಅಭಿಪ್ರಾಯಪಟ್ಟಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ … Continued

ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ 21 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಅವರ ಬದಲಿಗೆ ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್​ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಲಕ್ಷ್ಮಿಕಾಂತ್ ಅವರು ಈ ಹಿಂದೆ ಮೈಸೂರು ಪಾಲಿಕೆ ಆಯುಕ್ತರಾಗಿದ್ದರು. ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಡಾ. … Continued

ನಟ-ಮಾಜಿ ಐಎಎಸ್​ ಅಧಿಕಾರಿ ಕೆ. ಶಿವರಾಮಗೆ ಹೃದಯಾಘಾತ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ಕನ್ನಡದ ನಟ ಕೆ. ಶಿವರಾಮ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, 71 ವರ್ಷ ವಯಸ್ಸಿನ ಕೆ ಶಿವರಾಮ ಅವರಿಗೆ ಆರೋಗ್ಯ ಸಮಸ್ಯೆಯಾಗಿ ಕೆಲದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು … Continued