ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 | 8 ಕ್ರಿಕೆಟ್‌ ತಂಡಗಳು ಭಾಗಿ ; ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ ಪಂದ್ಯ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ (ಡಿಸೆಂಬರ್ 24) ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತಕ್ಕೆ ಅವಕಾಶ ಕಲ್ಪಿಸಲು ಪಿಸಿಬಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಪಾಕಿಸ್ತಾನವು ಪಂದ್ಯಾವಳಿಯನ್ನು ಆಯೋಜಿಸುತ್ತದೆ ಎಂದು ಐಸಿಸಿ (ICC) ಪ್ರಕಟಿಸಿದ ನಂತರ ಪಂದ್ಯಗಳು ನಡೆಯುವ ಸ್ಥಳಗಳು ಸೇರಿದಂತೆ ಎಲ್ಲಾ ತಂಡಗಳ ವೇಳಾಪಟ್ಟಿಯನ್ನು … Continued

ಕೊನೆಗೂ ಹೈಬ್ರಿಡ್‌ ಮಾದರಿಯಲ್ಲೇ ಚಾಂಪಿಯನ್ಸ್ ಟ್ರೋಫಿ-2025 ; ದೃಢಪಡಿಸಿದ ಐಸಿಸಿ, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟ

ನವದೆಹಲಿ: ಐಸಿಸಿ (ICC) ಚಾಂಪಿಯನ್ಸ್ ಟ್ರೋಫಿ 2025 ರ ಆಟದ ಸ್ಥಳದ ಸುತ್ತಲಿನ ಗೊಂದಲ ಕೊನೆಗೊಂಡಿದೆ. ತಿಂಗಳ ವಿಳಂಬದ ನಂತರ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC)ಅಂತಿಮವಾಗಿ ಕಾರ್ಯಕ್ರಮದ ಸ್ಥಳಗಳನ್ನು ಅಧಿಕೃತವಾಗಿ ಘೋಷಿಸಿದೆ. “ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಪಾಕಿಸ್ತಾನ ಮತ್ತು ತಟಸ್ಥ ಸ್ಥಳದಲ್ಲಿ ಆಡಲಾಗುವುದು” ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಮತ್ತೊಂದು ಪ್ರಮುಖ … Continued

‘ಕ್ರಿಕೆಟ್ ಗೆಲ್ಲಬೇಕು, ಅದು ಅತ್ಯಂತ ಮುಖ್ಯ’: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುವ ಬಗ್ಗೆ ಸುಳಿವು ನೀಡಿದ ಪಿಸಿಬಿ ಮುಖ್ಯಸ್ಥ

ನವದೆಹಲಿ: ಶನಿವಾರ ನಡೆದ ಐಸಿಸಿಯ ವರ್ಚುವಲ್ ಸಭೆಯ ನಂತರ 2025 ರ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿರುವ ಆತಿಥೇಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಮಾಹಿತಿ ನೀಡಿಲ್ಲ. ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸುವ ನಿಲುವು ತಳೆದಿದ್ದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಈಗ … Continued

ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಚಾಂಪಿಯನ್ಸ್ ಟ್ರೋಫಿ ಕೊಂಡೊಯ್ಯಲು ಪಾಕಿಸ್ತಾನ ಕ್ರಿಕೆಟ್‌ ನಿಯಂತ್ರಣ ಮಂಡಳಿಗೆ ನಿರ್ಬಂಧಿಸಿದ ಐಸಿಸಿ : ವರದಿ

ಭಾರತವನ್ನು ಕೆರಳಿಸುವ ಕೆಲಸಕ್ಕೆ ಮುಂದಾಗಿದ್ದ ಪಾಕಿಸ್ತಾನಕ್ಕೆ, ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ. ಅದರಂತೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ವಿವಾದಿತ ಪ್ರದೇಶವಾದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಕೊಂಡೊಯ್ಯುವಂತಿಲ್ಲ ಎಂದು ಪಾಕಿಸ್ತಾನಕ್ಕೆ ಐಸಿಸಿ ನಿರ್ಬಂಧಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಚಾಂಪಿಯನ್ಸ್ ʼಟ್ರೋಫಿ ಪ್ರವಾಸʼವನ್ನು ‘ಪಾಕಿಸ್ತಾನ ಆಕ್ರಮಿತ ಕಾಶ್ಮೀರ’ದ ಮೂರು ನಗರಗಳಲ್ಲಿಯೂ ಆಯೋಜಿಸುವ, … Continued

ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಹೋಗಲ್ಲ ಎಂದ ಭಾರತ : ಪಿಸಿಬಿಗೆ ಮಾಹಿತಿ ನೀಡಿದ ಐಸಿಸಿ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾರತದ ಕ್ರಿಕೆಟ್‌ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂಬುದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾನುವಾರ ದೃಢಪಡಿಸಿದೆ. “ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ತಮ್ಮ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು … Continued

ಮುಂದಿನ ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಕ್ರಿಕೆಟ್‌ ಮಂಡಳಿಯ (BCCI) ಹಾಲಿ ಗೌರವ ಕಾರ್ಯದರ್ಶಿ ಜಯ್ ಶಾ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ICC) ಸ್ವತಂತ್ರ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಮತ್ತು 1 ಡಿಸೆಂಬರ್ 2024 ರಂದು ಅವರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ. ಆಗಸ್ಟ್ 20 ರಂದು, ಪ್ರಸ್ತುತ ಐಸಿಸಿ (ICC) ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿಯ ಮುಕ್ತಾಯವಾಗಲಿದೆ. ಅಧ್ಯಕ್ಷ … Continued

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ನಂ.1ನೇ ಸ್ಥಾನಕ್ಕೆ ಜಿಗಿದ ಭಾರತ: ಎಲ್ಲ ಮಾದರಿಯಲ್ಲೂ ಭಾರತವೇ ಈಗ ನಂ.1…

ನವದೆಹಲಿ : ಭಾರತವು ಧರ್ಮಶಾಲಾದಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು 4-1 ಅಂತರದಿಂದ ಗೆದ್ದ ಒಂದು ದಿನದ ನಂತರ, ರೋಹಿತ್ ಶರ್ಮಾ ತಂಡವು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ವಿಶ್ವ ಕ್ರಿಕೆಟ್ ಆಡಳಿತ ಮಂಡಳಿ(ಐಸಿಸಿ)ಯು ಬಿಡುಗಡೆ ಮಾಡಿದ ಇತ್ತೀಚಿನ ಪೆಕಿಂಗ್ ಆರ್ಡರ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಹಿಂದಿಕ್ಕೆ ಅಗ್ರಸ್ಥಾನಕ್ಕೆ … Continued

ಸ್ಟಾಪ್ ಕ್ಲಾಕ್ ನಿಯಮ ಜಾರಿಗೆ ತಂದ ಐಸಿಸಿ : ಬೌಲಿಂಗ್ ತಡವಾದರೆ 5 ರನ್ ದಂಡ….!

ಸ್ಟಾಪ್ ಕ್ಲಾಕ್ ಎಂಬ ಹೊಸ ನಿಯಮವನ್ನು ಐಸಿಸಿ ಜಾರಿಗೆ ತಂದಿದೆ. ಅಹಮದಾಬಾದ್​ನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ನಿಯಮಗಳನ್ನು ತರಲಾಗುತ್ತದೆ ಮತ್ತು ಏಕದಿನ ಹಾಗೂ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಬಳಸಲಾಗುವುದು ಎಂದು ಮಾಹಿತಿ ನೀಡಿದೆ. ಪುರುಷರ ಅಂತಾರಾಷ್ಟ್ರೀಯ ಏಕದಿನ ಪಂದ್ಯ (ODI) ಮತ್ತು T20 ಪಂದ್ಯಗಳಲ್ಲಿ ಬೌಲಿಂಗ್ ಮಾಡುವ ತಂಡಗಳು ಇನಿಂಗ್ಸ್‌ನಲ್ಲಿ ಮೂರನೇ ಸಲ ಮುಂದಿನ … Continued

ಕ್ರಿಕೆಟ್‌ ವಿಶ್ವಕಪ್ 2023 : ʼಪ್ಲೇಯರ್ ಆಫ್ ದಿ ಟೂರ್ನಮೆಂಟ್‌ʼ ರೇಸ್‌ನಲ್ಲಿ ನಾಲ್ವರು ಭಾರತದ ಆಟಗಾರರು ಸೇರಿ 9 ಆಟಗಾರರ ಹೆಸರು ಪ್ರಕಟಿಸಿದ ಐಸಿಸಿ

ನವದೆಹಲಿ: ಭಾನುವಾರ ಅಹಮದಾಬಾದಿನಲ್ಲಿ ನಡೆಯಲಿರುವ ಕ್ರಿಕೆಟ್‌ ವಿಶ್ವಕಪ್ 2023 ಅಂತಿಮ ಪಂದ್ಯದ ಮೊದಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪಂದ್ಯಾವಳಿ ಆಟಗಾರ ಪ್ರಶಸ್ತಿ (Player of the tournament award)ಗಾಗಿ ಸ್ಪರ್ಧಿಗಳನ್ನು ಪ್ರಕಟಿಸಿದೆ. ಐಸಿಸಿ(ICC)ಯು ಪ್ರತಿಷ್ಠಿತ ಪ್ರಶಸ್ತಿಗಾಗಿ ಒಂಬತ್ತು ಸ್ಪರ್ಧಿಗಳ ಹೆಸರನ್ನು ಬಹಿರಂಗಪಡಿಸಿದೆ. ನಾಲ್ಕು ಸೆಮಿಫೈನಲಿಸ್ಟ್ ತಂಡಗಳ ಒಂಬತ್ತು ಆಟಗಾರರನ್ನು ಪ್ರಶಸ್ತಿಗಾಗಿ ಪಟ್ಟಿ ಮಾಡಲಾಗಿದೆ. ಈ … Continued