ಜನ ಸಹಕರಿಸಿದರೆ ಜೂ.7ರ ನಂತರ ಲಾಕ್‍ಡೌನ್ ವಿಸ್ತರಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ:ಸಿಎಂ

ಬೆಂಗಳೂರು: ಜನ ಅಗತ್ಯ ಸಹಕಾರ ನೀಡಿದರೆ ಮಾತ್ರ ಜೂನ್ 7ರ ನಂತರ ಲಾಕ್‍ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರ ವರೆಗೂ ಎಂದಿನಂತೆ ಲಾಕ್‍ಡೌನ್ ಮುಂದುವರೆಯಲಿದೆ. ಅದರಲ್ಲಿ ಯಾವುದೇ ಬದಲಾವಣೆಯಿಲ್ಲ. ಜೂ.7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್‍ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು. … Continued