ತಕ್ಷಣವೇ ಮನೆ, ಬೆಳೆ ಪರಿಹಾರ ವಿತರಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು : ಮಳೆ ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು, ಭಾನುವಾರ ಗೃಹ ಕಚೇರಿ ಕೃಷ್ಣಾದಿಂದ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. … Continued