ಶಾಲೆಗಳನ್ನು ಶೀಘ್ರ ಆರಂಭಿಸಿ: ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಬೆಂಗಳೂರು: ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ. ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ ಎಂದು ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಗುರುವಾರ ಸೂಚಿಸಿದ್ದಾರೆ. ಹಿಜಾಬ್ ವಿವಾದ ಸಂಬಂಧ ಮೂರನೇ ದಿನ ವಿಚಾರಣೆ ಇಂದು, ಗುರುವಾರ ಮಧ್ಯಾಹ್ನ ಆರಂಭವಾಯಿತು. ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್.​ ದೀಕ್ಷಿತ್​ ಅವರಿರುವ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. … Continued