ಎಸ್‌ಐಆರ್‌ : ರಾಹುಲ್‌ ಗಾಂಧಿ-ಇಂಡಿಯಾ ಮೈತ್ರಿಕೂಟ ನಾಯಕರ ಅರ್ಜಿಯಲ್ಲಿ 14 ಲೋಪ ಪತ್ತೆಹಚ್ಚಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಮತ್ತು ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ರಾಹುಲ್‌ ಗಾಂಧಿ ಸೇರಿದಂತೆ  ಇಂಡಿಯಾ ಮೈತ್ರಿಕೂಟದ ನಾಯಕರು ಸಲ್ಲಿಸಿರುವ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿ 14 ಲೋಪಗಳನ್ನು ಗುರುತಿಸಿದೆ. ಈ ಲೋಪಗಳನ್ನು ಸರಿಪಡಿಸುವವರೆಗೆ ಅರ್ಜಿಯನ್ನು ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಪಟ್ಟಿ … Continued

ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಆಯೋಜಿಸಿದ್ದ ಇಂಡಿಯಾ ಮೈತ್ರಿಕೂಟದ ಔತಣಕೂಟಕ್ಕೆ ಅಖಿಲೇಶ ಗೈರು: ಇದು ಬಿರುಕಿನ ಸೂಚನೆಯೇ?

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಆಯೋಜಿಸಿದ್ದ ಇಂಡಿಯಾ (INDIA) ಮೈತ್ರಿಕೂಟದ ನಾಯಕರ ಮಧ್ಯಾಹ್ನದ ಔತಣಕೂಟದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಪ್ರತಿನಿಧಿಗಳು ಭಾಗವಹಿಸದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಈ ಗೈರುಹಾಜರಿಗೆ ಆಹ್ವಾನ ನೀಡಲು ವಿಳಂಬವಾಗಿದ್ದೇ ಕಾರಣ ಎಂದು ಸ್ಪಷ್ಟಪಡಿಸಿದೆ. ಆದರೆ ರಾಹುಲ್ ಗಾಂಧಿ ನಡೆಸುತ್ತಿರುವ ಅನಿರೀಕ್ಷಿತ ಪ್ರತಿಭಟನೆಗಳ ಕುರಿತು ಮೈತ್ರಿಕೂಟದ ಮಿತ್ರಪಕ್ಷಗಳ … Continued

ದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪ್ರತಿಭಟನೆ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, ನಂತರ ಬಿಡುಗಡೆ

ನವದೆಹಲಿ: ಚುನಾವಣಾ ಆಯೋಗ (ಇಸಿ) ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶಕುಮಾರ ವಿರುದ್ಧ ಇಂಡಿಯಾ ಮೈತ್ರಿಕೂಟ ಮಂಗಳವಾರ ನಡೆಸಿದ ಪ್ರತಿಭಟನೆ ವೇಳೆ ರಾಜಧಾನಿ ನವದೆಹಲಿಯಲ್ಲಿ ಹೈಡ್ರಾಮಾ ನಡೆಯಿತು. ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬ್ಯಾರಿಕೇಡ್ ಏರಿ ತ್ರಿವರ್ಣ ಧ್ವಜವನ್ನು ಪ್ರದರ್ಶಿಸಿದರು. ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ಅವರ … Continued

ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued

ತಮಿಳುನಾಡು ಚುನಾವಣೆ 2026 : ಎನ್‌ಡಿಎ-ಡಿಎಂಕೆ ನಡುವಿನ ಜಿದ್ದಾಜಿದ್ದಿಯಲ್ಲಿ ಗೆಲ್ಲೋದು ಯಾರು ; ‘ಮ್ಯಾಟ್ರಿಜ್’ ಸಮೀಕ್ಷೆ ಹೇಳಿದ್ದೇನು ?

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಕಣ ಸಜ್ಜಾಗುತ್ತಿದ್ದು,  ಆಡಳಿತಾರೂಢ ಡಿಎಂಕೆ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಹಾಗೂ ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆಯಿದೆ ಎಂದು ‘ಮ್ಯಾಟ್ರಿಜ್’ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯು ಮುನ್ಸೂಚನೆ ನೀಡಿದೆ. ಸೋಮವಾರ ಪ್ರಕಟವಾದ ಈ ಸಮೀಕ್ಷಾ ವರದಿಯು, ಎಐಎಡಿಎಂಕೆ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಅಲ್ಪ … Continued

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಪ್ರತಿಭಟನೆ: ಕಾಂಗ್ರೆಸ್-ಮಿತ್ರಪಕ್ಷಗಳ ನಡುವೆ ಹೆಚ್ಚಿದ ಬಿರುಕು

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಶೃಂಗಸಭೆ(AI Summit)ಯಲ್ಲಿ ಯುವ ಕಾಂಗ್ರೆಸ್ ನಡೆಸಿದ ಅರೆಬೆತ್ತಲೆ ಪ್ರತಿಭಟನೆಯು ಈಗ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ರಾಜಕೀಯ ಮುಜುಗರವಾಗಿ (Albatross) ಪರಿಣಮಿಸಿದೆ. ಮೊದಲಿಗೆ ವಿಪಕ್ಷಗಳ ‘ಇಂಡಿಯಾ’ (INDIA) ಮೈತ್ರಿಕೂಟದ ಮಿತ್ರಪಕ್ಷಗಳು ಈ ಪ್ರತಿಭಟನೆಯಿಂದ ಅಂತರ ಕಾಯ್ದುಕೊಂಡಿದ್ದವು. ಈಗ ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗವಾಗಿ ಟೀಕಿಸಿದ ನಂತರ, ಮಿತ್ರಪಕ್ಷಗಳು ಕೂಡ ಧ್ವನಿ ಎತ್ತುತ್ತಿವೆ. … Continued

ಮಮತಾ ಬ್ಯಾನರ್ಜಿಯನ್ನು ಇಂಡಿಯಾ ಮೈತ್ರಿಕೂಟದ ನಾಯಕಿ ಮಾಡಿ, ರಾಹುಲ್‌ ಗಾಂಧಿ ಹಿಂದೆ ಸರಿಯಲಿ..: ಮಣಿಶಂಕರ ಅಯ್ಯರ್ ಹೇಳಿಕೆ

ಕೋಲ್ಕತ್ತಾ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್, ಈಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಹುಲ್ ಗಾಂಧಿಯವರು ಇಂಡಿಯಾ (INDIA) ಮೈತ್ರಿಕೂಟದ ‘ಮುನ್ನಡೆಸುವ ಸೀಟನ್ನು’ ಪ್ರಾದೇಶಿಕ ಪಕ್ಷಗಳ ನಾಯಕರಿಗೆ ಬಿಟ್ಟುಕೊಡಬೇಕು ಎಂದು ಸಲಹೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದಾರೆ. ಮಮತಾ ಇಲ್ಲದಿದ್ದರೆ ‘ಇಂಡಿಯಾ’ ಇಲ್ಲ! … Continued

ರಾಜ್ಯಸಭೆ 37 ಸ್ಥಾನಗಳಿಗೆ ಚುನಾವಣೆ : ಎನ್‌ ಡಿಎಗೆ ಹೆಚ್ಚಿನ ಸ್ಥಾನಗಳ ನಿರೀಕ್ಷೆ; ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯ ಭೀತಿ

ನವದೆಹಲಿ: ಮಾರ್ಚ್ 16 ರಂದು 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಮೇಲ್ಮನೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟ ತನ್ನ ಸ್ಥಾನವನ್ನು ಇನ್ನಷ್ಟು ಗಟ್ಟಿಗೊಳಿಸಿಕೊಳ್ಳುವ ಸೂಚನೆಗಳಿವೆ. ಮಹಾರಾಷ್ಟ್ರ, ಬಿಹಾರ ಮೊದಲಾದ ರಾಜ್ಯಗಳಲ್ಲಿ ವಿರೋಧ ಪಕ್ಷಗಳ ಆಂತರಿಕ ಹಿತಾಸಕ್ತಿಗಳು ಭಿನ್ನವಾಗಿರುವುದರಿಂದ, ಇಂಡಿಯಾ (INDIA) ಮೈತ್ರಿಕೂಟವು ಒಗ್ಗಟ್ಟಾಗಿ ಉಳಿಯುವುದೇ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ. … Continued

ಈಗ ಲೋಕಸಭೆ ಚುನಾವಣೆ ನಡೆದರೆ ಗೆಲ್ಲುವುದು ಯಾರು..? : ʼಮೂಡ್ ಆಫ್ ದಿ ನೇಷನ್ʼ ಸರ್ವೆ ಏನು ಹೇಳುತ್ತದೆ…?

2025ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಚುನಾವಣಾ ಪ್ರಾಬಲ್ಯವನ್ನು ಮುಂದುವರೆಸಿತು, ದೆಹಲಿ ಮತ್ತು ಬಿಹಾರದಲ್ಲಿ ಗೆಲುವು ಸಾಧಿಸಿತು.  ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಮತ್ತು ಮಹಾರಾಷ್ಟ್ರದ ಇತರ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಭಾರೀ ಗೆಲುವಿನೊಂದಿಗೆ 2026 ಪ್ರಾರಂಭವಾಯಿತು. ಇದೇವೇಳೆ ಇಂಡಿಯಾ ಟುಡೇ-ಸಿ ವೋಟರ್ ನಡೆಸಿದ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯು ಈಗ … Continued