ಇ20 ಪೆಟ್ರೋಲ್ ಬಳಕೆಯಿಂದ ವಾಹನದ ವೇಗವರ್ಧನೆ ಹೆಚ್ಚಳ, ಗುಣಮಟ್ಟದ ಸವಾರಿ, 30% ಇಂಗಾಲದ ಹೊರಸೂಸುವಿಕೆ ಕಡಿಮೆ : ಕೇಂದ್ರ

ನವದೆಹಲಿ: 20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್ (E20) ಬಿಡುಗಡೆ ಬಗ್ಗೆ ಹೆಚ್ಚುತ್ತಿರುವ ಟೀಕೆಗಳ ನಡುವೆ, ಕೇಂದ್ರ ಸರ್ಕಾರವು ಮಂಗಳವಾರ ಬಲವಾದ ಪ್ರತಿವಾದವನ್ನು ಮಂಡಿಸಿದೆ. ಇದು ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ತೈಲ ಆಮದು ಬಿಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಮಾತ್ರವಲ್ಲದೆ ವಾಹನಗಳ ಉತ್ತಮ ವೇಗವರ್ಧನೆ, ವಾಹನ ಸವಾರಿಯ ಸುಧಾರಿತ ಗುಣಮಟ್ಟ ಮತ್ತು … Continued

ನ್ಯಾ. ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ಲೋಕಸಭಾ ಸ್ಪೀಕರ್

ನವದೆಹಲಿ: ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ಸುಟ್ಟು ಕರಕಲಾದ ನಗದು ರಾಶಿ ಪತ್ತೆಯಾದ ಪ್ರಕರಣದ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಮೂವರು ಸದಸ್ಯರ ಸಮಿತಿ ರಚಿಸಿದ್ದು, ನ್ಯಾ. ವರ್ಮಾ ಅವರನ್ನು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಯಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಯನ್ನು ಔಪಚಾರಿಕವಾಗಿ … Continued

ವಕ್ಫ್ ತಿದ್ದುಪಡಿ ಕಾಯಿದೆ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯಿದೆ- 2025ಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿಗಳಾದ ಆಗಸ್ಟೀನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮಧ್ಯಂತರ ಪರಿಹಾರದ ಕುರಿತು ತನ್ನ ಆದೇಶ ಕಾಯ್ದಿರಿಸುವ ಮೊದಲು ಮೂರು ದಿನಗಳ ಕಾಲ ಎಲ್ಲ ಪಕ್ಷಕಾರರ … Continued

ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಜಾತಿ ಜನಗಣತಿಯು ಮುಂದಿನ ರಾಷ್ಟ್ರೀಯ ಜನಗಣತಿದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪ್ರಕಟಿಸಿದ್ದಾರೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. “ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ … Continued

ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್‌ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued

119 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗೂಗಲ್ ಪ್ಲೇ ಸ್ಟೋರ್‌ನಿಂದ 119 ಚೀನೀ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಸೂಚನೆ ನೀಡುವ ಮೂಲಕ ಸರ್ಕಾರವು ಮತ್ತೊಂದು ಡಿಜಿಟಲ್ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಅಪ್ಲಿಕೇಶನ್‌ಗಳು ಚೀನಾ ಮತ್ತು ಹಾಂಗ್ ಕಾಂಗ್‌ನ ಡೆವಲಪರ್‌ಗಳ ಜೊತೆ ಸಂಪರ್ಕ ಹೊಂದಿವೆ, ನಿರ್ಬಂಧಿಸಿದ ಅಪ್ಲಿಕೇಶನ್‌ಗಳಲ್ಲಿ ಹಲವು ವೀಡಿಯೊ ಮತ್ತು ಧ್ವನಿ ಚಾಟ್ ಪ್ಲಾಟ್‌ಫಾರ್ಮ್‌ಗಳು ಸೇರಿವೆ. ಈ ಎಲ್ಲಾ ಅಪ್ಲಿಕೇಶನ್‌ಗಳು ಭಾರತದ ಗೂಗಲ್ … Continued

ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ (UPS) ಜಾರಿ : ಏನಿದು ಯೋಜನೆ…?

ನವದೆಹಲಿ: ಕೇಂದ್ರ ಸರಕಾರಿ ನೌಕರರಿಗೆ ನಿವೃತ್ತಿಯ ನಂತರ ಆರ್ಥಿಕ ಭದ್ರತೆಯ ಖಾತ್ರಿ ನೀಡುವ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್‌) ಪ್ರಸಕ್ತ ವರ್ಷದ ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪರಿಷ್ಕೃತ ಯೋಜನೆಯಲ್ಲಿಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಮತ್ತು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌)ಗಳನ್ನು ಸಂಯೋಜಿಸಲಾಗಿದೆ. ಈಗಾಗಲೇ ಎನ್‌ಪಿಎಸ್‌ನಲ್ಲಿ ದಾಖಲಾಗಿರುವ ಕೇಂದ್ರ ಸರಕಾರಿ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ಮನಮೋಹನ ಸಿಂಗ್ ಸ್ಮಾರಕ ; ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ತಂಗುದಾಣ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ … Continued

ಅಂಡಮಾನ್-ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ : ಅದರ ನೂತನ ಹೆಸರು…

ನವದೆಹಲಿ : ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ‘ಶ್ರೀ ವಿಜಯ ಪುರಂ’ ಎಂದು ಮರುನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರ ಬಂದಿದೆ. ಪೋರ್ಟ್ ಬ್ಲೇರ್ ಪಟ್ಟಣವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ … Continued