ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸಂವಿಧಾನ ಪೀಠ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ. ಆರ್ಟಿಕಲ್ 370 … Continued

ಅಕ್ಟೋಬರ್ 2025 ರಿಂದ ಟ್ರಕ್ ಕ್ಯಾಬಿನ್ ಗೆ ಎಸಿ ಅಳವಡಿಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಅಕ್ಟೋಬರ್ 2025 ರಿಂದ ಜಾರಿಗೆ ಬರುವಂತೆ ಎಲ್ಲಾ ಹೊಸ ಲಾರಿಗಳಿಗೆ ಕ್ಯಾಬಿನ್ ಗೆ ಹವಾನಿಯಂತ್ರಕ (AC) ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹವಾನಿಯಂತ್ರಿತ ಟ್ರಕ್ ಕ್ಯಾಬಿನ್‌ಗಳನ್ನು ಕಡ್ಡಾಯಗೊಳಿಸಲು ಅಧಿಸೂಚನೆ ಹೊರಡಿಸಿರುವುದರಿಂದ ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ಗಳು ತಮ್ಮ ಚಾಲಕರಿಗೆ … Continued

ಐತಿಹಾಸಿಕ ಮೈಲಿಗಲ್ಲು…: ಕೇಂದ್ರದ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಅತ್ಯಂತ ಹಳೆಯ ಸಶಸ್ತ್ರ ಗುಂಪು ಯು ಎನ್‌ ಎಲ್‌ ಎಫ್‌

ನವದೆಹಲಿ: ಐತಿಹಾಸಿಕ ಬೆಳವಣಿಗೆಯಲ್ಲಿ, ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರವು ಬುಧವಾರ ನವದೆಹಲಿಯಲ್ಲಿ ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಜೊತೆ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಶಾಂತಿ ಒಪ್ಪಂದವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು … Continued

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿಪಡಿಸಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸಲಹೆ

ಬೆಂಗಳೂರು : ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರವು 2021ರ ಫೆಬ್ರವರಿ ಮತ್ತು 2022ರ ಅವಧಿಯಲ್ಲಿ ಮಾಡಿದ್ದ ಆದೇಶಗಳನ್ನು ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿರುವ ಕರ್ನಾಟಕ … Continued

ಜನನದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಗೆ 60 ದಿನಗಳ ವಿಶೇಷ ಹೆರಿಗೆ ರಜೆ: ಕೇಂದ್ರ

ನವದೆಹಲಿ: ಜನನದ ನಂತರ ಮಗುವಿನ ಮರಣದ ಸಂದರ್ಭದಲ್ಲಿ ಎಲ್ಲಾ ಮಹಿಳಾ ಕೇಂದ್ರ ಸರ್ಕಾರಿ ನೌಕರರು 60 ದಿನಗಳ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಶುಕ್ರವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ತಾಯಿಯ ಜೀವನದ ಮೇಲೆ ದೂರಗಾಮಿ ಪರಿಣಾಮ ಬೀರುವ ಮಗುವಿನ ಜನನದ ನಂತರ ಅಥವಾ ಮಗುವಿನ ಮರಣದ ಕಾರಣದಿಂದ … Continued

ಅಟಲ್​ ಪಿಂಚಣಿ ಯೋಜನೆಯಲ್ಲಿ ಬದಲಾವಣೆ: ಅಕ್ಟೋಬರ್‌ 1ರಿಂದ ಇವರಿಗೆ ಈ ಯೋಜನೆಗೆ ಸೇರಲು ಸಾಧ್ಯವಾಗುವುದಿಲ್ಲ

ನವದೆಹಲಿ: ಯೋಜನೆಯ ಪ್ರಯೋಜನಗಳು ಬಡವರು ಮತ್ತು ಹಿಂದುಳಿದವರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಆದಾಯ ತೆರಿಗೆದಾರರು ಈ ವರ್ಷದ ಅಕ್ಟೋಬರ್ 1ರಿಂದ ಅಟಲ್ ಪಿಂಚಣಿ ಯೋಜನೆ (ಎಪಿವೈ) ಪಡೆದುಕೊಳ್ಳುವುದನ್ನು ಕೇಂದ್ರ ಸರ್ಕಾರವು ನಿರ್ಬಂಧಿಸುತ್ತದೆ. ಆದಾಯ ತೆರಿಗೆ ಪಾವತಿಸುವ ವ್ಯಕ್ತಿಯು ಅಕ್ಟೋಬರ್ 1, 2022 ರಿಂದ ಅಟಲ್ ಪಿಂಚಣಿ ಯೋಜನೆ (ಎಪಿವೈ) ಖಾತೆಯನ್ನು ತೆರೆಯಲು ಅರ್ಹರಾಗಿರುವುದಿಲ್ಲ ಎಂದು ಹಣಕಾಸು ಸಚಿವಾಲಯ … Continued

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ನವದೆಹಲಿ; ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 56.76 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ. ಈವರೆಗೆ ಕೇಂದ್ರವು ರಾಜ್ಯಗಳಿಗೆ 56,76,14,390 ಲಸಿಕೆ ಡೋಸ್‌ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 3,03,90,091 ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ. … Continued

ಚೆಕ್‌ ಬೌನ್ಸ್‌ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕೇಂದ್ರಕ್ಕೆ ಸುಪ್ರಿಂ ಕೋರ್ಟ್‌ ನೊಟೀಸ್‌ ‌

ನವದೆಹಲಿ:ಚೆಕ್ ಬೌನ್ಸ್ ಕೇಸುಗಳ ಶೀಘ್ರ ವಿಲೇವಾರಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಒಬ್ಬ ವ್ಯಕ್ತಿಯ ವಿರುದ್ಧ ಒಂದು ವರ್ಷದೊಳಗೆ ದಾಖಲಾಗುವ ಪ್ರಕರಣಗಳಲ್ಲಿ ವಿಚಾರಣೆಗಳನ್ನು ಒಟ್ಟುಗೂಡಿಸಿ ವಿಚಾರಣೆಗಳ ಶೀಘ್ರ ವಿಲೇವಾರಿ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಸಂಬಂಧ ಎಲ್ಲಾ ಹೈಕೋರ್ಟ್ ಗಳಿಗೆ ಆದೇಶ ಹೊರಡಿಸಿರುವ ಸುಪ್ರೀಂ ಕೋರ್ಟ್, ಚೆಕ್ ಬೌನ್ಸ್ ಕೇಸುಗಳನ್ನು ನಿಭಾಯಿಸುವಂತೆ ವಿಚಾರಣಾಧೀನ … Continued

ಕೋವಿಡ್ -19: ಕೊವಾಕ್ಸಿನ್ ಉತ್ಪಾದಿಸಲು ಮುಂಬೈ ಹ್ಯಾಫ್ಕಿನ್ ಸಂಸ್ಥೆಗೆ ಅನುಮತಿ ನೀಡಿದ ಕೇಂದ್ರ

  ಮುಂಬೈ: ಭಾರತ್ ಬಯೋಟೆಕ್‌ನ ಕೋವಿಡ್‌ -19 ಲಸಿಕೆ ‘ಕೋವಾಕ್ಸಿನ್’ ಅನ್ನು ಮುಂಬೈನ ಹ್ಯಾಫ್‌ಕೈನ್ ಬಯೋ ಫಾರ್ಮಾಸ್ಯುಟಿಕಲ್ ಕಾರ್ಪೊರೇಶನ್‌ಗೆ ಉತ್ಪಾದಿಸುವ ತಂತ್ರಜ್ಞಾನ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಗುರುವಾರ ಅನುಮೋದನೆ ನೀಡಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ರೇಣು ಸ್ವರೂಪ್ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ … Continued

ಏರ್‌ಇಂಡಿಯಾ ಖರೀದಿ: ಟಾಟಾ- ಕೇಂದ್ರ ಸರ್ಕಾರದ ನಡುವೆ ಬಹುತೇಕ ಬಗೆಹರಿದ ಭಿನ್ನಾಭಿಪ್ರಾಯ

ಮುಂಬೈ / ನವದೆಹಲಿ: ಏರ್‌ ಇಂಡಿಯಾ ಖರೀದಿಯಲ್ಲಿ ಮಂಚೂಣಿಯಲ್ಲಿರುವ ಟಾಟಾ ಸನ್ಸ್ ಲಿಮಿಟೆಡ್ ಮತ್ತು ಸರ್ಕಾರದ ನಡುವೆ ಖರೀದಿಗೆ ಸಂಬಂಧಿಸಿದ ಮಾತುಕತೆಗಳು ಈವರೆಗಿದ್ದ ಬಹುತೇಕ ಭಿನ್ನಾಭಿಪ್ರಾಯವನ್ನು ದೂರ ಮಾಡಿದೆ. ಪ್ರಮುಖವಾಗಿ ಏರ್‌ಇಂಡಿಯಾ ಖರೀದಿಗೆ ಸಂಬಂಧಿಸಿದಂತೆ ಪಿಂಚಣಿ ಹೊಣೆಗಾರಿಕೆಗಳು, ರಿಯಲ್‌ ಎಸ್ಟೇಟ್‌ ಆಸ್ತಿಗಳು, ಮತ್ತು ಸಾಲ ಈ ಮೂರು ಪ್ರಮುಖ ವಿಷಯಗಳ ಬಗ್ಗೆ ಟಾಟಾ ಸನ್ಸ್‌ ಮತ್ತು … Continued