ಭಾರತೀಯ ನೌಕಾಪಡೆಯ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ನೇಮಕ

ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ ತ್ರಿಪಾಠಿ ಅವರನ್ನು ನೇಮಕ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ತ್ರಿಪಾಠಿ ಅವರು ವೈಸ್ ಅಡ್ಮಿರಲ್ ಆರ್ ಹರಿಕುಮಾರ ಅವರ ನಂತರ ಏಪ್ರಿಲ್ 30 ರಂದು ಅವರು ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವಹಿಸಿಕೊಳ್ಳಲಿದ್ದಾರೆ. ತ್ರಿಪಾಠಿ ಅವರು ಭಾರತೀಯ ನೌಕಾಪಡೆಯಲ್ಲಿ … Continued

ವೀಡಿಯೊ..| ಅರಬ್ಬಿ ಸಮುದ್ರದಲ್ಲಿ ಕಡಲ್ಗಳ್ಳರಿಂದ 23 ಪಾಕಿಸ್ತಾನಿಗಳನ್ನು ರಕ್ಷಿಸಿದ ಭಾರತದ ನೌಕಾಪಡೆ : ‘ಇಂಡಿಯಾ ಜಿಂದಾಬಾದ್’ ಘೋಷಣೆ ಕೂಗಿದ ಪಾಕಿಸ್ತಾನಿಗಳು | ವೀಕ್ಷಿಸಿ

ಕಡಲ್ಗಳ್ಳರಿಂದ ತಮ್ಮ ಮೀನುಗಾರಿಕಾ ಹಡಗಿನ ಅಪಹರಣ ಯತ್ನದ ನಂತರ ಶುಕ್ರವಾರ ಭಾರತೀಯ ನೌಕಾಪಡೆಯಿಂದ ರಕ್ಷಿಸಲ್ಪಟ್ಟ 23 ಪಾಕಿಸ್ತಾನಿ ಪ್ರಜೆಗಳನ್ನು ಒಳಗೊಂಡ ಹಡಗಿನ ಸಿಬ್ಬಂದಿ ನೌಕಾಪಡೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ ಮತ್ತು ‘ಇಂಡಿಯಾ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಭಾರತೀಯ ನೌಕಾಪಡೆಯ ವಿಶೇಷ ತಂಡವು ಪಾಕಿಸ್ತಾನಿ ಪ್ರಜೆಗಳನ್ನು ಒಂಬತ್ತು ಶಸ್ತ್ರಸಜ್ಜಿತ ಕಡಲ್ಗಳ್ಳರಿಂದ ರಕ್ಷಿಸಿತು ಮತ್ತು ಅಲ್-ಕಮರ್ ಎಂಬ ಮೀನುಗಾರಿಕಾ … Continued

40 ಗಂಟೆಗಳ ಕಾಲ ಹೋರಾಡಿ ಸೊಮಾಲಿಯಾ ಕಡಲ್ಗಳ್ಳರ ಹೆಡೆಮುರಿ ಕಟ್ಟಿದ ಭಾರತೀಯ ನೌಕಾಪಡೆ ; 35 ಕಡಲ್ಗಳ್ಳರ ಬಂಧನ ; 17 ಮಂದಿ ರಕ್ಷಣೆ

ನವದೆಹಲಿ: ಸಮುದ್ರದಲ್ಲಿ ಸರಕು ಸಾಗಾಣಿಕಾ ಹಡಗೊಂದರ ಮೇಲೆ ದಾಳಿ ಮಾಡಿ ಅದರಲ್ಲಿನ 17 ಮಂದಿ ಸಿಬ್ಬಂದಿಯನ್ನು ಒತ್ತೆಯಾಳುಗಳಾಗಿರಿಸಿಕೊಂಡಿದ್ದ ಸೊಮಾಲಿಯಾ ಕಡಲ್ಗಳ್ಳರ ವಿರುದ್ಧ ಸತತ 40 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ 35 ಮಂದಿ ಕಡಲ್ಗಳ್ಳರನ್ನು ಬಂಧಿಸುವಲ್ಲಿ ಭಾರತೀಯ ನೌಕಾಪಡೆ ಯಶಸ್ವಿಯಾಗಿದೆ. ಇಸ್ರೇಲ್‌ ಹಾಗೂ ಪ್ಯಾಲೆಸ್ತೈನ್‌ ಮಧ್ಯೆ ಯುದ್ಧ ಶುರುವಾದ ಬಳಿಕ ಸಮುದ್ರ ಪ್ರದೇಶದಲ್ಲಿ ಕಡಲ್ಗಳ್ಳರ (Pirates) … Continued

ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ವಿಧಿಸಿದ್ದ ಮರಣದಂಡನೆ ವಿರುದ್ಧ ಭಾರತದ ಮನವಿ ಸ್ವೀಕರಿಸಿದ ಕತಾರ್ ಕೋರ್ಟ್‌

ನವದೆಹಲಿ : ಗೂಢಚರ್ಯೆ ಆರೋಪದಲ್ಲಿ ಕಳೆದ ತಿಂಗಳು ಶಿಕ್ಷೆಗೆ ಗುರಿಯಾಗಿದ್ದ ಭಾರತದ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸುವುದರ ವಿರುದ್ಧ ಭಾರತ ಸಲ್ಲಿಸಿದ್ದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯ ಸ್ವೀಕರಿಸಿದೆ. ಕತಾರ್ ನ್ಯಾಯಾಲಯವು ಮೇಲ್ಮನವಿಯನ್ನು ಪರಿಶೀಲಿಸಿದ ನಂತರ ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಎಂಟು ಜನರನ್ನು ಗೂಢಚಾರಿಕೆಗಾಗಿ ಕತಾರ್‌ನ … Continued

ಭಾರತದ ನೌಕಾಪಡೆಯ 8 ಮಾಜಿ ಯೋಧರಿಗೆ ಕತಾರ್ ನ್ಯಾಯಾಲಯ ವಿಧಿಸಿರುವ ಮರಣದಂಡನೆ ಶಿಕ್ಷೆ ವಿರುದ್ಧ ಭಾರತದ ಮೇಲ್ಮನವಿ

ನವದೆಹಲಿ: ಕಳೆದ ತಿಂಗಳು ಕತಾರ್ ನ್ಯಾಯಾಲಯವು ಎಂಟು ಭಾರತೀಯರಿಗೆ ಮರಣದಂಡನೆ ವಿಧಿಸಿದ್ದರ ವಿರುದ್ಧ ಸರ್ಕಾರವು ಮೇಲ್ಮನವಿ ಸಲ್ಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಗುರುವಾರ ತಿಳಿಸಿದೆ. ಅಕ್ಟೋಬರ್‌ನಲ್ಲಿ, ಕತಾರ್‌ನ ನ್ಯಾಯಾಲಯವು ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿತು, ಅವರು ಕತಾರಿನಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಬಂಧನದಲ್ಲಿದ್ದರು. “ತೀರ್ಪು ಗೌಪ್ಯವಾಗಿದೆ. ನಮ್ಮ … Continued

ಭಾರತದ ನೌಕಾಪಡೆಯ 8 ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕತಾರ್ ಕೋರ್ಟ್‌ ; ತೀವ್ರ ಆಘಾತ ಎಂದ ಭಾರತ, ಕಾನೂನು ಆಯ್ಕೆಗಳ ಪರಿಶೀಲನೆ

ನವದೆಹಲಿ : ಇಸ್ರೇಲ್‌ಗಾಗಿ ಬೇಹುಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಕತಾರ್‌ನಲ್ಲಿನ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ತೀರ್ಪನ್ನು “ಆಘಾತಕಾರಿ” ಎಂದು ಕರೆದಿರುವ ಭಾರತದ ವಿದೇಶಾಂಗ ಸಚಿವಾಲಯವು “ವಿಚಾರಣೆಯ ಗೌಪ್ಯ ಸ್ವರೂಪ” ದ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದೆ ಆದರೆ ಪ್ರಕರಣವನ್ನು ಎದುರಿಸುವುದಾಗಿ … Continued