ಲ್ಯಾಂಡಿಂಗ್ ಸಮಸ್ಯೆ ಎದುರಿಸಿದ ಸಿಎಂ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆಯಾಗಿದೆ. ಈ ವಿಮಾನದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಯಾಣಿಸುತ್ತಿದ್ದರು. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದರು. ಹವಂಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್‌ಗೆ ಕೂಡಲೇ ಕ್ಲಿಯರೆನ್ಸ್ ಸಿಕ್ಕಿಲ್ಲ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಲ್ಯಾಂಡಿಂಗ್ ಸಮಸ್ಯೆಯಾಗಿ … Continued