ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ : ಕಾರವಾರದ ನಾವಿಕನಿಗೆ ಗಾಯ ; ವರದಿ

ನವದೆಹಲಿ: ಒಮಾನ್ ಕರಾವಳಿಯ ಸಮೀಪ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಪನಾಮ ಧ್ವಜ ಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ಮಾದರಿಯ ವಸ್ತುವೊಂದು ಅಪ್ಪಳಿಸಿದ ಪರಿಣಾಮ 11 ಭಾರತೀಯರು ಸೇರಿದಂತೆ 12 ಮಂದಿ ನಾವಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ 11 ಮಂದಿ ಭಾರತೀಯ ನಾವಿಕರಲ್ಲಿ ಕಾರವಾರದ ನಾವಿಕರೊಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ. ವಾಣಿಜ್ಯ ಹಡಗುಗಳ ಮೇಲಿನ ದಾಳಿಯನ್ನು … Continued

ವಿಡಿಯೋ | ಬೆಂಗಳೂರು: ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಪಾದಚಾರಿಗೆ ಗಾಯ

ಬೆಂಗಳೂರು: ನಗರದ ಅಮೆಜಾನ್ ಕಚೇರಿ ಹೊರಭಾಗದ ಫುಟ್‌ಪಾತ್‌ನಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್ ಬಾಕ್ಸ್ ಸ್ಫೋಟಗೊಂಡ ಪರಿಣಾಮ ಪಾದಚಾರಿಯೊಬ್ಬರು ಗಾಯಗೊಂಡಿರುವ ಘಟನೆ ಬುಧವಾರ (ಅ.7) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯಲಹಂಕ ಓಲ್ಡ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಗಲೂರು ಕ್ರಾಸ್ ಸಮೀಪದಲ್ಲಿರುವ ಅಮೆಜಾನ್ ಕಚೇರಿಯ ಗೇಟ್ ನಂಬರ್ 3ರ ಹೊರಭಾಗದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡ ವ್ಯಕ್ತಿಯನ್ನು … Continued

ಕುಮಟಾ : ದೇವಿಮನೆ ಘಟ್ಟದ ಪ್ರದೇಶದಲ್ಲಿ ಉರುಳಿದ ಬಸ್‌ ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿ ಹಳ್ಳ ಪ್ರದೇಶದಲ್ಲಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ 15ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ, ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಬಂದ ಬಸ್‌ ಶಿರಸಿ ಮಾರ್ಗವಾಗಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ಬಸ್‌ … Continued

ಅವರ ತಲೆ-ಕೈಗಳು ಬಹುತೇಕ ಸೀಳಲ್ಪಟ್ಟಿದ್ದವು ; ವಿಮಾನದಲ್ಲಿ ಫ್ಲೈದುಬೈ ಭಾರತೀಯ ಪೈಲಟ್‌ಗೆ ಚಿಕಿತ್ಸೆ ನೀಡಿದ ದಂತವೈದ್ಯನ ಹೇಳಿಕೆ

ಟೆಲ್ ಅವೀವ್‌: ಫ್ಲೈದುಬೈ (flydubai) ಸಂಸ್ಥೆಯ ಎಫ್‌ಝೆಡ್‌1073 (FZ1073) ವಿಮಾನದ ಭಾರತೀಯ ಮೂಲದ ಕ್ಯಾಪ್ಟನ್‌ ಸ್ಮಿತ್‌ ಮಚ್ಚಾರ್‌ (Smit Machchhar) ಅವರು ಸಹ ಪೈಲಟ್‌ನಿಂದ ಚಾಕು ಇರಿತಕ್ಕೊಳಗಾಗಿ ಅಪಾರ ಪ್ರಮಾಣದ ರಕ್ತಸ್ರಾವದಿಂದ ಬಳಲುತ್ತಿದ್ದರು. ಪ್ರಜ್ಞೆ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದರೂ ಅವರು ಕಾಕ್‌ಪಿಟ್‌ ಬಾಗಿಲು ತೆರೆಯುವ ಮೂಲಕ ವಿಮಾನದಲ್ಲಿದ್ದ 174 ಪ್ರಯಾಣಿಕರ ಜೀವ ಉಳಿಸಿದರು ಎಂದು ಅದೇ ವಿಮಾನದಲ್ಲಿದ್ದ … Continued

‘ಕೆಬಿಸಿ 18’ ಶೂಟಿಂಗ್ ವೇಳೆ ಜಾರಿ ಬಿದ್ದು ಅಮಿತಾಭ್ ಬಚ್ಚನ್‌ಗೆ ಗಾಯ

ದುಬೈ: ‘ಕೌನ್ ಬನೇಗಾ ಕರೋಡ್‌ಪತಿ 18’ (KBC 18) ಕಾರ್ಯಕ್ರಮದ ಚಿತ್ರೀಕರಣದ ವೇಳೆ ಹಿರಿಯ ನಟ ಅಮಿತಾಭ್ ಬಚ್ಚನ್ ಜಾರಿ ಬಿದ್ದು ಮೊಣಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. 83 ವರ್ಷದ ಅಮಿತಾಭ್ ಬಚ್ಚನ್ ಸಾಮಾನ್ಯವಾಗಿ ಕಾರ್ಯಕ್ರಮದ ಆರಂಭದಲ್ಲಿ ವೇದಿಕೆಯ ಮಧ್ಯಭಾಗದಲ್ಲಿ ನಿಂತುಕೊಂಡೇ ತಮ್ಮ ಆರಂಭಿಕ ನಿರೂಪಣೆ ಮಾಡುತ್ತಾರೆ. ಆದರೆ ಮೊಣಕಾಲಿಗೆ ಗಾಯವಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಅವರು … Continued

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 12 ಮಂದಿ ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಡೇರಾ ಇಸ್ಮಾಯಿಲ್ ಖಾನ್: ಪಾಕಿಸ್ತಾನದ ವಾಯವ್ಯ ಭಾಗದಲ್ಲಿರುವ ಖೈಬರ್‌ ಪಖ್ತುನ್‌ಖ್ವಾ ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಶನಿವಾರ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಸ್ತೆ ಬದಿಯಲ್ಲಿದ್ದ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸ್ಫೋಟಕ ತುಂಬಿದ್ದ ವಾಹನವನ್ನು ಆತ್ಮಾಹುತಿ ಬಾಂಬರ್ ಸ್ಫೋಟಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ … Continued

ಮಂಗಳೂರು : ಬಾಲ್ಕನಿ ರೇಲಿಂಗ್ ಕುಸಿದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಕಾಲೇಜು ಚುನಾವಣೆ ಹಾಗೂ ನೂತನ ವಿದ್ಯಾರ್ಥಿ ಪ್ರತಿನಿಧಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಂಭ್ರಮದ ವೇಳೆ ಮೊದಲ ಮಹಡಿಯ ಬಾಲ್ಕನಿ ರೇಲಿಂಗ್ ಕುಸಿದು ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ಪಾಂಡೇಶ್ವರದಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಶನ್ ಹಾಲ್‌ನಲ್ಲಿ ಶನಿವಾರ (ಸೆ.26) ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ತಲೆಗೆ ಗಂಭೀರವಾಗಿ ಏಟಾದ ಪರಿಣಾಮ 16 … Continued

ಬೆಳಗಾವಿ : ಫ್ರಿಜ್‌ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಬೆಳಗಾವಿ: ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಚವಾಟಗಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮನೆಯಲ್ಲಿದ್ದ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಬೆಂಕಿ ಆವರಿಸಿ ಮನೆಯೊಳಗಿದ್ದವರು ಬೆಂಕಿಯಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡ ಪರಿಣಾಮ … Continued

ಹೊಸಪೇಟೆ : ಗಣೇಶ ಮೂರ್ತಿ ಒಯ್ಯುವ ವೇಳೆ ವಿದ್ಯುತ್ ಸ್ಪರ್ಷ ; ಇಬ್ಬರಿಗೆ ಗಾಯ

ವಿಜಯನಗರ: ಗಣೇಶ ಮೂರ್ತಿ ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್‌ ತಂತಿ ತಗುಲಿ ಇಬ್ಬರು ಗಾಯಗೊಂಡ ಘಟನೆ ಹೊಸಪೇಟೆ ನಗರದ ಅನಂತಶಯನಗುಡಿ ಹೊರವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕಮಲಾಪುರ ಮೂಲದ ಹುಲುಗಪ್ಪ ಮತ್ತು ದೀಪಕ ಎಂಬವರು ಗಾಯಗೊಂಡಿದಿದ್ದಾರೆ ಎಂದು ವರದಿಯಗಿದ್ದು, ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಮೂರ್ತಿಗೆ ಅಳವಡಿಸಿದ್ದ ಬಿದಿರು ವಿದ್ಯುತ್‌ ಕಂಬದ ತಂತಿಗೆ ತಗುಲಿದೆ. ಪರಿಣಾಮ … Continued

ವಿಡಿಯೋ | ದಾವಣಗೆರೆ : ಹೆದ್ದಾರಿಯಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ; ರಕ್ಷಿಸಲು ಹೋದ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ಹೆದ್ದಾರಿ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಕಾರೊಂದು … Continued