ಅಡಕೆ ಎಂದು ಭಾವಿಸಿ ಜಜ್ಜಿದಾಗ ಸಿಡಿಮದ್ದು ಸ್ಫೋಟ, ಮಹಿಳೆಗೆ ತೀವ್ರ ಗಾಯ

ಮೈಸೂರು: ಮನೆ ಬಳಿ ರಸ್ತೆಯಲ್ಲಿ ಬಿದ್ದಿದ್ದ ಸಿಡಿಮದ್ದನ್ನು ಅಡಕೆ ಎಂದು ಭಾವಿಸಿ ಚೂರು ಮಾಡಲು ಕಲ್ಲಿನಿಂದ ಜಜ್ಜಿದಾಗ ಅದು ಸ್ಫೋಟಗೊಂಡು ಮಹಿಳೆಯೊಬ್ಬರು ತೀವ್ರ ಗಾಯಗೊಂಡ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿಯ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗ್ರಾಮದ ಕಮಲಮ್ಮ (55) ಎಂಬವರು ಗಾಯಗೊಂಡವರು. ಶುಕ್ರವಾರ ಬೆಳಗ್ಗೆ ಜಮೀನಿನಿಂದ ಮನೆಗೆ ಬರುತ್ತಿದ್ದ ವೇಳೆ … Continued

ಡೈವರ್‌ಗಳ ಗುಂಪಿನ ಮೇಲೆ ಅಪಾಯಕಾರಿ ಶಾರ್ಕ್ ದಾಳಿ : ಒಬ್ಬನಿಗೆ ಕಚ್ಚಿ ತೀವ್ರ ಗಾಯ ; ದೃಶ್ಯ ವೀಡಿಯೊದಲ್ಲಿ ಸೆರೆ

ಹಾಲಿವುಡ್‌ನ ಫ್ಲೋರಿಡಾ ಬೀಚ್‌ನಲ್ಲಿ ಶಾರ್ಕ್ ದಾಳಿಯಲ್ಲಿ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಶಾರ್ಕ್ ಕಡಿತದಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, 40 ವರ್ಷ ವಯಸ್ಸಿನವರೆಂದು ಹೇಳಲಾಗುವ ಈ ವ್ಯಕ್ತಿಯ ತೋಳಿನ ಮೇಲ್ಭಾಗಕ್ಕೆ ಗಾಯವಾಗಿದೆ. ಮಂಗಳವಾರ ಮಧ್ಯಾಹ್ನ ಹಾಲಿವುಡ್ ಅಗ್ನಿಶಾಮಕ ದಳಕ್ಕೆ ಕರೆ ಬಂತು. ಸಹಾಯ ಮಾಡಲು ಧಾವಿಸಿದಾಗ ಗಾಯಗೊಂಡ ವ್ಯಕ್ತಿ ನೀರಿನಿಂದ ಹೊರಗಿದ್ದರು. … Continued

ʼಕಿಂಗ್’ ಸಿನೆಮಾದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ನಟ ಶಾರುಖ್ ಖಾನಗೆ ಗಾಯ

ಮುಂಬೈ: ಕಿಂಗ್‌ ಸಿನೆಮಾದ ಚಿತ್ರೀಕರಣ ವೇಳೆ ಶಾರುಖ್ ಖಾನ್ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಬೈನ (Mumbai) ಗೋಲ್ಡನ್ ಟೊಬ್ಯಾಕೊ ಸ್ಟುಡಿಯೋದಲ್ಲಿ ಸಾಹಸ ದೃಶ್ಯವನ್ನು ಚಿತ್ರೀಕರಿಸುವಾಗ ಶಾರುಖ್‌ ಖಾನ್‌ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯದ ವಿವರಗಳು ಗೌಪ್ಯವಾಗಿ ಉಳಿದಿದ್ದರೂ, ಶಾರುಖ್ ಅವರಿಗೆ ಒಂದು ತಿಂಗಳು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಲ್ಲದೆ, ವೈದ್ಯಕೀಯ … Continued

ಚಾಮರಾಜನಗರ | ಹುಲಿ ದಾಳಿಗೆ ಮಹಿಳೆ ಸಾವು, ಯುವಕನಿಗೆ ಗಾಯ

ಚಾಮರಾಜನಗರ: ಕೆಲವೇ ತಾಸುಗಳ ಅಂತರದಲ್ಲಿ ಇಬ್ಬರ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಲ್ಲಿ ಮಹಿಳೆ ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಚಾಮರಾಜನಗರ ತಾಲೂಕಿನ ಬೇಡಗುಳಿಯಲ್ಲಿ ನಡೆದಿದೆ. ಬೇಡಗುಳಿಯ ರಂಗಮ್ಮ ಎಂಬ ವೃದ್ಧೆ ಹುಲಿ ದಾಳಿಗೆ ಅಸುನೀಗಿದ್ದಾರೆ. ರಂಗಮ್ಮ ಎಂಬವರ ಮೇಲೆ ಮಂಗಳವಾರ ಬೆಳಗ್ಗೆ ಹುಲಿ ದಾಳಿ ಮಾಡಿದ್ದು ತಲೆ ಮತ್ತು … Continued

ಅವರು 4ನೇ ತರಗತಿಯಲ್ಲಿದ್ದಾಗ ಹೊಡೆದಾಡಿಕೊಂಡಿದ್ರು… ಈಗ 50 ವರ್ಷಗಳ ನಂತರ ಭೇಟಿಯಾದಾಗ ಥಳಿಸಿ ಸೇಡು ತೀರಿಸಿಕೊಂಡ್ರು…!

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಅಸಾಮಾನ್ಯ ಘಟನೆಯೊಂದು ವರದಿಯಾಗಿದೆ. 62 ವರ್ಷದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಇದು 50 ವರ್ಷದ ಹಿಂದಿನ ಬಾಲ್ಯದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಇಬ್ಬರು ಸೇರಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕೃಷ್ಣನ್ ಎಂಬವರ … Continued

ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued

ವೀಡಿಯೊ..| ಎರಡು ಕುಟುಂಬಗಳ ನಡುವೆ ಜಗಳ ನಡೆಯುವಾಗ ಕುಸಿದ ಛಾವಣಿ ; ಕೆಲವರಿಗೆ ಗಾಯ

ಮಹಾರಾಷ್ಟ್ರದ (Maharashtra) ಥಾಣೆಯ ಭಿವಾಂಡಿಯ ದೇನೆನಗರದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹಿಂಸಾತ್ಮಕ ಜಗಳದ ವೇಳೆ ಮನೆಯ ಛಾವಣಿ ಕುಸಿದು ಬಿದ್ದಿದೆ. ಈ ವೇಳೆ ಮೇಲಿನ ಮಹಡಿಯಿಂದ ಕೆಳಗಿನ ಮಹಡಿಗೆ ಕೆಲವರು ಉರುಳಿಬಿದ್ದಿದ್ದು, ಅವರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ.. ಸಣ್ಣ ಕಾರಣಕ್ಕೆ ದೊಡ್ಡ ಜಗಳ ನಡೆದ ನಂತರ ಈ ಆಘಾತಕಾರಿ ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ವೈರಲ್ … Continued

ಮೈಸೂರು | ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆ ಆರೋಪಿ ಕಾಲಿಗೆ ಗುಂಡು

ಮೈಸೂರು : ದರೋಡೆ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೇರಳ ಮೂಲದ ಆರೋಪಿ ಆದರ್ಶ ಎಂಬಾತ ಗುಂಡೇಟಿನಿಂದ ಗಾಯಗೊಂಡ ದರೋಡೆಕೋರ. ಈತನನ್ನು ಮೇಟಗಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಸಬ್‌ಇನ್‌ಸ್ಪೆಕ್ಟರ್‌ ಪ್ರಕಾಶ ಹಾಗೂ ಸಿಬ್ಬಂದಿ ಹರೀಶ ಅವರು … Continued

ಆಘಾತಕಾರಿ ವೀಡಿಯೊ..| ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ, ಮಗುವಿನ ಮೇಲೆ ಬೀದಿ ಹಸುವಿನ ದಾಳಿ; ಮಹಿಳೆ ಆಸ್ಪತ್ರೆಗೆ ದಾಖಲು

ಚೆನ್ನೈನ ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀದಿ ಹಸುವೊಂದು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡಿದ ವೀಡಿಯೊ ವೈರಲ್ ಆಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಒಯ್ಯಲಾಗಿದೆ. ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಯತ್ನಿಸಿದೆ. ತಾಯಿ ಮಗುವನ್ನು ರಕ್ಷಿಸಲು ಮುಂದಾದಾಗ ಅದು ತಾಯಿ ಮೇಲೆ ದಾಳಿ ನಡೆಸಿವೆ. ಆದರೆ, ನೆರೆಹೊರೆಯವರು ಆಕೆಯ ರಕ್ಷಣೆಗೆ … Continued

ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

ಬೆಳಗಾವಿ: ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿದ್ದಾರೆ. … Continued