ಆಘಾತಕಾರಿ ವೀಡಿಯೊ..| ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ, ಮಗುವಿನ ಮೇಲೆ ಬೀದಿ ಹಸುವಿನ ದಾಳಿ; ಮಹಿಳೆ ಆಸ್ಪತ್ರೆಗೆ ದಾಖಲು

ಚೆನ್ನೈನ ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀದಿ ಹಸುವೊಂದು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡಿದ ವೀಡಿಯೊ ವೈರಲ್ ಆಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಒಯ್ಯಲಾಗಿದೆ. ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಯತ್ನಿಸಿದೆ. ತಾಯಿ ಮಗುವನ್ನು ರಕ್ಷಿಸಲು ಮುಂದಾದಾಗ ಅದು ತಾಯಿ ಮೇಲೆ ದಾಳಿ ನಡೆಸಿವೆ. ಆದರೆ, ನೆರೆಹೊರೆಯವರು ಆಕೆಯ ರಕ್ಷಣೆಗೆ … Continued

ಬೆಳಗಾವಿ | ಕಾರಿನ ಮೇಲೆ ಮಗುಚಿ ಬಿದ್ದ ಲಾರಿ ; ಇಬ್ಬರಿಗೆ ಗಾಯ

ಬೆಳಗಾವಿ: ಬೆಳಗಾವಿ ಕೆಎಲ್‌ಇ ಆಸ್ಪತ್ರೆ ಸನಿಹದ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಲಾರಿಯೊಂದು ಕಾರಿನ ಮೇಲೆ ಬಿದ್ದು, ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ಪಕ್ಕದ ಕಾರಿನ ಮೇಲೆ ಉರುಳಿಬಿದ್ದಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿದ್ದಾರೆ. … Continued

ಬೆಂಗಳೂರಿನಲ್ಲಿ ಸ್ಥಳೀಯ ಕ್ರಿಕೆಟ್‌ ಆಡುವಾಗ ರಾಹುಲ್‌ ದ್ರಾವಿಡಗೆ ಗಾಯ….!

ಫೆಬ್ರವರಿಯಲ್ಲಿ ನಸ್ಸೂರ್ ಸ್ಮಾರಕ ಶೀಲ್ಡ್‌ಗಾಗಿ ಮೂರನೇ ಡಿವಿಷನ್ (ಗುಂಪು I) ಪಂದ್ಯದಲ್ಲಿ ವಿಜಯಾ ಕ್ರಿಕೆಟ್ ಕ್ಲಬ್(ಮಾಲೂರು)ಗಾಗಿ ಸ್ಥಳೀಯ ಕ್ರಿಕೆಟ್ ಪಂದ್ಯ ಆಡುವಾಗ ರಾಜಸ್ಥಾನ ರಾಯಲ್ಸ್ (RR) ಕೋಚ್ ರಾಹುಲ್ ದ್ರಾವಿಡ್ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಫ್ರಾಂಚೈಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನೊಂದಿಗೆ ಸುದ್ದಿಯನ್ನು ಬಹಿರಂಗಪಡಿಸಿದೆ. ಅಲ್ಲಿ ಅವರು ಬುಧವಾರ ಜೈಪುರದಲ್ಲಿ ತಮ್ಮ ಪೂರ್ವ ಐಪಿಎಲ್ 2025ರ ಸೀಸನ್ … Continued

ಪಟಿಯಾಲ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ ಬೆಂಗಳೂರಿಗೆ ಏರ್‌ಲಿಫ್ಟ್‌

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಸಿದ್ದಾಪುರ | ಮಾವಿನಗುಂಡಿ ಬಳಿ ಸಾರಿಗೆ ಬಸ್‌-ಟಿಪ್ಪರ್‌ ಡಿಕ್ಕಿ : 20ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಸಾರಿಗೆ ಸಂಸ್ಥೆ ಬಸ್ಸಿಗೆ ಟಿಪ್ಪರ್ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಬಳಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಭಟ್ಕಳದಿಂದ ಹಿರೇಕೆರೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಲಾರಿ ಓವರ್‌ ಟೇಕ್‌ … Continued

ಮಹಾಕುಂಭ ಕಾಲ್ತುಳಿತದಲ್ಲಿ 30 ಸಾವು, 60 ಮಂದಿಗೆ ಗಾಯ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟಿದ್ದಾರೆ ಎಂದು ಮಹಾಕುಂಭದ ಉಪ ಮಹಾನಿರೀಕ್ಷಕ (ಡಿಐಜಿ) ವೈಭವ ಕೃಷ್ಣ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ ವೈಭವ್ ಕೃಷ್ಣ ಅವರು, 25 ಶವಗಳನ್ನು ಗುರುತಿಸಲಾಗಿದೆ, ಘಟನೆಯಲ್ಲಿ 60 ಮಂದಿ ಗಾಯಗೊಂಡಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು … Continued

ಮಹಾಕುಂಭ ಮೇಳ ; ಕಾಲ್ತುಳಿತದಲ್ಲಿ ಬೆಳಗಾವಿಯ ನಾಲ್ವರಿಗೆ ಗಾಯ

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಿಜೆಪಿ ಕಾರ್ಯಕರ್ತೆಯರು ಹಾಗೂ ಇಬ್ಬರು ಬಾಲಕಿಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇಲ್ಲಿನ ವಡಗಾವಿಯ ನಿವಾಸಿ ಸರೋಜಿನಿ ನಡುವಿನಹಳ್ಳಿ ಹಾಗೂ ಕಾಂಚನ್ ಕೋಪಾರ್ಡೆ ಎಂಬವರು ಗಾಯಗೊಂಡ ಬಿಜೆಪಿ ಕಾರ್ಯಕರ್ತೆಯರು. ಅವರೊಂದಿಗೇ ಇದ್ದ ಬಾಲಕಿಯರಾದ ಮೇಘಾ, ಜ್ಯೋತಿ ಅವರಿಗೂ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲಿನ … Continued

ಗೂಡ್ಸ್​​ ವಾಹನ ಪಲ್ಟಿ : 25ಕ್ಕೂ ಹೆಚ್ಚು ನರೇಗಾ ಕೂಲಿ ಕಾರ್ಮಿಕರಿಗೆ ಗಾಯ

ಬೆಳಗಾವಿ: ನರೇಗಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಗೂಡ್ಸ್‌ ಪಲ್ಟಿಯಾಗಿ 25 ಕ್ಕೂ ಅಧಿಕ ಕೆಲಸಗಾರರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಂಗೆ ನರೇಗಾ ಕೆಲಸಕ್ಕೆಂದು ಕೂಲಿ ಕಾರ್ಮಿಕರು ಗೂಡ್ಸ್‌ ವಾಹನದಲ್ಲಿ ಹೊರಟಿದ್ದರು. ಈ ವೇಳೆ ಅಡ್ಡ … Continued

ಬೀದರಿನಲ್ಲಿ ಹಣದ ವ್ಯಾನ್ ಸಿಬ್ಬಂದಿ ಕೊಂದ ಗಂಟೆಗಳ ನಂತರ ಹೈದರಾಬಾದಿನಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ದರೋಡೆಕೋರರು…!

ಹೈದರಾಬಾದ್: ಗುರುವಾರ ಕರ್ನಾಟಕದ ಬೀದರಿಲ್ಲಿ ಎಟಿಎಂ ನಗದು ವಾಹನದ ಸಿಬ್ಬಂದಿಗೆ ಗುಂಡು ಹಾರಿಸಿ 93 ಲಕ್ಷ ರೂ. ನಗದು ದರೋಡೆ ಮಾಡಿ ಪರಾರಿಯಾದ ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಖಾಸಗಿ ಟ್ರಾವೆಲ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಡೀ ನಗರದಲ್ಲಿ … Continued