ಮಹೇಶ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತರಾದ … Continued

ವಕ್ಫ್ ತಿದ್ದುಪಡಿ ಕಾಯಿದೆ : ಕೆಲ ಸೆಕ್ಷನ್‌ಗಳಿಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ವಕ್ಫ್‌ ತಿದ್ದುಪಡಿ ಕಾಯಿದೆ 2025ರ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದಂತೆ ಕ್ಫ್ ತಿದ್ದುಪಡಿ ಕಾಯ್ದೆಗೆ ತಡೆ ನೀಡಲುನಿರಾಕರಿಸಿದ ಸುಪ್ರೀಂಕೋರ್ಟ್, ಅಂತಿಮ ತೀರ್ಪು ಬರುವವರೆಗೆ ಕಾಯಿದೆಯ ಕೆಲ ಸೆಕ್ಷನ್‌ಗಳಿಗೆ ಸುಪ್ರೀಂ ಕೋರ್ಟ್‌ ಸೋಮವಾರ (ಸೆಪ್ಟೆಂಬರ್ 14) ತಡೆ ನೀಡಿದೆ. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ … Continued

ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ … Continued

ಡಿ.ಕೆ.ಶಿವಕುಮಾರ ವಿರುದ್ಧದ ಆದಾಯ ತೆರಿಗೆ ಪ್ರಕರಣ: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಸುಪ್ರೀಂಕೋರ್ಟ್ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಿಸಿದ್ದ ಪ್ರಕರಣವನ್ನು ರದ್ದು ಮಾಡಿದ್ದ ವಿರುದ್ಧ ಅರ್ಜಿ ಹೈಕೋರ್ಟ್‌ ಆದೇಶಕ್ಕೆ ಮಧ್ಯಂತರ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ ಆದೇಶದ ವಿರುದ್ಧ ಆದಾಯ ತೆರಿಗೆ … Continued

ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು … Continued