ಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್

ಬೈಕೋನೂರ್ (ಕಝಾಕಿಸ್ತಾನ): ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಅನಿಲ ಮೆನನ್ ಅವರು ತಮ್ಮ ಮೊದಲ ಬಾಹ್ಯಾಕಾಶ ಯಾನಕ್ಕೆ ಮಂಗಳವಾರ ಯಶಸ್ವಿಯಾಗಿ ಹೊರಟಿದ್ದಾರೆ. ಅವರು ರಷ್ಯಾದ ಸೋಯುಜ್ ಎಂಎಸ್–29 (Soyuz MS-29) ಬಾಹ್ಯಾಕಾಶ ನೌಕೆಯಲ್ಲಿ ರಷ್ಯಾದ ಗಗನಯಾತ್ರಿಗಳಾದ ಪಿಯೊತ್ರ್ ದುಬ್ರೋವ್ ಹಾಗೂ ಅನ್ನಾ ಕಿಕಿನಾ ಅವರ ಜೊತೆ ಕಝಾಕಿಸ್ತಾನದ ಐತಿಹಾಸಿಕ ಬೈಕೋನೂರ್ ಕಾಸ್ಮೋಡ್ರೋಮ್ ಉಡಾವಣಾ ಕೇಂದ್ರದಿಂದ ಭಾರತೀಯ … Continued

ಬಾಹ್ಯಾಕಾಶದಲ್ಲಿ ಬೇಹುಗಾರಿಕೆ ಸಾಮರ್ಥ್ಯ ಪಡೆದ ಭಾರತ ; ಈಗ ಶತ್ರು ದೇಶಗಳ ಉಪಗ್ರಹಗಳ ಮೇಲೆ ಕಣ್ಣಿಡಬಹುದು…

ಬೆಂಗಳೂರು/ಅಹಮದಾಬಾದ್: ಭಾರತದ ಖಾಸಗಿ ಬಾಹ್ಯಾಕಾಶ ರಂಗದಲ್ಲಿ ಇಂದು ಐತಿಹಾಸಿಕ ಸಾಧನೆಯೊಂದು ದಾಖಲಾಗಿದೆ. ಅಹಮದಾಬಾದ್ ಮೂಲದ ಅಜಿಸ್ಟಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (Azista Industries) ತನ್ನ ʼಎಎಫ್‌ಆರ್‌ʼ (AFR)ಉಪಗ್ರಹದ ಮೂಲಕ ಬಾಹ್ಯಾಕಾಶದಲ್ಲಿ ಚಲಿಸುತ್ತಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ (ISS) ಚಿತ್ರಗಳನ್ನು ಯಶಸ್ವಿಯಾಗಿ ಸೆರೆಹಿಡಿದಿದೆ. ಈ ಮೂಲಕ ಕಕ್ಷೆಯಲ್ಲಿರುವ ಇತರ ವಸ್ತುಗಳ ಮೇಲೆ ನಿಗಾ ಇಡುವ (Non-Earth Imaging … Continued

ಶುಭಾಂಶು ಶುಕ್ಲಾ ತಂಡ ಭೂಮಿಗೆ ಮರಳಲು ದಿನಾಂಕ ನಿಗದಿ

ನವದೆಹಲಿ: ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಸೇರಿದ ಆಕ್ಸಿಯಮ್-4 ತಂಡವು ಜುಲೈ 14ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (International Space Station) ಪುನಃ ಭೂಮಿಗೆ ಮರಳಲಿದೆ ಎಂದು ಪ್ರಕಟಿಸಲಾಗಿದೆ. “ನಾವು ಸ್ಟೇಷನ್ ಪ್ರೋಗ್ರಾಂನೊಂದಿಗೆ ಕೆಲಸ ಮಾಡುತ್ತಿದ್ದೇವೆ, ಆಕ್ಸಿಯಮ್ -4 ಪ್ರಗತಿಯನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ. ನಾವು ಆ ಮಿಷನ್ ಅನ್ನು ಅನ್‌ಡಾಕ್ … Continued

ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ ; ಬಾಹ್ಯಾಕಾಶ ನಿಲ್ದಾಣದಲ್ಲಿ ಮೆಂತೆ, ಹೆಸರುಕಾಳು ಗಿಡ ಬೆಳೆಸುತ್ತಿರುವ ಭಾರತದ ಗಗನಯಾತ್ರಿ

ನವದೆಹಲಿ: ತಮ್ಮ ಬಾಹ್ಯಾಕಾಶ ಯಾನದ ಕೊನೆಯ ಹಂತದಲ್ಲಿ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ರೈತನಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ‘ಹೆಸರುಕಾಳು’ ಮತ್ತು ‘ಮೆಂತ್ಯ’ ಬೀಜಗಳ ಮೊಳಕೆಯೊಡೆಯುವಿಕೆಯನ್ನು ಅವರು ದಾಖಲಿಸುತ್ತಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಸಸ್ಯಗಳ ಆರಂಭಿಕ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಅಧ್ಯಯನದ ಭಾಗವಾಗಿ ಗಗನಯಾತ್ರಿ ಶುಕ್ಲಾ … Continued

ವೀಡಿಯೊ | 16 ಸೂರ್ಯಾಸ್ತಗಳು, 16 ಸೂರ್ಯೋದಯಗಳು..: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ-ವೀಕ್ಷಿಸಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಸಿಯಮ್ -4 (ಆಕ್ಸ್ -4) ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಜೊತೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ … Continued

ಶುಭಾಂಶು ಶುಕ್ಲಾರಿಂದ ಇತಿಹಾಸ ಸೃಷ್ಟಿ ; 424 ಕಿಮೀ ಎತ್ತರದಲ್ಲಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಪ್ರವೇಶಿಸಿದ ಮೊದಲ ಭಾರತೀಯ-ವೀಕ್ಷಿಸಿ

ನವದೆಹಲಿ: ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ 28 ಗಂಟೆಗಳ ನಂತರ, ಗ್ರೂಪ್ ಕ್ಯಾಪ್ಟನ್ ಭಾರತದ ಶುಭಾಂಶು ಶುಕ್ಲಾ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ ಆಕ್ಸಿಯಮ್ -4 (ಆಕ್ಸ್ -4) ಮಿಷನ್ ಕಕ್ಷೆಯಲ್ಲಿರುವ ಪ್ರಯೋಗಾಲಯದ ಜೊತೆ ಯಶಸ್ವಿಯಾಗಿ ಡಾಕ್ ಆಗುತ್ತಿದ್ದಂತೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್) ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. … Continued

ವೀಡಿಯೊ…| ಬಾಹ್ಯಾಕಾಶ ನಿಲ್ದಾಣ ತಲುಪಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ; ಡಾಕ್ ಮಾಡಿದ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ

ನವದೆಹಲಿ: ಆಕ್ಸಿಯಮ್-4 ಮಿಷನ್‌ ಭಾಗವಾಗಿ ಭಾರತದ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಹೊತ್ತೊಯ್ದಿರುವ ಬಾಹ್ಯಾಕಾಶ ನೌಕೆ ಡ್ರ್ಯಾಗನ್ ಕ್ಯಾಪ್ಸುಲ್ ಗುರುವಾರ ಸಂಜೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ(ISS)ದಲ್ಲಿ ಡಾಕ್ ಮಾಡಿದೆ. ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇದು 28 ​​ಗಂಟೆಗಳ ಹಾರಾಟವನ್ನು ಪೂರ್ಣಗೊಳಿಸಿದ ನಂತರ ಅದು ಉತ್ತರ ಅಟ್ಲಾಂಟಿಕ್ ಮಹಾಸಾಗರದಿಂದ 424 ಕಿಮೀ … Continued

ಮೇ ತಿಂಗಳಲ್ಲಿ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ

ನವದೆಹಲಿ : ಭಾರತದ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ದೊಡ್ಡ ಮೈಲಿಗಲ್ಲಾಗಲಿರುವ ಗಗನಯಾತ್ರಿ-ನಿಯೋಜಿತ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮುಂದಿನ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಹಾರಲಿದ್ದಾರೆ ಎಂದು ಕೇಂದ್ರ ತಿಳಿಸಿದೆ. “ಭಾರತೀಯ ಗಗನಯಾತ್ರಿಯನ್ನು ಹೊತ್ತೊಯ್ಯುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಮುಂದಿನ ತಿಂಗಳು ನಿಗದಿಯಾಗಿದೆ. ಭಾರತ ತನ್ನ ಬಾಹ್ಯಾಕಾಶ ಪ್ರಯಾಣದಲ್ಲಿ ಒಂದು ನಿರ್ಣಾಯಕ ಅಧ್ಯಾಯವನ್ನು ಬರೆಯಲು ಸಜ್ಜಾಗಿದೆ. … Continued

ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತದೆ? “ಹಿಮಾಲಯ, ಮುಂಬೈ…ಮೀನುಗಾರಿಕೆ…: ವಿವರ ಹಂಚಿಕೊಂಡ ಗಗನಯಾತ್ರಿ ಸುನಿತಾ ವಿಲಿಯಮ್ಸ್​

ವಾಷಿಂಗ್ಟನ್ : ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತದೆ? ಭಾರತೀಯ ಮೂಲದ ಬಾಹ್ಯಾಕಾಶ ಪರಿಶೋಧಕಿ ಸುನೀತಾ ವಿಲಿಯಮ್ಸ್ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ “ನಂಬಲಾಗದಂತಹ” ಅದ್ಭುತ ಹಿಮಾಲಯದ ಮೇಲೆ ಹಾದುಹೋದ ಬಗ್ಗೆ ನೆನಪಿಸಿಕೊಂಡಿದ್ದಾರೆ. ಬಾಹ್ಯಾಕಾಶದಲ್ಲಿ 286 ದಿನಗಳ ವಾಸ್ತವ್ಯದ ನಂತರ ಭಾರತವು ಬಾಹ್ಯಾಕಾಶದಿಂದ ಹೇಗೆ ಕಾಣುತ್ತದೆ ಎಂಬ ಪ್ರಶ್ನೆಗೆ “ಅದ್ಭುತವಾಗಿದೆ, ಅದ್ಭುತವಾಗಿದೆ” ಎಂದು ಅವರು ಉತ್ತರಿಸಿದರು. “ಭಾರತ … Continued

ವೀಡಿಯೊಗಳು…| ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡು 9 ತಿಂಗಳ ನಂತರ ಭೂಮಿಗೆ ಬಂದಿಳಿದ ಸುನೀತಾ ವಿಲಿಯಮ್ಸ್, ವಿಲ್ಮೋರ್

9 ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿಕೊಂಡಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ (Sunita Williams) ಮತ್ತು ಅಮೆರಿಕದ ಬುಚ್‌ ವಿಲ್ಮೋರ್‌ (Butch Wilmore) ಅವರನ್ನು ಅತ್ಯಂತ ಸುರಕ್ಷಿತರವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್‌ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಭೂಮಿಯಿಂದ … Continued