ಇರಾನಿನಲ್ಲಿ ಅಸ್ಥಿರತೆ ಆತಂಕ : ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಸಜ್ಜು
ನವದೆಹಲಿ: ಇರಾನ್‌ನಲ್ಲಿ ದಿನೇ ದಿನೇ ಉಲ್ಬಣಿಸುತ್ತಿರುವ ಹಿಂಸಾಚಾರ ಮತ್ತು ಅಸ್ಥಿರತೆಯ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ, ಜನವರಿ 16ರೊಳಗೆ ಮೊದಲ ತಂಡವನ್ನು ಭಾರತಕ್ಕೆ ಕರೆತರುವ ಸಾಧ್ಯತೆಯಿದೆ. “ಇರಾನ್‌ನಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತಕ್ಕೆ ಮರಳಲು ಇಚ್ಛಿಸುವ ನಾಗರಿಕರಿಗೆ ಅಗತ್ಯ ವ್ಯವಸ್ಥೆಗಳನ್ನು ವಿದೇಶಾಂಗ ವ್ಯವಹಾರಗಳ … Continued