ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದ್ದಾರೆ. ಶಮಾನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು … Continued

ಮಲೆ ಮಹದೇಶ್ವರ ಬೆಟ್ಟದ ಒಂದೇ ಸ್ಥಳದಲ್ಲಿ ತಾಯಿ, 4 ಮರಿ ಹುಲಿಗಳು ಸಾವು ; ವಿಷ ಪ್ರಾಶನದ ಶಂಕೆ…!

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಕೊಪ್ಪ ವಲಯದ ಮೀಣ್ಯಂನಲ್ಲಿ ಒಂದು ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಒಂದೇ ಸ್ಥಳದಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಐದು ಹುಲಿಗಳ ಮೃತದೇಹಗಳು ಕೇವಲ 50 ಅಡಿಗಳಷ್ಟು ಅಂತರಲ್ಲಿ ಪತ್ತೆಯಾಗಿದೆ. ಒಂದು ತಾಯಿ ಹುಲಿ ಮತ್ತು 4 ಮರಿ ಸೇರಿ ಐದು ಹುಲಿಗಳು … Continued

ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ ಕುಂಬ್ಳೆ ನೇಮಕ: ಸಂಭಾವನೆ ಎಷ್ಟು ಗೊತ್ತೆ..?!

ಬೆಂಗಳೂರು: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗುತ್ದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ತಿಳಿಸಿದ್ದಾರೆ. ಅರಣ್ಯ ಸಚಿವರಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರಮಾಧ್ಯಮದವರೊಂದಿಗೆ ಮಾತನಾಡಿದ ಖಂಡ್ರೆ, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ … Continued

ದೀಪಾವಳಿಗೆ ಕೇವಲ 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನವಿದ್ದು, ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ ಎಂದು … Continued

ಪಶ್ಚಿಮ ಘಟ್ಟದಲ್ಲಿ ʼಭೂ ಪರಿವರ್ತನೆʼಗೆ ತಾತ್ಕಾಲಿಕ ತಡೆ

ಬೆಂಗಳೂರು: ರಾಜ್ಯದ ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಭೂ ಉಪಯೋಗದ ಕುರಿತು ನೂತನವಾಗಿ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆಯ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ … Continued