ಲೋಕಸಭೆ ಚುನಾವಣೆಗೆ ಗುಲಾಂ ನಬಿ ಆಜಾದ್ ಸ್ಪರ್ಧಿಸಲ್ಲ

ನವದೆಹಲಿ : ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರ ಪಕ್ಷ ಹೇಳಿದೆ. ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. 2022 ರಲ್ಲಿ ಅವರು ಕಾಂಗ್ರೆಸ್ ತೊರೆದ … Continued

ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಘೋಷಿಸಿದ ಕೇಂದ್ರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯಡಿ ನಯೀಮ್ ಅಹ್ಮದ್ ಖಾನ್ ನೇತೃತ್ವದ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (JKNF) ಅನ್ನು ಕೇಂದ್ರ ಸರ್ಕಾರ ಮಂಗಳವಾರ ನಿಷೇಧಿಸಿದೆ. ಆದೇಶದಲ್ಲಿ, ಗೃಹ ವ್ಯವಹಾರಗಳ ಸಚಿವಾಲಯವು ಹುರಿಯತ್ ಕಾನ್ಫರೆನ್ಸ್‌ನ ಅಂಗವಾದ ಜೆಕೆಎನ್‌ಎಫ್‌ (JKNF) ಅನ್ನು ತಕ್ಷಣವೇ ಜಾರಿಗೆ ಬರುವಂತೆ “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಿದೆ. ಜೆಕೆಎನ್‌ಎಫ್‌ (JKNF) “ದೇಶದ ಸಮಗ್ರತೆ, … Continued

“ನಿಮ್ಮ ದೇಶಕ್ಕೆ ಓಡಿಬರಲು ನಾನು ಮಲಾಲಾ ಅಲ್ಲ…ನಾನು ಭಾರತದಲ್ಲಿ ಸ್ವತಂತ್ರಳಾಗಿದ್ದೇನೆ”: ಬ್ರಿಟನ್‌ ಸಂಸತ್ತಿನಲ್ಲಿ ಭಾರತವನ್ನು ಕೊಂಡಾಡಿದ ಕಾಶ್ಮೀರಿ ಪತ್ರಕರ್ತೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಾಮಾಜಿಕ ಕಾರ್ಯಕರ್ತೆ ಮತ್ತು ಪತ್ರಕರ್ತೆ ಯಾನಾ ಮೀರ್ ಅವರಿಗೆ ಬ್ರಿಟನ್ನಿನ ಸಂಸತ್ತಿನಲ್ಲಿ ಡೈವರ್ಸಿಟಿ ಅಂಬಾಸಿಡರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ವಿರುದ್ಧದ “ಅಪ್ರಚಾರ”ದ ಬಗ್ಗೆ ಯಾನಾ ಮೀರ್ ಅವರು ಅಲ್ಲಿ ಮಾಡಿದ ಭಾಷಣವು ಈ ಎಲ್ಲೆಡೆ ವೈರಲ್ ಆಗುತ್ತಿದೆ, ಅಲ್ಲಿ ಅವರು, ಲಂಡನ್‌ನಲ್ಲಿನ ಬ್ರಿಟನ್ ಸಂಸತ್‌ನಲ್ಲಿ ನೀಡಿದ … Continued

ಕಾಶ್ಮೀರದ ಗುಲ್ಮಾರ್ಗದಲ್ಲಿ ಹಿಮಪಾತ : ರಷ್ಯಾದ ಸ್ಕೈಯರ್ ಸಾವು, 6 ಜನರ ರಕ್ಷಣೆ

ಶ್ರೀನಗರ: ಇಂದು ಜಮ್ಮು ಮತ್ತು ಕಾಶ್ಮೀರದ ಸ್ಕೀ ರೆಸಾರ್ಟ್ ಪಟ್ಟಣವಾದ ಗುಲ್ಮಾರ್ಗದಲ್ಲಿ ಭಾರಿ ಹಿಮಕುಸಿತ ಸಂಭವಿಸಿದ ನಂತರ ರಷ್ಯಾದ ಒಬ್ಬ ಸ್ಕೈಯರ್ ಸಾವಿಗೀಡಾಗಿದ್ದಾರೆ. ರಷ್ಯಾದ ಏಳು ಸ್ಕೈಯರ್‌ಗಳು ಹಿಮಪಾತಕ್ಕೆ ಸಿಲುಕಿದ್ದು, ಆರು ಮಂದಿಯನ್ನು ರಕ್ಷಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಬೃಹತ್ ಹಿಮಕುಸಿತವು ಗುರುವಾರ ಗುಲ್ಮಾರ್ಗದ ಮೇಲ್ಭಾಗ ಕಾಂಗ್‌ದೂರಿ ಇಳಿಜಾರುಗಳ ಬಳಿ ಅಪ್ಪಳಿಸಿದೆ … Continued

ನಿಮ್ಮ ಧೈರ್ಯ-ಸಂಕಲ್ಪಕ್ಕೆ ನಮ್ಮ ಸೆಲ್ಯೂಟ್‌…: ಎರಡೂ ತೋಳುಗಳಿಲ್ಲದ ಕ್ರಿಕೆಟಿಗನ ಆಟದ ಕೌಶಲ್ಯಕ್ಕೆ ಬೆರಗಾದ ಸಚಿನ್ ತೆಂಡೂಲ್ಕರ್, ಅದಾನಿ | ವೀಕ್ಷಿಸಿ

ಜಮ್ಮು ಮತ್ತು ಕಾಶ್ಮೀರ ಪ್ಯಾರಾ ಕ್ರಿಕೆಟ್ ತಂಡದ ನಾಯಕ ಅಮೀರ್ ಹುಸೇನ್ ಲೋನ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ಎರಡು ತೋಳುಗಳಿಲ್ಲದ ಕ್ರಿಕೆಟಿಗ ಅಮೀರ್ ಅವರು ಕ್ರಿಕೆಟ್ ಆಡಲು ಅಪ್ರತಿಮ ಸಂಕಲ್ಪವನ್ನು ತೋರಿಸುವ ವೀಡಿಯೊವನ್ನು ಸುದ್ದಿ ಸಂಸ್ಥೆ ಎಎನ್‌ಐ (ANI) ಹಂಚಿಕೊಂಡ ನಂತರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸ್ಪೂರ್ತಿದಾಯಕ ದೃಶ್ಯಗಳನ್ನು ಗಮನಿಸಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ … Continued

ಭಾರತ ವಿರೋಧಿ ಪ್ರಚಾರ ; ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ತೆಹ್ರೀಕ್-ಎ-ಹುರಿಯತ್ (TeH) ಅನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಕೇಂದ್ರ ಸರ್ಕಾರ ಭಾನುವಾರ ಘೋಷಿಸಿದೆ. ಮೃತ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಈ ಹಿಂದೆ ಈ ಸಂಘಟನೆಯ ನೇತೃತ್ವ ವಹಿಸಿದ್ದರು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ನಿಷೇಧಿತ … Continued

ಶ್ರೀರಾಮ ಹಿಂದೂಗಳಿಗೆ ಮಾತ್ರವಲ್ಲ, ಇಡೀ ಜಗತ್ತಿಗೆ ಸೇರಿದವನು : ಫಾರೂಕ್ ಅಬ್ದುಲ್ಲಾ

ಅಯೋಧ್ಯಾ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಹಕರಿಸಿದ ಜನರನ್ನು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಅಭಿನಂದಿಸಿದ್ದಾರೆ. ರಾಮಮಂದಿರದ ಮಹಾ ಉದ್ಘಾಟನೆ ಜನವರಿ 22 ರಂದು ನಡೆಯಲಿದೆ. “ಅಯೋಧ್ಯೆ ರಾಮ ಮಂದಿರವು ಉದ್ಘಾಟನೆಗೊಳ್ಳಲಿದೆ. ದೇವಾಲಯಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸಲು ಬಯಸುತ್ತೇನೆ. ಅದು ಈಗ ಸಿದ್ಧವಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ … Continued

ಮುಸ್ಲಿಂ ಲೀಗ್ ಜಮ್ಮು- ಕಾಶ್ಮೀರ (ಮಸರತ್ ಆಲಂ ಬಣ) ಸಂಘಟನೆ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ (ಮಸರತ್ ಆಲಂ ಬಣ) (ಎಂಎಲ್‌ಜೆಕೆ-ಎಂಎ) ಅನ್ನು ಬುಧವಾರ ನಿಷೇಧಿತ ಸಂಘಟನೆ ಎಂದು ಸರ್ಕಾರ ಘೋಷಿಸಿದೆ. ಈ ಸಂಘಟನೆಯ ಸದಸ್ಯರು ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿರುವುದು ಕಂಡುಬಂದಿದೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಸಂಘಟನೆ ಜನರನ್ನು ಪ್ರಚೋದಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸಂವಿಧಾನ ಪೀಠ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ. ಆರ್ಟಿಕಲ್ 370 … Continued

ಕುಲ್ಗಾಮ್ ಎನ್‌ಕೌಂಟರ್: ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಒಟ್ಟು ಐವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ದೋಷಾರೋಪಣೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ. ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಕುಲ್ಗಾಮ್ ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜಂಟಿ ತಂಡದಿಂದ … Continued