ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಸದಂತೆ ಸಚಿವ ಸೋಮಣ್ಣ ಸೂಚನೆ

ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ (Railway Recruitment Board) ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ (RRB Exam) ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೈಲ್ವೆ ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು (Mangalsutra) ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ … Continued

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆರೋಪಿತ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಶನಿವಾರ ಆದೇಶಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ … Continued

ಜನಿವಾರ ತೆಗೆಸಿದ ಪ್ರಕರಣ : ಪ್ರಾಂಶುಪಾಲ, ಸಿಬ್ಬಂದಿ ಕೆಲಸದಿಂದ ವಜಾ

ಬೀದರ : ನಗರದ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಸುಚಿವ್ರತ್‌ಗೆ ಜನಿವಾರ ತೆಗೆಯಲು ಬಲವಂತ ಮಾಡಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಕರ್ತವ್ಯ ಲೋಪ ಎಸಗಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ … Continued

‌ ಸಿಇಟಿ ಪರೀಕ್ಷಾ ಕೇಂದ್ರ ಸಿಬ್ಬಂದಿ ಜನಿವಾರ ತೆಗೆಸಿದ್ದು ತಪ್ಪು; ಇಂಥ ನಿಯಮ ಇಲ್ಲ: ಕೆಇಎ ಸ್ಪಷ್ಟನೆ

ಬೆಂಗಳೂರು: ಬೀದರ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ (CET 2025) ಬರೆಯಲು ಹೋದ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಕ್ರಮದ ವಿರುದ್ಧ ಬ್ರಾಹ್ಮಣ ಸಮುದಾಯದಿಂದ ವ್ಯಾಪಕ ಆಕ್ರೋಶವಾದ ಬೆನ್ನಲ್ಲೇ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕೆಇಎ (KEA)ಅಂತಹ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ … Continued