ಗದಗ : ಜಾತ್ರೆಯಲ್ಲಿ ಅವಘಡ ; ಬ್ರೇಕ್ ಡ್ಯಾನ್ಸ್ ತೊಟ್ಟಿಲು ಮುರಿದುಬಿದ್ದು ಹಲವರಿಗೆ ಗಾಯ

ಗದಗ : ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿನ  ಬ್ರೇಕ್ ಡ್ಯಾನ್ಸ್  ತೊಟ್ಟಿಲು ಕಟ್ ಆಗಿ ಕೆಳಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಭಾನುವಾರ ರಾತ್ರಿ 9ರ ಸುಮಾರಿಗೆ ನಡೆದಿದೆ ಎನ್ನಲಾಗಿದ್ದು, ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ತೊಟ್ಟಿಲಿನಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಸದ್ದು ಕೇಳಿದೆ. … Continued

ಹಾಸನ : ಚಿಕ್ಕತಿರುಪತಿ ಜಾತ್ರೆಯಲ್ಲಿ ಆಹಾರ ಸೇವಿಸಿ 50 ಭಕ್ತರು ಅಸ್ವಸ್ಥ

ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೆಕಲ್ ತಿರುಪತಿ ಗ್ರಾಮದಲ್ಲಿ, ಚಿಕ್ಕತಿರುಪತಿ ಎಂದೇ ಖ್ಯಾತವಾಗಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಜಾತ್ರಾ (Jatre) ಮಹೋತ್ಸವದ ವೇಳೆ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಸಂಸ್ಥೆಯೊಂದರಿಂದ ವಿತರಿಸಲಾದ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಭಕ್ತರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ 7:30ರ ಸುಮಾರಿಗೆ ಸುಮಾರು 1,500 … Continued

ಸವದತ್ತಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿದ 46 ಮಂದಿ ಅಸ್ವಸ್ಥ

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ, ಕರೆಮ್ಮ ಜಾತ್ರೆಯಲ್ಲಿ ಪ್ರಸಾದ ಸೇವಿಸಿದ್ದ 46 ಭಕ್ತರು ಅಸ್ವಸ್ಥಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಜಾತ್ರೆಯಲ್ಲಿ ಪ್ರಸಾದ, ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದವರಲ್ಲಿ ಏಕಾಏಕಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಅಸ್ತವ್ಯಸ್ಥಗೊಂಡವರನ್ನು ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗಳಲ್ಲಿ ದಾಖಲಿಸಿ … Continued

ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

ಗದಗ: ಜಿಲ್ಲೆಯ ರೋಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಭಾರೀ ಅವಘಡ ಸಂಭವಿಸಿದ್ದು, ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ರೋಣ ಪಟ್ಟಣದ ರಾಜ ಬೀದಿಯಲ್ಲಿ ರಥೋತ್ಸವ ಸಾಗುತ್ತಿದ್ದ ವೇಳೆ ನೂಕು ನುಗ್ಗಲು ಉಂಟಾಗಿ ಏಕಾ ಏಕಿ ಚಕ್ರದಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಯದೇ … Continued