ಪಂಚಮಸಾಲಿ ಪೀಠದಿಂದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಅವರನ್ನು ಪೀಠದಿಂದ ಉಚ್ಚಾಟನೆ ಮಾಡಲಾಗಿದೆ. ಕೂಡಲಸಂಗಮ (Koodala Sangama) ಪಂಚಮಸಾಲಿ ಟ್ರಸ್ಟ್‌ನ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಶ್ರೀಗಳ ಬಗ್ಗೆ ಸಾಕಷ್ಟು ದೂರುಗಳು ಇವೆ. … Continued

ಯತ್ನಾಳ ಉಚ್ಚಾಟನೆ ಆದೇಶ ಏ.10ರೊಳಗೆ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ : ಬಿಜೆಪಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಏಪ್ರಿಲ್‌ 10ರ ಒಳಗೆ ಬಸನಗೌಡ ಪಾಟೀಲ ಯತ್ನಾಳ​ ಅವರ ಉಚ್ಚಾಟನೆ ಮಾಡಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏಪ್ರಿಲ್‌ 13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ​ ಅವರನ್ನು … Continued