ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಕೆ.ಎಚ್‌.ಶ್ರೀನಿವಾಸ ನಿಧನ

ಬೆಂಗಳೂರು : ಮಾಜಿ ಸಚಿವ, ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸ ಕೆ.ಎಚ್‌. ಶ್ರೀನಿವಾಸ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ ಅವರು ಮೊದಲು ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಆನಂತರದಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ನಲ್ಲಿಯೂ ಇದ್ದರು.. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ … Continued

ಬದಲಿ ನಿವೇಶನ ಕೋರಿ ಸಿದ್ದರಾಮಯ್ಯ ಬರೆದಿದ್ದ ‘ಪತ್ರ’ ಬಿಡುಗಡೆ ಮಾಡಿದ ಜೆಡಿಎಸ್‌…!

ಬೆಂಗಳೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿಯೂ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರು ಬದಲಿ ನಿವೇಶನಕ್ಕೆ ಕೋರಿ ಬರೆದಿದ್ದಾರೆ ಎನ್ನಲಾದ ಪತ್ರವೊಂದನ್ನು ಹಂಚಿಕೊಳ್ಳುವ ಮೂಲಕ ಟಾಂಗ್‌ ನೀಡಿದೆ. ಮಾಹಿತಿ ಹಕ್ಕು ಕಾಯ್ದೆಯಡಿ … Continued

ವೀಡಿಯೊ..| ದೆಹಲಿ ಮೆಟ್ರೊ ರೈಲಿನಲ್ಲಿ ದೇವೇಗೌಡ ಪ್ರಯಾಣ ; ಇಂದು ನನ್ನ ಇಚ್ಛೆ ಈಡೇರಿದೆ ಎಂದ ಮಾಜಿ ಪ್ರಧಾನಿ

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಭಾನುವಾರ (ಆಗಸ್ಟ್‌ 4) ದೆಹಲಿ ಮೆಟ್ರೊದಲ್ಲಿ ಪ್ರಯಾಣಿಸಿದರು. 91 ವರ್ಷದ ದೇವೇ ಗೌಡ ಅವರ ಜೊತೆ ದೆಹಲಿ ಮೆಟ್ರೋದ ಹಲವು ಹಿರಿಯ ಅಧಿಕಾರಿಗಳು ಇದ್ದರು. ರೈಲಿನಲ್ಲಿದ್ದ ದೇವೇಗೌಡರು ಪ್ರಯಾಣಿಕರು ಮತ್ತು ಅಧಿಕಾರಿಗಳೊಂದಿಗೆ ಚಿಟ್-ಚಾಟ್ ಮಾಡಿದರು. ದೆಹಲಿಯ ನಾಯಕ ಲೋಕ ಕಲ್ಯಾಣ ಮಾರ್ಗದ ನಿಲ್ದಾಣದಲ್ಲಿ … Continued

ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ; ಕುಮಾರಸ್ವಾಮಿ, ಯಡಿಯೂರಪ್ಪನವರಿಂದ ಚಾಲನೆ

ಬೆಂಗಳೂರು : ಬಿಜೆಪಿ- ಜೆಡಿಎಸ್ ಜಂಟಿಯಾಗಿ ಆಗಸ್ಟ್‌ 3ರಿಂದ ಮೈಸೂರು ಚಲೋ ಪಾದಯಾತ್ರೆ ನಡೆಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಎರಡೂ ಪಕ್ಷಗಳ ಸಂಸದರು, ಶಾಸಕರು ಇದರಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಭ್ರಷ್ಟ, ಹಗರಣಗಳ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ಸೂರಜ್ ರೇವಣ್ಣ ವಿರುದ್ಧ 2ನೇ ಪ್ರಕರಣ ದಾಖಲು

ಹಾಸನ: ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, 2ನೇ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸೂರಜ್ ರೇವಣ್ಣ ವಿರುದ್ಧ ಎರಡನೇ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಸೂರಜ್ ರೇವಣ್ಣ ಅವರ ಆಪ್ತ ನೀಡಿದ ದೂರಿನ ಮೇರೆಗೆ ಪ್ರಕರಣ … Continued

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಜೆಡಿಎಸ್ ಕಾರ್ಯಕರ್ತನೆನ್ನಲಾದ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ಸೂರಜ್‌ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಭಾನುವಾರ ಬೆಳಿಗ್ಗೆ ಹಾಸನದಲ್ಲಿ ಬಂಧಿತರಾದ ಶಾಸಕ ರೇವಣ್ಣ ಅವರ ಪುತ್ರ ಸೂರಜ್‌ ರೇವಣ್ಣ ಅವರನ್ನು ಸಂಜೆ … Continued

ಪರಿಷತ್​ ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ:: 3ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿಗೆ ಗೆಲುವು ; ಕಾಂಗ್ರೆಸ್ಸಿಗೆ ಲಾಭ, ಬಿಜೆಪಿಗೆ ನಷ್ಟ

ಬೆಂಗಳೂರು : ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳು ಸೇರಿದಂತೆ ಒಟ್ಟು ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ೩ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡು ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಕಾಂಗ್ರೆಸ್ … Continued

ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಭರ್ಜರಿ ಗೆಲುವು

ಮೈಸೂರು : ವಿಧಾನ ಪರಿಷತ್ತಿನ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಜೆಡಿಎಸ್-ಬಿಜೆಪಿ ಅಭ್ಯರ್ಥಿ ಜೆಡಿಎಸ್‌ನ ಭೋಜೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಮೊದಲ ಪ್ರಾಶಸ್ತ್ಯ ಮತದಲ್ಲೇ ಭೋಜೇಗೌಡ ಅವರು 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು ಚಲಾವಣೆ ಆಗಿದ್ದು 19479 ಮತಗಳು 18,658 ಮತಗಳು ಸಿಂಧು … Continued

ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಗೆಲುವು, ಕಾಂಗ್ರೆಸ್ಸಿಗೆ ಸೋಲು

ಮೈಸೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ ಎಣಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಸೋಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ವಿವೇಕಾನಂದ ಮೊದಲ ಗೆಲುವು ಸಾಧಿಸಿದ್ದಾರೆ. ಅವರು 4622 ಮತಗಳಿಂದ ಗೆದ್ದಿದ್ದಾರೆ. ಮರಿತಿಬ್ಬೇಗೌಡರು … Continued