ಕಾಂಗ್ರೆಸ್‌ ಸೇರುವುದಾಗಿ ಪ್ರಕಟಿಸಿದ ಆಯನೂರು ಮಂಜುನಾಥ

ಬೆಂಗಳೂರು: ಕಾಂಗ್ರೆಸ್​​ನ ಆಪರೇಷನ್ ಹಸ್ತ ಭಾರೀ ಚರ್ಚೆಯಲ್ಲಿರುವಾಗಲೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದಾಗಿ ಮಾಜಿ ವಿಧಾನ ಪರಿಷತ್‌ ಸದಸ್ಯ ಹಾಗೂ ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಹೇಳಿದ್ದಾರೆ. ಭಾನುವಾರ ಬೆಳಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರನ್ನು ಭೇಟಿಯಾದ ಬಗ್ಗೆ ಮಾಧ್ಯದವರ ಪ್ರಶ್ನೆಗೆ ಉತ್ತರಿಸಿದ ಅವರು, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ … Continued

ಲೋಕಸಭೆ ಚುನಾವಣೆ : ಜೆಡಿಎಸ್-ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ ದೇವೇಗೌಡರು-ಅವರು ಹೇಳಿದ್ದೇನು..?

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯಾಗುವ ಸಾಧ್ಯತೆ ಕುರಿತು ಇದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆ ಎಂಬುದು ಗೊತ್ತಿಲ್ಲ. ಆದರೆ ಜೆಡಿಎಸ್‌ ಸ್ವತಂತ್ರವಾಗಿ … Continued

ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ … Continued

ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನಿಸುವ ಅಗತ್ಯವಿಲ್ಲ: ಕೆ.ಸಿ.ವೇಣುಗೋಪಾಲ

ಬೆಂಗಳೂರು: ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಜೊತೆ ಕೈ ಜೋಡಿಸಬಹುದು. ಜೆಡಿಎಸ್‌ಗೆ ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ಇಂದಿನಿಂದ ಎರಡು ದಿನ ಬೆಂಗಳೂರಲ್ಲಿ ವಿಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಖಾಸಗಿ ಹೊಟೇಲ್‌ನಲ್ಲಿ ಮಾತನಾಡಿರುವ ಅವರು, ಜೆಡಿಎಸ್‌ನವರು ತಮ್ಮ ನಿಲುವು ಏನು ಎಂಬುದನ್ನು ಕಳೆದ … Continued

ಕರ್ನಾಟಕ ವಿಧಾನಸಭೆ ಚುನಾವಣೆ 2023 : ಜೆಡಿಎಸ್-ಎಐಎಂಐಎಂ ಚುನಾವಣಾ ಪೂರ್ವ ಮೈತ್ರಿ ಮಾತುಕತೆ-ಮೈತ್ರಿ ಕಾಂಗ್ರೆಸ್‌ ಆತಂಕ ಹೆಚ್ಚಿಸಲಿದೆಯೇ..?

ಬೆಂಗಳೂರು : ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ, ಅಸಾದುದ್ದೀನ್ ಓವೈಸಿ ಅವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಚುನಾವಣಾ ಪೂರ್ವ ಮೈತ್ರಿ ಕುರಿತು ಜೆಡಿಎಸ್‌ ಜೊತೆ ಮಾತುಕತೆ ನಡೆಸುತ್ತಿದೆ. ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 25 ಸ್ಥಾನಗಳಲ್ಲಿ ಎಐಎಂಐಎಂ ಸ್ಪರ್ಧಿಸಲು ಬಯಸುತ್ತಿದೆ ಎಂದು ಹೇಳಲಾಗಿದೆ. ಇದು ಮುಸ್ಲಿಂ ಬಾಹುಳ್ಯದ ವಿಧಾನಸಭೆ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು … Continued

ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ ಇಂದು ರಾಜೀನಾಮೆ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದ್ದು ಈಗ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ (JDS) ಉಚ್ಛಾಟಿತ ಶಾಸಕ ಎಸ್‌ಆರ್ ಶ್ರೀನಿವಾಸ ಅವರು ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಕುರಿತು ಇಂದು, ಸೋಮವಾರ ತುಮಕೂರಿನಲ್ಲಿ ಮಾತನಾಡಿದ ಶಾಸಕ ಎಸ್.ಆರ್ ಶ್ರೀನಿವಾಸ ಅವರು, ನಾನು ನೋವಿನಿಂದ ಜೆಡಿಎಸ್‌ಗೆ … Continued

ಮಾರ್ಚ್‌ 26ರಂದು ಮೈಸೂರಿನಲ್ಲಿ ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ

ಮೈಸೂರು: ಜೆಡಿಎಸ್‌ನ ಪಂಚರತ್ನ  ಯಾತ್ರೆಯ ಸಮಾರೋಪ ಸಮಾರಂಭ ಮಾರ್ಚ್‌ 26ರಂದು ಮೈಸೂರಿನಲ್ಲಿ ನಡೆಯಲಿದೆ. ಸಮಾವೇಶದಲ್ಲಿ ಸುಮಾರು ಹತ್ತು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದಾದ್ಯಂತ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನತೆಯ ಬೆಂಬಲವನ್ನು ನಾನು ಕಳೆದ 3 ತಿಂಗಳ ರಥಯಾತ್ರೆಯಲ್ಲಿ … Continued

ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಅಭ್ಯರ್ಥಿಗಳ ಬದಲಾವಣೆ ಬಗ್ಗೆ ಮಾತನಾಡಿದ ಕುಮಾರಸ್ವಾಮಿ

ಬೆಂಗಳೂರು : ಚುನಾವಣೆಗೆ ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಆದ್ದರಿಂದ ಎಲ್ಲ ಘೋಷಿತ ಅಭ್ಯರ್ಥಿಗಳು ವೇಗವಾಗಿ ಜನರನ್ನು ತಲುಪುವ ಕೆಲಸ ಮಾಡಬೇಕು. ಯಾರಾದರೂ ಉದಾಸೀನ ಮಾಡಿದರೆ ಅಂಥ ಅಭ್ಯರ್ಥಿಗಳನ್ನು ಬದಲಾವಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಕರೆಯಲಾಗಿದ್ದ ಮೊದಲ ಪಟ್ಟಿಯಲ್ಲಿರುವ 93 … Continued

ಜೆಡಿಎಸ್‌ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದ್ರೆ ಮುಸ್ಲಿಂ ಸಮುದಾಯಕ್ಕೆ ಸಿಎಂ ಸ್ಥಾನ ನೀಡಲು ಚಿಂತನೆ: ಕುಮಾರಸ್ವಾಮಿ

ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡುವ ಮುಕ್ತ ಅವಕಾಶ ಪಕ್ಷದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ತಾಲೂಕಿನ ಕ್ಯಾಲನೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ ಮುಖ್ಯಮಂತ್ರಿ ಆಗಬಹುದೆಂದು ಸಿ.ಎಂ.ಇಬ್ರಾಹಿಂ ಕೂಡ ಹೇಳಿದ್ದಾರೆ. ಈ ರೀತಿ ಚರ್ಚೆ ಮಾಡಲು ಅವಕಾಶ … Continued

ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued