ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಒಳನುಸುಳಲು ಯತ್ನಿಸುತ್ತಿದ್ದ 3 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ಒಳನುಸುಳಲು ಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ, ಪೊಲೀಸ್ ಮತ್ತು ಗುಪ್ತಚರ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ವೇಳೆ ಮೂವರು ಭಯೋತ್ಪಾದಕರು ಒಳನುಸುಳಲು ಯತ್ನಿಸಿದ್ದು, ಅಲರ್ಟ್ ಪಡೆಗಳ ಗಮನಕ್ಕೆ ಬಂದಿದೆ. ಹತ್ಯೆಗೀಡಾದ ಭಯೋತ್ಪಾದಕರ … Continued

ಜಮ್ಮುವಿನ ನರ್ವಾಲ್‌ನಲ್ಲಿ 20 ನಿಮಿಷಗಳ ಅಂತರದಲ್ಲಿ ಅವಳಿ ಸ್ಫೋಟ : 7 ಮಂದಿಗೆ ಗಾಯ

ನರ್ವಾಲ್ : ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸುಮಾರು 20 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸಾರಿಗೆ ನಗರದ ವಾರ್ಡ್ ಸಂಖ್ಯೆ 7ರಲ್ಲಿ ಬೆಳಗ್ಗೆ ಸುಮಾರು 11 ಗಂಟೆಗೆ ಮೊದಲ ಸ್ಫೋಟ ಸಂಭವಿಸಿದೆ. 15ರಿಂದ 20 ನಿಮಿಷಗಳ ನಂತರ ಇನ್ನೊಂದು ಸ್ಫೋಟ ಅದೇ ಪ್ರದೇಶದಲ್ಲಿ ಸಂಭವಿಸಿದೆ. … Continued

ಕಾಶ್ಮೀರದ: ರಾಜೌರಿಯ ಡ್ಯಾಂಗ್ರಿ ಗ್ರಾಮದಲ್ಲಿ ಗುಂಡಿನ ದಾಳಿ: ಮೂವರು ನಾಗರಿಕರು ಸಾವು, 7 ಜನರಿಗೆ ಗಾಯ

ಶ್ರೀನಗರ: ಭಾನುವಾರ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಡ್ಯಾಂಗ್ರಿ ಗ್ರಾಮದಲ್ಲಿ ಗುಂಡಿನ ದಾಳಿಯ ನಂತರ ಮೂವರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡರು. ಮೂಲಗಳ ಪ್ರಕಾರ, ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದು ಸಾವು ನೋವುಗಳಿಗೆ ಕಾರಣವಾಯಿತು. ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆ ಶೋಧ ಕಾರ್ಯಾಚರಣೆ ಆರಂಭಿಸಿದೆ. … Continued

ಭಯೋತ್ಪಾದನೆಗೆ ಧನ ಸಹಾಯ ಪ್ರಕರಣ: ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಶ್ರೀನಗರ: ದಾರುಲ್ ಉಲೂಮ್ ರಹೀಮಿಯಾ ಬಂಡಿಪೋರಾ, ಮೌಲಾನಾ ರೆಹಮತುಲ್ಲಾ ಖಾಸ್ಮಿ ಅವರ ನಿವಾಸ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ದಾಳಿ ನಡೆಸಿದೆ. ಪೂಂಚ್, ರಾಜೌರಿ, ಪುಲ್ವಾಮಾ, ಶೋಪಿಯಾನ್, ಶ್ರೀನಗರ, ಬುದ್ಗಾಮ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಎನ್‌ಐಎಯು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ನೆರವಿನೊಂದಿಗೆ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು … Continued

ಜಮ್ಮು ಮತ್ತು ಕಾಶ್ಮೀರದಲ್ಲಿ ಗುಜ್ಜರ್, ಬಕರ್ವಾಲ್, ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿ: ಅಮಿತ್ ಶಾ ಘೋಷಣೆ

ರಾಜೌರಿ/ಜಮ್ಮು: ಕೋಟಾ ಪ್ರಯೋಜನಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಶಿಫಾರಸು ಮಾಡಿದಂತೆ ಕೇಂದ್ರವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರಕಟಿಸಿದ್ದಾರೆ, ಸರ್ಕಾರದಿಂದ ರಚನೆಯಾದ ಜಿ.ಡಿ. ಶರ್ಮಾ ಆಯೋಗವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ … Continued

ಜಮ್ಮು ಬಸ್‌ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ: ತಪ್ಪಿದ ಅನಾಹುತ

ಜಮ್ಮು: ಜಮ್ಮು ಬಸ್‌ ನಿಲ್ದಾಣದಲ್ಲಿ ೭ಕೆಜಿ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ. ಜನಸಂದಣಿ ಪ್ರದೇಶದಲ್ಲಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಲಾಗಿದ್ದು, ಅನಾಹುತ ತಪ್ಪಿಸಿದಂತಾಗಿದೆ. ಪುಲ್ವಾಮಾ ದಾಳಿಯ ೨ನೇ ವರ್ಷಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯನ್ನು ವಿಫಲಗೊಳಿಸಲಾಗಿದೆ. ನಿರ್ದಿಷ್ಟ ಮಾಹಿತಿಯನ್ನಾಧರಿಸಿ ನಡೆದ ಕಾರ್ಯಚರಣೆಯಲ್ಲಿ ಸ್ಫೋಟಕವನ್ನು ಪತ್ತೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ೨೦೧೯ರ ಫೆಬ್ರವರಿ ೧೪ರಂದು … Continued