ತಮ್ಮ ಮದುವೆಯ ದಿನವೇ ಆತ್ಮಹತ್ಯೆ ಮಾಡಿಕೊಂಡ ಅಕ್ಕ ತಂಗಿ…!

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯ ಮನೈ ಗ್ರಾಮದಲ್ಲಿ ವಿವಾಹವಾಗಬೇಕಿದ್ದ ಇಬ್ಬರು ಸಹೋದರಿಯರು ಮದುವೆಯಾಗುವ ಕೆಲವೇ ಗಂಟೆಗಳ ಮೊದಲು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ದುರ್ದೈವಿಗಳನ್ನು ಶೋಭಾ (25) ಮತ್ತು ವಿಮಲಾ (23) ಎಂದು ಗುರುತಿಸಲಾಗಿದೆ. ಈ ಇಬ್ಬರು ಸಹೋದರಿಯರ ವಿವಾಹವು ಶನಿವಾರ (ಫೆ.21) ನಿಗದಿಯಾಗಿತ್ತು. ಶುಕ್ರವಾರ ರಾತ್ರಿಯವರೆಗೂ … Continued

ಕ್ಯಾನ್ಸರಿನಿಂದ ಉದುರಿದ ವಿದ್ಯಾರ್ಥಿನಿ ಕೂದಲು ; ಸ್ನೇಹಿತೆಗಾಗಿ ತಲೆ ಬೋಳಿಸಿಕೊಂಡ ಶಾಲಾ ವಿದ್ಯಾರ್ಥಿಗಳು-ಶಿಕ್ಷಕರು ; ಹೃದಯಸ್ಪರ್ಶಿ ವೀಡಿಯೊ ವೈರಲ್

ರಾಜಸ್ಥಾನದ ವೀಡಿಯೊವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಪ್ರತಿಯೊಬ್ಬರ ಕಣ್ಣಂಚನ್ನು ತೇವಗೊಳಿಸುವಂತಿದೆ. ಕ್ಯಾನ್ಸರ್‌ನಿಂದಾಗಿ ಕೂದಲು ಕಳೆದುಕೊಂಡು ಮನನೊಂದಿದ್ದ ವಿದ್ಯಾರ್ಥಿನಿಯ ಬೆಂಬಲಕ್ಕೆ ಇಡೀ ಶಾಲೆಯೇ ನಿಂತಿರುವ ಅಪರೂಪದ ಘಟನೆ ವರದಿಯಾಗಿದೆ. ವರದಿಗಳ ಪ್ರಕಾರ, ಈ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಕ್ಯಾನ್ಸರ್ ಚಿಕಿತ್ಸೆಯಿಂದಾಗಿ ತನ್ನ ತಲೆಯ ಕೂದಲನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಳು. ಇದರಿಂದ ತೀವ್ರವಾಗಿ ನೊಂದಿದ್ದ ಆಕೆ, ಖಿನ್ನತೆಗೆ … Continued

3ನೇ ಮಹಡಿಯಿಂದ ಬಿದ್ದರೂ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ ; ವೀಡಿಯೊ ವೈರಲ್‌

ಜೋಧ್ಪುರ : ಮೂರನೇ ಮಹಡಿಯಿಂದ ಬಿದ್ದರೂ 25 ವರ್ಷದ ಒಬ್ಬ ಯುವ ವ್ಯಾಪಾರಿಯೊಬ್ಬರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ರಾಜಸ್ತಾನದ ಜೋಧ್ಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಯುವಕನ ಕಾಲು ಮೂಳೆ ಮುರಿದಿದೆ ಎಂದು ಹೇಳಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆ ಕೆಲದಿನಗಳ … Continued

ಆರ್‌ ಎಸ್‌ ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಆಸ್ಪತ್ರೆಗೆ ದಾಖಲು

ನವದೆಹಲಿ : ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೋಮವಾರ ಜೋಧಪುರದ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ಅವರಿಗೆ “ಸ್ವಲ್ಪ ಅನಾನುಕೂಲ” ಅನಿಸಿತು ಎಂದು ಸಂಘಟನೆಯ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಹೊಸಬಾಳೆ ಈಗ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಸುನೀಲ ಅಂಬೇಕರ ಎಕ್ಸ್‌ … Continued

ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಸಮ್ಮತಿ

ನವದೆಹಲಿ: ಕೇಂದ್ರ ಸರ್ಕಾರ ಗಣೇಶ ಹಬ್ಬದ ವೇಳೆ ʼಹುಬ್ಬಳ್ಳಿ-ಜೋಧಪುರʼ ನೇರ ರೈಲು ಸಂಚಾರಕ್ಕೆ ಅಸ್ತು ಎಂದು ಹೇಳಿದೆ. ʼಹುಬ್ಬಳ್ಳಿ-ಜೋಧಪುರʼ ವಿಶೇಷ ರೈಲು ಸೆಪ್ಟೆಂಬರ್‌ ತಿಂಗಳಿನಿಂದಲೇ ಸಂಚಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಪ್ರಸ್ತುತ ವಿಶೇಷ ರೈಲಾಗಿರುವ ಇದನ್ನು ಮುಂದಿನ ದಿನಗಳಲ್ಲಿ ನಿಯತಕಾಲಿಕವಾಗಿ ಪರಿವರ್ತನೆಗೊಳಿಸುವ ಬಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ … Continued

ವರದಕ್ಷಿಣೆ ಕಿರುಕುಳ; ಪುಟ್ಟ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ

ಜೋಧಪುರ: ರಾಜಸ್ಥಾನದ ಜೋಧಪುರ ಜಿಲ್ಲೆಯಲ್ಲಿ ಶುಕ್ರವಾರ ಉಪನ್ಯಾಸಕಿಯೊಬ್ಬರು ತಮ್ಮ ಮೂರು ವರ್ಷದ ಮಗಳ ಜೊತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳು ಯಶಸ್ವಿ ಸ್ಥಳದಲ್ಲೇ ಸಾವಿಗೀಡಾದರೆ, ಆಕೆಯ ತಾಯಿ ಹಾಗೂ ಉಪನ್ಯಾಸಕಿ ಸಂಜು ಬಿಷ್ಣೋಯ ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವರದಕ್ಷಿಣೆಗಾಗಿ ಪತಿ ಮತ್ತು ಅತ್ತೆ-ಮಾವ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಆತ್ಮಹತ್ಯೆ ಪತ್ರವನ್ನು … Continued