ಬಾಂಗ್ಲಾದಲ್ಲಿ ಹಸೀನಾ ಪದಚ್ಯುತಿಗೆ ಕ್ಲಿಂಟನ್‌ ದಂಪತಿ-ಸೊರೊಸ್ ಹಣಕಾಸು ನೆರವು, ಬೈಡನ್‌ ಬೆಂಬಲ : ಮಾಜಿ ಸಚಿವನ ಸ್ಫೋಟಕ ಹೇಳಿಕೆ

ಕಳೆದ ಆಗಸ್ಟ್ 2024 ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಿದ ಆಡಳಿತ ಬದಲಾವಣೆಯ ಹಿಂದೆ ಅಮೆರಿಕದ ‘ಡೀಪ್ ಸ್ಟೇಟ್’ (Deep State) ಕೈವಾಡವಿದೆ ಎಂಬ ವದಂತಿಗಳು ಬಹಳ ಕಾಲದಿಂದ ಹರಿದಾಡುತ್ತಿದ್ದವು. ಇದೀಗ, ಬಾಂಗ್ಲಾದೇಶದ ಮಾಜಿ ಸಚಿವ ಮೊಹಿಬುಲ್ ಹಸನ್ ಚೌಧರಿ ಅವರು ಈ ಆರೋಪವನ್ನು ದೃಢಪಡಿಸಿದ್ದಾರೆ. ಜುಲೈ-ಆಗಸ್ಟ್ 2024 ರ ಬಿಕ್ಕಟ್ಟಿನ … Continued

3 ದಿನಗಳ ಅಮೆರಿಕ ಭೇಟಿಗೆ ಪ್ರಧಾನಿ ಮೋದಿ ಪಯಣ ; ಅಜೆಂಡಾದಲ್ಲಿ ಏನಿದೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದ್ದಾರೆ, ಅಲ್ಲಿ ಅವರು ಸೆಪ್ಟೆಂಬರ್ 21 ರಂದು ನಾಲ್ಕನೇ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ. ಕ್ವಾಡ್ ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ತವರು ವಿಲ್ಮಿಂಗ್ಟನ್‌ನಲ್ಲಿ ಆಯೋಜಿಸಿದ್ದಾರೆ. ಅವರ ಮೂರು ದಿನಗಳ ಅಮೆರಿಕ … Continued

ಅಮೆರಿಕದ ಅಧ್ಯಕ್ಷೀಯ ಸ್ಪರ್ಧೆಯಿಂದ ಹಿಂದೆ ಸರಿದ ಜೋ ಬೈಡನ್; ಭಾರತೀಯ ಮೂಲದ ಕಮಲಾ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ

ವಾಷಿಂಗ್ಟನ್: ಅಮೆರಿಕದ ಹಾಲಿ ಅಧ್ಯಕ್ಷ ಜೋ ಬೈಡನ್ ಅವರು ಮುಂಬರುವ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ, ಹಾಲಿ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರೆಟ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನಕ್ಕೆ ಹೆಸರಿಸಿದ್ದಾರೆ. ಈ ಕುರಿತು ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಬೈಡನ್, “ಮರು ಚುನಾವಣೆಯನ್ನು ಬಯಸುವುದು ನನ್ನ … Continued

ಜಿ 20ಯಲ್ಲಿ ಪ್ರಧಾನಿ ಮೋದಿ ಜೊತೆ ಮಾನವ ಹಕ್ಕುಗಳು, ಮುಕ್ತ ಮಾಧ್ಯಮದ ಬಗ್ಗೆ ಪ್ರಸ್ತಾಪಿಸಿದ್ದಾಗಿ ವಿಯೆಟ್ನಾಂನಲ್ಲಿ ಹೇಳಿದ ಅಮೆರಿಕ ಅಧ್ಯಕ್ಷ ಜೋ ಬೈಡನ್‌

ನವದೆಹಲಿ: ದೆಹಲಿಯಲ್ಲಿ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಾನವ ಹಕ್ಕುಗಳನ್ನು ಗೌರವಿಸುವುದು ಮತ್ತು ಮುಕ್ತ ಮಾಧ್ಯಮ ಸೇರಿದಂತೆ ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ದೆಹಲಿಯಲ್ಲಿ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ವಿಯೆಟ್ನಾಂಗೆ ಅಧಿಕೃತ ಭೇಟಿ ವೇಳೆ ಪತ್ರಿಕಾಗೋಷ್ಠಿಯಲ್ಲಿ ಬೈಡನ್‌ … Continued

‘ನಾನು ನಿರಾಸೆಗೊಂಡಿದ್ದೇನೆ, ಆದರೆ…”: ದೆಹಲಿಯ ಜಿ20 ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅನುಪಸ್ಥಿತಿ ಬಗ್ಗೆ ಅಮೆರಿಕ ಅಧ್ಯಕ್ಷ ಬೈಡನ್‌

ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಈ ವಾರ ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳದಿರುವ ಬಗ್ಗೆ ಅವರು ನಿರಾಸೆ ವ್ಯಕ್ತಪಡಿಸಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಬೈಡನ್‌ ಸೆಪ್ಟೆಂಬರ್ 7 ರಂದು ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ಶ್ವೇತಭವನವು … Continued