ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಜೊಯಿಡಾ ; ಕರಡಿ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ

ಕಾರವಾರ : ಮೇಯಲು ಬಿಟ್ಟಿದ್ದ ಎಮ್ಮೆಗಳನ್ನು ಕರೆದುಕೊಂಡು ವಾಪಸ್‌ ಬರುತ್ತಿದ್ದಾಗ ವೃದ್ಧನ ಮೇಲೆ ಕರಡಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕೋಳಗದ್ದದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ವೃದ್ಧನನ್ನು ಕೋಳಗದ್ದ ಗ್ರಾಮದ ನಿವಾಸಿ ವಿಠೋ ಪಾಟೀಲ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡಂಚಿನಲ್ಲಿ ಮೇಯಲು … Continued

ಜೊಯಿಡಾ ; ವೃದ್ಧೆ ಮೇಲೆ ಚಿರತೆ ದಾಳಿ

ಕಾರವಾರ : ಮುಂಜಾನೆ ಶೌಚಕ್ಕೆಂದು ಹೊರಬಂದ ವೃದ್ಧೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಪಣಸೋಲಿ ವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. 70 ವರ್ಷದ ವೃದ್ಧೆ ಸುಶೀಲಾ ದೇಸಾಯಿ ಪ್ರತಿರೋಧ ತೋರಿ ಪಾರಾಗಿ ಬಂದಿದ್ದಾರೆ ಎಂದು ಹೇಳಲಾಗಿದೆ. ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದ ನಿವಾಸಿ ಸುಶೀಲಾ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued

ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆಯ 2 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.26) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಜೊಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ … Continued

ಜೊಯಿಡಾ: ಶಾಲಾ ಪ್ರವಾಸದ ಬಸ್​ ಪಲ್ಟಿ ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಶಾಲಾ ಪ್ರವಾಸದ ಬಸ್​ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್‌ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಖಾಸಗಿ ಬಸ್​ನಲ್ಲಿ ಪ್ರವಾಸಕ್ಕೆ ಬಂದಿದ್ದ ಚಿತ್ರದುರ್ಗ … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ಬೊಲೆರೊ ಡಿಕ್ಕಿ: ಮೂವರು ಮಹಿಳೆಯರು ಸಾವು

ಕಾರವಾರ : ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ (55), ದುರ್ಗೆ ಕೋಲ್ಸೇಕರ್ (55), ತುಳಸಿ ಗಾವಡಾ (50) ಎಂದು ಗುರುತಿಸಲಾಗಿದೆ. ಬಿಪಿನ್‌ ತಾಳ್ವೆ ಎಂಬ … Continued